ಚುನಾವಣಾ ವೆಚ್ಚ -ನಿಗಾ ವಹಿಸಲು ಸೂಚನೆ
Team Udayavani, Nov 23, 2019, 1:13 PM IST
ಬೆಳಗಾವಿ: ಗೋಕಾಕ ಮತಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕರಾದ ಡಾ. ಸುಧಾಂಶು ರಾಯ್ ಶುಕ್ರವಾರ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಕೇಂದ್ರ(ಎಂಸಿಎಂಸಿ)ಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.
ನಗರದ ವಾರ್ತಾ ಭವನದಲ್ಲಿ ಆರಂಭಿಸಲಾಗಿರುವ ಜಿಲ್ಲಾ ಮಟ್ಟದ ಮಾಧ್ಯಮ ಕಣ್ಗಾವಲು ಕೇಂದ್ರದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಪಡೆದುಕೊಂಡ ಅವರು, ಚುನಾವಣಾ ವೆಚ್ಚದ ದೃಷ್ಟಿಯಿಂದ ನಿಗಾ ವಹಿಸುವಂತೆ ಸೂಚನೆ ನೀಡಿದರು. ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಚುನಾವಣಾ ಪ್ರಚಾರದ ಮೇಲೆ ನಿಗಾವಹಿಸುತ್ತಿರುವ ಬಗ್ಗೆ ಪರಿಶೀಲಿಸಿದ ಅವರು, ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದ ಪ್ರತಿಯೊಂದು ವರದಿಯನ್ನು ನಿಗದಿತ ಮಾದರಿಯಲ್ಲಿ ಪ್ರತಿದಿನ ತಮಗೆ ನೀಡಬೇಕು ಎಂದರು.
ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ವಾರ್ತಾ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಕೇಂದ್ರದ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿದರು.
ಇದಕ್ಕೂ ಮುನ್ನ ಮಾದರಿ ನೀತಿ ಸಂಹಿತೆ,ಸಿವಿಜಿಲ್, ದೂರು ನಿರ್ವಹಣಾ ಕೋಶ, ಅಬಕಾರಿ, ಪೊಲೀಸ್ ಸೇರಿದಂತೆ ವಿವಿಧ ತಂಡಗಳ ನೋಡಲ್ ಅಧಿಕಾರಿಗಳ ಸಭೆ ನಡೆಸಿದ ಅವರು, ಉಪ ಚುನಾವಣೆ ಅತ್ಯಂತ ಸೂಕ್ಷ್ಮವಾಗಿರುವುದರಿಂದ ಚುನಾವಣಾ ಖರ್ಚು-ವೆಚ್ಚಗಳ ಬಗ್ಗೆ ತೀವ್ರ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದರು. ಜಿಲ್ಲಾ ವೀಕ್ಷಕ ನೋಡಲ್ ಅಧಿಕಾರಿ ಈರಣ್ಣ ಚಂದರಗಿ, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಜಗದೀಶ್ ರೂಗಿ, ಅಬಕಾರಿ ಉಪ ಆಯುಕ್ತರಾದ ಬಸವರಾಜ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.