ಸೈನಿಕ ತರಬೇತಿಗೆ ಶೀಘ್ರ ಕೇಂದ್ರ ಸ್ಥಾಪನೆ
ಯುವಕರ ಅನುಕೂಲಕ್ಕಾಗಿ ಸೌಲಭ್ಯ ಕಲ್ಪಿಸಲು ಶಾಸಕ ಸತೀಶ-ಡಾ| ನಿಂಬಾಳಕರ್ ಭರವಸೆ
Team Udayavani, Aug 31, 2020, 4:05 PM IST
ಯಮಕನಮರಡಿ: ಪೊಲೀಸ್, ಸೇನೆ ಸೇರುವ ಇಚ್ಛೆಯುಳ್ಳ ಜಿಲ್ಲೆಯ ಹಾಗೂ ಮತಕ್ಷೇತ್ರದ ಯುವಕರಿಗೆ ಉಚಿತ ತರಬೇತಿ ನೀಡಲು ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ವ್ಯಾಪ್ತಿಯಲ್ಲಿ 10 ಎಕರೆ ಜಮೀನಿನಲ್ಲಿ ಒಂದು ತರಬೇತಿ ಕೇಂದ್ರವನ್ನು ತೆರೆದು ಮಾಜಿ ಸೈನಿಕರಿಂದ ತರಬೇತಿ ನೀಡಲಾಗುವುದು ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
ಅವರು ರವಿವಾರ ಹುಕ್ಕೇರಿ ತಾಲೂಕಿನ ಬರಗನಾಳ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಗ್ರಾಮೀಣ ಅಭಿವೃದ್ಧಿ ಸಂಘ ಹಾಗೂ ಶ್ರೀ ಅಕ್ಕಮಹಾದೇವಿ ಮಹಿಳಾ ಗ್ರಾಮೀಣ ಅಭಿವೃದ್ಧಿ ಸ್ವಸಹಾಯ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಸಂಘಟನೆಯು ಕೇವಲ ತಮ್ಮ ಪ್ರತಿನಿಧಿಗಳಿಗೆ ಮಾತ್ರ ಸೀಮಿತವಾಗದೆ ಇತರಿಗೂ ಕೂಡ ಅನುಕೂಲ ನೀಡಲು ಮುಂದೆ ಬರಬೇಕು. ಸರಕಾರಿ ಯೋಜನೆಗಳ ಲಾಭ ಪಡೆದು ಮಾದರಿ ಸಂಘವಾಗಿ ಹೊರಹೊಮ್ಮಬೇಕು. ಮಹಿಳಾ ಸಂಘಕ್ಕೆ 5ಲಕ್ಷ ರೂ.ಗಳಲ್ಲಿ ಹೊಸ ಅಡುಗೆ ಕೊಣೆಯನ್ನು ಮಂಜೂರು ಮಾಡಲಾಗಿದೆ. ಸತೀಶ ಫೌಂಡೇಶನ್ ಸಹಯೋಗದಲ್ಲಿ 110ಹಳ್ಳಿಗಳಿಗೆ 10 ಸಾವಿರ ಖುರ್ಚಿ ಹಾಗೂ ಮೈಕ್ ಸೆಟ್ ನೀಡಲಾಗುವುದು. ಮಳೆಗಾಲದಲ್ಲಿ ಪಾಶ್ಚಾಪೂರ-ಕುಂದರಗಿ ಸೇತುವೆ ಮುಳುಗಡೆ ಆಗುತ್ತಿದ್ದು, ಅದನ್ನು ಎತ್ತರಿಸಲು ಹೆಚ್ಚುವರಿ ಅನುದಾನ ನೀಡಲಾಗಿದೆ. ಅಲ್ಲಿ ಇನ್ನೊಂದು ಹೊಸ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಲಾಗುವುದು. ಮತಕ್ಷೇತ್ರದಲ್ಲಿ 20ಕ್ಕೂ ಹೆಚ್ಚು ಬ್ಯಾರೇಜ್, 30ಕ್ಕೂ ಹೆಚ್ಚು ಕೆರೆಗೆ ನೀರು ತುಂಬಿಸುವ ಕಾರ್ಯ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕುಂದರಗಿಯ ಶ್ರೀ ಅಮರೇಶ್ವರ ದೇವರು, ಚಿಕ್ಕಲದಿನ್ನಿಯ ಅದೃಶ್ಯ ಶಿವಾಚಾರ್ಯ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಜಿಪಂ ಸದಸ್ಯರು, ತಾಪಂ ಸದಸ್ಯರು, ಸಂಘದ ಸದಸ್ಯರು, ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.