ಪರಿಸರ ಕಾಳಜಿ ಸದಾ ಇರಲಿ: ರಮೇಶ
ಒಂದು ಮರ ಕಡಿದರೆ ಹಲವು ಜೀವ ನಾಶ ಮಾಡಿದಂತೆ! ಒಬ್ಬಬರು ಒಂದು ಸಸಿ ನೆಡಿ
Team Udayavani, Jun 28, 2021, 6:46 PM IST
ಗೋಕಾಕ: ಪ್ರತಿಯೊಬ್ಬರೂ ಒಂದೊಂದು ಸಸಿ ನೆಡುವ ಮೂಲಕ ಎಲ್ಲರೂ ಪರಿಸರಕ್ಕೆ ನಮ್ಮದೇ ಆದ ಆದ ಕೊಡುಗೆ ನೀಡೋಣ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ನಗರದ ಯೋಗಿಕೊಳ್ಳ ರಸ್ತೆಯಲ್ಲಿ ಬಿಜೆಪಿ ನಗರ ಘಟಕ ಹಾಗೂ ರೈತ ಮೋರ್ಚಾ ವತಿಯಿಂದ 200 ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿ, ಪರಿಸರ ನಾಶದಿಂದ ಪ್ರಕೃತಿ ವಿಕೋಪಗಳು ಜರುಗುತ್ತವೆ. ಪ್ರಕೃತಿಯ ರಕ್ಷಣೆ ಮಾಡಬೇಕೆಂದರು. ಒಂದು ಗಿಡವನ್ನು ನೆಟ್ಟು ಬೆಳೆಸಿದರೆ ಒಂದು ಜೀವ ಉಳಿಸಿದಂತೆ. ಒಂದು ಮರ ಕಡಿದರೆ ಹಲವು ಜೀವನಾಶ ಮಾಡಿದಂತೆ. ಹೀಗಾಗಿ ಪರಿಸರದ ಬಗೆಗಿನ ಕಾಳಜಿ ಕೇವಲ ಪರಿಸರ ದಿನಾಚರಣೆಯಂದು ಮಾತ್ರ ಇರದೇ ಪ್ರತಿ ದಿನವು ಪರಿಸರ ದಿನಾಚರಣೆಯಾಗಬೇಕು ಎಂದರು.
ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಜಿಪಂ ಮಾಜಿ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ರೈತ ಮೋರ್ಚಾ ನಗರಾಧ್ಯಕ್ಷ ಸುರೇಶ ಪತ್ತಾರ, ಲಕ್ಷ್ಮಣ ತಳ್ಳಿ, ಮಹಾಂತೇಶ ಜನ್ಮಟ್ಟಿ, ರಾಜೇಶ್ವರಿ ಒಡೆಯರ, ಕಿರಣ ಡಮಾಮಗರ, ಸೀನು ಗೌಡ, ಸಚೀನ ಕಮಟೇಕರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.