ಕಿತ್ತೂರು ಕ್ಷೇತ್ರದಲ್ಲಿ ಕೈಗಾರಿಕೆ ರಫ್ತು ವಲಯ ಕೇಂದ್ರ ಸ್ಥಾಪಿಸಿ
Team Udayavani, Aug 22, 2020, 3:01 PM IST
ಬೈಲಹೊಂಗಲ: ಕೈಗಾರಿಕೆ ರಫ್ತು ವಲಯ ಕೇಂದ್ರ ಸ್ಥಾಪನೆ ತೀರ ಅಗತ್ಯವಾಗಿದ್ದು, ತಮ್ಮ ಕಿತ್ತೂರು ಮತಕ್ಷೇತ್ರದಲ್ಲಿ ಇದನ್ನು ತೆರೆಯುವಂತೆ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಜಿಲ್ಲಾಧಿಕಾರಿ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆದ ರಫ್ತು ಪ್ರಮೋಷನ್ ಸಮಿತಿ ಸಭೆಯ ನಂತರ ಶಾಸಕರ ಕಾರ್ಯಾಲಯದಿಂದ ಈ ಕುರಿತು ಹೇಳಿಕೆ ನೀಡಿರುವ ಶಾಸಕರು ತಮ್ಮ ಬೇಡಿಕೆಗೆ ಸಕಾರಾತ್ಮಕ ಪ್ರತಿಕ್ರಿಯೆ ಬಂದಿರುವುದಾಗಿ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ 4ರ ಬಳಿ ಇರುವ ಪ್ರದೇಶದಲ್ಲಿ ಕೈಗಾರಿಕಾ ರಫ್ತು ವಲಯ ಸ್ಥಾಪನೆಗೆ ಸ್ಥಳ ಪ್ರಾಶಸ್ತ್ಯವಾಗಿದೆ. ಇಲ್ಲಿ ರಫ್ತು ಕೇಂದ್ರ ಸ್ಥಾಪಿಸಿದರೆ ಅನುಕೂಲತೆಗಳು ಹೆಚ್ಚು ಎಂದು ಶಾಸಕರು ಸಭೆಯ ನಂತರ ತಾವು ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಯುವಕರಿಗೆ ಉದ್ಯೋಗಾವಕಾಶ: ಕೇಂದ್ರ ಸ್ಥಾಪನೆಯಿಂದ ರಫ್ತು ಸಾಮರ್ಥ್ಯದೊಂದಿಗೆ ಹೆಚ್ಚಿನ ಆದಾಯ ಪಡೆಯಲು ಸಾಧ್ಯ. ಇದರ ಜೊತೆಗೆ ಯುವಕರಿಗೆ ಉದ್ಯೋಗಾವಕಾಶ ದೊರಕಿಸಿಕೊಡಲು ಸಾಧ್ಯ. ಈ ವಿಷಯ ತಾವು ಸಭೆಯಲ್ಲಿ ಪ್ರಸ್ತಾಪಿಸಿರುವುದಾಗಿ ಹಾಗೂ ಸರ್ಕಾರದ ಗಮನಕ್ಕೆ ತಂದಿರುವುದಾಗಿ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಸಲಹೆಯಂತೆ ರಚಿಸಿದ ರಫ್ತು ಪ್ರಮೋಷನ್ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದಾಗಿ ಶಾಸಕರು ತಿಳಿಸಿದರು.
ಶಾಲೆ ಶತಮಾನೋತ್ಸವಕ್ಕೆ ಕಾಣಿಕೆ : ತಾವು ಕಲಿತ ಶಾಲೆಯಲ್ಲಿ ಕೆಲ ವರ್ಷಗಳ ಹಿಂದೆ ಗುರುವಂದನೆ ಕಾರ್ಯಕ್ರಮ ನಡೆಸಿ ರಾಜ್ಯದ ಗಮನ ಸೆಳೆದಿದ್ದ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಈಗ ಇದೇ ಶಾಲೆ ಶತಮಾನೋತ್ಸವಕ್ಕೆ ವಿಶೇಷ ಕಾಣಿಕೆ ನೀಡಲು ಮುಂದಾಗಿದ್ದಾರೆ. ನಗರದ ಶಹಾಪುರದಲ್ಲಿರುವ ಮೀರಾಪುರ ಗಲ್ಲಿಯ ಚಿಂತಾಮಣರಾವ್ ಶಾಲೆಯಲ್ಲಿ ಅಭಯ ಪಾಟೀಲ ಕಲಿತಿದ್ದು ಶತಮಾನೋತ್ಸವ ಸಂಭ್ರಮದಲ್ಲಿರುವ ಶಾಲೆ ಅಭಿವೃದ್ಧಿಗೆ ಎರಡೂವರೆ ಕೋಟಿ ರೂ. ಅನುದಾನ ವೆಚ್ಚ ಮಾಡಿದ್ದಾರೆ. ಇದೇ ವರ್ಷ ನಡೆಯಲಿರುವ ಶಾಲೆ ಶತಮಾನೋತ್ಸವ ಕಾರ್ಯಕ್ರಮ ಅರ್ಥಪೂರ್ಣಗೊಳಿಸಲು ಅಭಯ ಪಾಟೀಲ ನಿರ್ಧರಿಸಿದ್ದಾರೆ. ಶುಕ್ರವಾರ ಶಾಲೆಗೆ ಭೇಟಿ ನೀಡಿದ ಶಾಸಕರು ಶತಮಾನೋತ್ಸವ ಆಚರಣೆ ಕುರಿತು ಶಿಕ್ಷಕರ ಜೊತೆ ಚರ್ಚೆ ನಡೆಸಿದರಲ್ಲದೆ 1.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶಾಲೆ ಸಭಾಗೃಹದ ಅಭಿವೃದ್ಧಿಗೆ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.