Electrict Shock: ತಂದೆ ಮಗ ಸಾವು: ಹೆಸ್ಕಾಂ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿ
ತಂದೆ ಉಳಿಸಲು ಹೋಗಿ ಮಗನೂ ಸಾವು: ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ
Team Udayavani, Sep 1, 2023, 4:11 PM IST
ಬೈಲಹೊಂಗಲ: ಮನೆಯ ಮುಂದಿನ ವಿದ್ಯುತ್ ಕಂಬಕ್ಕೆ ಅರ್ಥಿಂಗ್ ಸಲುವಾಗಿ ಹಾಕಲಾಗಿದ್ದ ತಂತಿ ಸ್ಪರ್ಶಿಸಿ ಇಬ್ಬರು ಮೃತಪಟ್ಟ ದುರ್ಘಟನೆ ತಾಲೂಕಿನ ಉಡಿಕೇರಿ ಗ್ರಾಮದ ಇಂದ್ರಾನಗರದಲ್ಲಿ ಸೆ.1ರ ಶುಕ್ರವಾರ ಬೆಳಗ್ಗೆ ನಡೆದಿದೆ.
ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿರುವ ಉಡಿಕೇರಿ ಗ್ರಾಮದ ಪ್ರಭಾಕರ ಮಲ್ಲೇಶಪ್ಪ ಹುಂಬಿ (75) ಹಾಗೂ ಅವರ ಮಗ ಮಂಜುನಾಥ ಪ್ರಭಾಕರ ಹುಂಬಿ (32) ಮೃತಪಟ್ಟವರು.
ಉಡಿಕೇರಿ ಗ್ರಾಮದ ಪ್ರಭಾಕರ ಮಲ್ಲೇಶಪ್ಪ ಹುಂಬಿ ಇಂದು ಬೆಳಗ್ಗೆ ತಮ್ಮ ಮನೆ ಮುಂದಿರುವ ಹುಲ್ಲಿನ ಕಸ ಕೀಳುವಾಗ ಅದೇ ಜಾಗದಲ್ಲಿದ್ದ ವಿದ್ಯುತ್ ಕಂಬದ ಗಯಿ ತಂತಿ ಸ್ಪರ್ಶಿಸಿ ಕೆಳಗೆ ಬಿದ್ದು ನರಳಾಡುತ್ತಿದ್ದಾಗ ಇದನ್ನು ಕಂಡ ಅವರ ಮಗ ತಂದೆಯನ್ನು ಬದುಕಿಸಲು ಧಾವಿಸಿ ಬಂದಿದ್ದು, ಆಗ ಅವರಿಗೂ ವಿದ್ಯುತ್ ಪ್ರವಹಿಸಿ ಕಂಬದಿಂದ ದೂರಕ್ಕೆ ಹೋಗಿ ಬಿದ್ದಿದ್ದಾರೆ.
ಈ ಪರಿಣಾಮ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದು, ಮಗ ಮಂಜುನಾಥ ಹುಂಬಿ ಇನ್ನೂ ಉಸಿರಾಡುತ್ತಿರುವುದನ್ನು ಕಂಡ ಗ್ರಾಮಸ್ಥರು ಬೆಳವಡಿ ಸರಕಾರಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರೂ ಕೂಡ ಅಸುನೀಗಿದ್ದಾರೆ ಎನ್ನಲಾಗಿದೆ.
ತುಂಡಾದ ಹೈ ಟೆನ್ಶನ್ ಸರ್ವಿಸ್ ವಿದ್ಯುತ್ ತಂತಿಯನ್ನು ಗಯಿ ತಂತಿಗೆ ಸುತ್ತಿರುವುದೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ವಿದ್ಯುತ್ ಕಂಬಗಳ ಸರ್ವೀಸ್ ಲೈನ್‌ನ ಉಳಿದ ತಂತಿಯನ್ನು ಅರ್ಥಿಂಗ್ ಗಯಿ ತಂತಿಗೆ ಸುತ್ತಿ ಎರಡು ಅಮಾಯಕ ಜೀವಗಳನ್ನು ಬಲಿ ಪಡೆದ ಹೆಸ್ಕಾಂ ಬೆಳವಡಿ ವಿಭಾಗದ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಯಿ ತಂತಿಗೆ ಸರ್ವೀಸ್ ತಂತಿ ಸುತ್ತಿರುವುದನ್ನು ತೆಗೆಯಲು ಗ್ರಾಮ ಪಂಚಾಯಿತಿ ಮೂಲಕ ಹೆಸ್ಕಾಂನವರಿಗೆ ಅನೇಕ ಬಾರಿ ವಿನಂತಿಸಿದರೂ ನಿರ್ಲಕ್ಷ್ಯ ವಹಿಸಿದ್ದರಿಂದ ಕೊನೆಗೂ ಎರಡು ಜೀವಗಳು ಬಲಿಯಾಗಿವೆ.
ಘಟನೆಗೆ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸರಕಾರದಿಂದ ಮೃತ ಪಟ್ಟವರ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಿಸಬೇಕು ಎಂದು ಉಡಿಕೇರಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಎಸ್ಪಿ ಭೇಟಿ: ವಿದ್ಯುತ್ ದುರಂತದಲ್ಲಿ ತಂದೆ- ಮಗ ಸಾವಿನ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಂಜೀವ್ ಪಾಟೀಲ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಲ್ಲಿ ಹೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತವೆ. ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಹೊಣೆ ಮಾಡಿ ದೂರು ದಾಖಲಿಸಿಕೊಳ್ಳುವಂತೆ ಸ್ಥಳದಲ್ಲಿದ್ದ ಸಿಪಿಐಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಹಾಗೂ ಶಾಸಕರೊಂದಿಗೆ ಮಾತನಾಡಿದ್ದು, ಸಂತ್ರಸ್ತ ಕುಟುಂಬಕ್ಕೆ ಸರಕಾರದ ಸಹಾಯ ಒದಗಿಸಲು ಕ್ರಮ ಕೈಗೊಳ್ಳಲು ಭರವಸೆ ನೀಡಿದ್ದಾರೆ. ಹೆಸ್ಕಾಂನ ಒಂದು ತಂಡ ಗ್ರಾಮಕ್ಕೆ ಬರಲಿದ್ದು, ಜೋತು ಬಿದ್ದ ವಿದ್ಯುತ್ ತಂತಿ ತುಂಡು ಮಾಡಿ ಸರಿಪಡಿಸಲಿದ್ದಾರೆ. ಗ್ರಾಮದಲ್ಲಿ ಎಲ್ಲ ಕಡೆಗಳಲ್ಲಿ ವಿದ್ಯುತ್ ತಂತಿಗಳನ್ನು ದುರಸ್ತಿ ಮಾಡಲಿದ್ದು, ಗ್ರಾಮಸ್ಥರು ಅವರಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.
ದೊಡವಾಡ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.