ವಿದ್ಯುತ್ ಕಂಬವೇರಿ ಮಹಿಳಾ ಕಾರ್ಪೋರೇಟರ್ ಪ್ರತಿಭಟನೆ
Team Udayavani, Oct 31, 2018, 6:00 AM IST
ಬೆಳಗಾವಿ: ಇಲ್ಲಿಯ ಸದಾಶಿವ ನಗರದ ಸ್ಮಶಾನದಲ್ಲಿ ವಿದ್ಯುತ್ ಕಂಬಗಳ ಮೇಲೆ ಹೈಮಾಸ್ಟ್ ದೀಪ ಅಳವಡಿಸಲಾಗಿಲ್ಲ. ಹೀಗಾಗಿ, ಕತ್ತಲಲ್ಲಿ ಅಂತ್ಯಸಂಸ್ಕಾರ ನಡೆಸುವಂತಾಗಿದೆ ಎಂದು ಆರೋಪಿಸಿ ನಗರಪಾಲಿಕೆಯ 41ನೇ ವಾರ್ಡ್ ಸದಸ್ಯೆ ಸರಳಾ ಹೇರೇಕರ
ಮಂಗಳವಾರ ವಿದ್ಯುತ್ ಕಂಬವೇರಿ ಪ್ರತಿಭಟನೆ ನಡೆಸಿದರು. ಕಂಬದ ಮೇಲೇರಿ ನಿಂತ ಅವರು, ಅಧಿಕಾರಿಗಳು ಇಲ್ಲಿ ಬರುವವರೆಗೂ ಕೆಳಗಿಳಿಯುವುದಿಲ್ಲ ಎಂದು ಪಟ್ಟು ಹಿಡಿದರು.
ಎಪಿಎಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು. ಮಹಿಳಾ ಪೊಲೀಸರು ಕಂಬದ ಮೇಲೇರಿ ಹೇರೇಕರ ಅವರನ್ನು ಕೆಳಗಿಳಿಯುವಂತೆ ಮನವಿ ಮಾಡಿದರೂ ಇದಕ್ಕೆ ಒಪ್ಪಲಿಲ್ಲ. ಪಾಲಿಕೆ ಅಧಿಕಾರಿಗಳು ನಮ್ಮ ವಾರ್ಡ್‌ನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಈ ಭಾಗದಲ್ಲಿ ವಿದ್ಯುತ್ ಇಲ್ಲದ್ದಕ್ಕೆ ಸರಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ರಾತ್ರಿಯಾದರೆ ಜನ ಹೊರಗೆ ಬರುವುದು ಕಷ್ಟಕರವಾಗಿದೆ. ಸ್ಮಶಾನ
ಭೂಮಿಯಲ್ಲಿಯೂ ವಿದ್ಯುತ್ ದೀಪ ಇಲ್ಲದೇ ಕತ್ತಲಲ್ಲಿ ಅಂತ್ಯಸಂಸ್ಕಾರ ನಡೆಸಬೇಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ, ಪಾಲಿಕೆ ಆಯುಕ್ತ ಶಶಿಧರ ಕುರೇರ ಆಗಮಿಸಿ, ವಾರ್ಡ್ ಪರಿಶೀಲಿಸಿ ಆಗಬೇಕಾದ ಕಾಮಗಾರಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದಾಗ, ಹೆರೇಕರ ಅವರು ಪ್ರತಿಭಟನೆ ಹಿಂಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.