ಎಲ್ಲ ಸಮುದಾಯ ಅಭಿವೃದ್ಧಿಗೆ ಪ್ರಯತ್ನ
Team Udayavani, Oct 9, 2019, 12:41 PM IST
ಗೋಕಾಕ: ಕ್ಷೇತ್ರದ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ತಮ್ಮ ಅಧಿಕಾರಾವಧಿಯಲ್ಲಿ ಶ್ರಮಿಸುತ್ತಿರುವುದಾಗಿ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ನಗರದ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ ತಾಲೂಕಿನ ಎಸ್‌ಸಿ-ಎಸ್‌ಟಿ ಜನರ ಕುಂದು ಕೊರತೆ ಹಾಗೂ ಹಿತರಕ್ಷಣೆಯ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಎಲ್ಲ ಸಮುದಾಯಗಳಿಗೆ ಅಧಿ ಕಾರ ನೀಡಿ ಸಮುದಾಯಗಳ ಪ್ರಗತಿಗಾಗಿ ಶ್ರಮಿಸಲಾಗುತ್ತಿದೆ ಎಂದು ತಿಳಿಸಿದರು.
ಎಸ್‌ಸಿ/ಎಸ್‌ಟಿ ಜನಾಂಗದ ಮುಖಂಡರು ಎಲ್ಲ ಸಮುದಾಯಗಳ ಮುಖಂಡರೊಂದಿಗೆ ಸಹಕಾರ ಮನೋಭಾವದಿಂದ ನಡೆದು ತಮ್ಮ ಸಮುದಾಯದ ಅಭಿವೃದ್ಧಿಗೂ ಮಹತ್ವ ನೀಡಿ ಕಾರ್ಯಪ್ರವೃತ್ತರಾಗಬೇಕು. ಇಲ್ಲಿಯ ಜನರ ಮನದಾಳವನ್ನು ಅರಿತು ಅವರ ಸಮಸ್ಯೆಗೆ ಸ್ಪಂದಿಸಿದ್ದೇನೆ. ಅನ್ಯಾಯ ಮಾಡಿದವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ. ಕ್ಷೇತ್ರದ ಜನತೆ ಸಂಘಟಿತರಾಗಿ ಯಾವುದೇ ಉಹಾ-ಪೋಹಗಳಿಗೆ ಕಿವಿಕೊಡದೇ ಮುಂಬರುವ ಉಪಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ವಿನಂತಿಸಿದರು.
ಇದೇ ಸಂದರ್ಭದಲ್ಲಿ ಗೋಕಾಕ ಮತಕ್ಷೇತ್ರದ ಜಿ.ಪಂ ವ್ಯಾಪ್ತಿಯ ಎಸ್‌ಸಿ/ಎಸ್‌ಟಿ ಜನಾಂಗದ ಹಿತರಕ್ಷಣಾ ಸಮಿತಿ ಸದಸ್ಯರ ಆಯ್ಕೆ ಪ್ರಕ್ರಿಯೆ ಜರುಗಿ, ಮಮದಾಪೂರ ಜಿ.ಪಂನಿಂದ ವೀರಭದ್ರ ಮೈಲನ್ನವರ, ಖನಗಾಂವದಿಂದ ರಾಮಪ್ಪ ಮರೆಪ್ಪಗೋಳ, ಅಕ್ಕತಂಗೇರಹಾಳದಿಂದ ಅಜೀತ ಹರಿಜನ, ಶಿಂದಿಕುರಬೇಟದಿಂದ ಓಂಕಾರ ಬಂಡಿವಡ್ಡರ ಹಾಗೂ ಗೋಕಾಕ ಶಹರದಿಂದ ಗೋವಿಂದ ಕಳ್ಳಿಮನಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಡ್ಡೆಪ್ಪ ತೋಳಿನವರ, ಸುರೇಶ ಸನದಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.