ಪ್ರವಾಹ ಸಂತ್ರಸ್ತರಿಗೆ ಈಶ್ವರಪ್ಪ ಭರವಸೆ
Team Udayavani, Sep 7, 2019, 4:33 PM IST
ಬೆಳಗಾವಿ : ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ನೀಡಲಾಗಿದೆ. ಸಂಪೂರ್ಣ ಸಮೀಕ್ಷೆಯಾದ ತಕ್ಷಣವೇ ಮನೆ ನಿರ್ಮಾಣ ಸೇರಿದಂತೆ ಶಾಶ್ವತ ಪರಿಹಾರವನ್ನು ಒದಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಜಿಲ್ಲೆಯ ಪ್ರವಾಹ ಬಾಧಿತ ಸ್ಥಳಗಳಿಗೆ ಶನಿವಾರ ಭೇಟಿ ನೀಡಿದ ಅವರು, ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಸೇತುವೆಯ ಬಳಿ ಕುಡಿಯುವ ನೀರು ಸರಬರಾಜು ಯೋಜನೆ ಹಾಗೂ ನದಿಪಾತ್ರದಲ್ಲಿ ಬೆಳೆಹಾನಿಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾವುದೇ ದಾಖಲಾತಿಗಳನ್ನು ಕೇಳದೇ ಪ್ರವಾಹ ಬಾಧಿತ ಎಲ್ಲ ಕುಟುಂಬಗಳಿಗೂ ಹತ್ತು ಸಾವಿರ ರೂಪಾಯಿ ತಾತ್ಕಾಲಿಕ ಪರಿಹಾರ ನೀಡಲಾಗಿದೆ ಎಂದರು.
ಮನೆಗಳು ಕುಸಿದಿರುವ ಬಗ್ಗೆ ಅಧಿಕಾರಿಗಳು ಸಮೀಕ್ಷೆ ನಡೆಸುತ್ತಿದ್ದಾರೆ. ಸಮೀಕ್ಷೆಯ ವರದಿ ಆಧರಿಸಿ ಸಂತ್ರಸ್ತ ಕುಟುಂಬಗಳಿಗೆ ಮನೆ ನಿರ್ಮಾಣ ಸೇರಿದಂತೆ ಶಾಶ್ವತ ಪರಿಹಾರ ಕಲ್ಪಿಸುವ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು. ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಹದಿನೈದು ದಿನಗಳಲ್ಲಿ ಸಂಪೂರ್ಣ ವರದಿ ನೀಡಲು ಜಿಲ್ಲಾ ಪಂಚಾಯತ ಸಿಇಓ ಗಳಿಗೆ ಸೂಚನೆ ನೀಡಲಾಗಿದೆ. ಮಾಹಿತಿಯನ್ನು ಪಡೆದುಕೊಂಡ ಬಳಿಕ ಸಮರ್ಪಕ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಪ್ರವಾಹದಿಂದ ಉಂಟಾಗಿರುವ ಹಾನಿಯ ಬಗ್ಗೆ ವಿವರಿಸಿದರು. ಬೆಳೆಹಾನಿಯಿಂದ ರೈತರು ಸಂಕಷ್ಟದಲ್ಲಿದ್ದು, ಅವರಿಗೆ ತಕ್ಷಣ ಪರಿಹಾರ ಒದಗಿಸುವ ಅಗತ್ಯವಿದೆ. ಅದೇ ರೀತಿ ಪ್ರತಿವರ್ಷ ಪ್ರವಾಹದಿಂದ ತತ್ತರಿಸುತ್ತಿರುವ ಗ್ರಾಮಗಳಿಗೆ ಶಾಶ್ವತ ಯೋಜನೆಯನ್ನು ರೂಪಿಸಲು ಕ್ರಮಕೈಗೊಳ್ಳಬೇಕಿದೆ ಎಂದು ಸಚಿವರಿಗೆ ಮಾಹಿತಿಯನ್ನು ನೀಡಿದರು.
ಮಾಂಜರಿ ಗ್ರಾಮದ ಅಂಬೇಡ್ಕರ್ ಕಾಲನಿ ಮತ್ತಿತರ ಪ್ರದೇಶದಲ್ಲಿ ಸಂಚರಿಸಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಅಲ್ಲಿನ ಜನರ ಅಹವಾಲುಗಳನ್ನು ಆಲಿಸಿದರು. ಮನೆಗಳು ಸಂಪೂರ್ಣವಾಗಿ ಶಿಥಿಲಗೊಂಡಿರುವುದರಿಂದ ಕೂಡಲೇ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದರು. ಸರ್ಕಾರಕ್ಕೆ ಪರಿಸ್ಥಿತಿಯ ಸಂಪೂರ್ಣ ಅರಿವು ಇದ್ದು, ಸಮೀಕ್ಷೆ ಮುಗಿದ ಬಳಿಕ ಮನೆ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಚಿಕ್ಕೋಡಿ-ಸದಲಗಾ ಶಾಸಕ ಗಣ್ಣೇಶ್ ಹುಕ್ಕೇರಿ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ ಉಪಸ್ಥಿತರಿದ್ದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತ ಡಾ.ಆರ್.ವಿಶಾಲ್, ಕುಡಿಯುವ ನೀರು ಸರಬರಾಜು ಯೋಜನೆಗಳ ಕುರಿತು ಸಚಿವರಿಗೆ ವಿವರಿಸಿದರು. ನಂತರ ಸಚಿವರು ಪ್ರವಾಹ ಬಾಧಿತ ಯಡೂರ, ಶಿರಗುಪ್ಪಿ ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿ, ಹಾನಿಯನ್ನು ಪರಿಶೀಲಿಸಿದರು.
ಸುವರ್ಣ ಸೌಧದಲ್ಲಿ ರಾಜ್ಯಮಟ್ಟದ ಸಭೆ:
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೆ. 8 ಹಾಗೂ 9 ರಂದು ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ ಸಿಇಓ ಗಳು, ಜಿಪಂ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಸ್ಥಾಯಿ ಸಮಿತಿಯ ಸದಸ್ಯರ ಸಭೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಸಚಿವ ಈಶ್ವರಪ್ಪ ತಿಳಿಸಿದರು. ಎರಡು ದಿನಗಳ ರಾಜ್ಯಮಟ್ಟದ ಸಭೆಯಲ್ಲಿ ಪ್ರವಾಹ ಬಾಧಿತ ಕುಟುಂಬಗಳಿಗೆ ಮನೆ ನಿರ್ಮಾಣ, ಶುದ್ಧ ಕುಡಿಯುವ ನೀರು ಒದಗಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.