ಚೌಕಿದಾರನ ಸುತ್ತಲೂ ಇರೋರೆಲ್ಲ ಚೋರರು
Team Udayavani, Apr 22, 2019, 2:17 PM IST
ರಾಯಬಾಗ: ರೈತ, ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವಿರೋಧಿ ನರೇಂದ್ರ ಮೋದಿಯ ಬಿಜೆಪಿ ಕೋಮುವಾದಿ ಪಕ್ಷಕ್ಕೆ ಯಾರು ಕೂಡಾ ಮತ ನೀಡಬಾರದು. ಕೋಮುವಾದಿ ಬಿಜೆಪಿ ಪಕ್ಷವನ್ನು ಸೋಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪಟ್ಟಣದ ಮಹಾವೀರ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಒಬ್ಬ ಸುಳ್ಳುಗಾರ. ಕಳೆದ ಐದು ವರ್ಷದ ಅವಧಿಯಲ್ಲಿ ಗುರುತರವಾದ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ಜನರಿಗೆ ನೀಡಿದ ಭರವಸೆ ಈಡೇರಿಸಿಲ್ಲ. ಹೀಗಾಗಿ ನರೇಂದ್ರ ಮೋದಿ ಪ್ರಧಾನಿಯಾಗಲು ಯೋಗ್ಯವಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ರೈತರ ಸಾಲಮನ್ನಾ, ಕಪ್ಪು ಹಣ ತರದೆ ನರೇಂದ್ರ ಮೋದಿಯವರು ಶ್ರೀಮಂತ ಉದ್ಯಮಿಗಳನ್ನು ಮತ್ತಷ್ಟು ಶ್ರೀಮಂತಗೊಳಿಸಿದ್ದಾರೆ. ನಾನೊಬ್ಬ ಚೌಕಿದಾರ್ ಎಂದು ಹೇಳುತ್ತಾ ದೇಶದ ಜನರನ್ನು ಮೂರ್ಖರನ್ನಾಗಿ ಮಾಡಿದ್ದಾರೆ. ಚೌಕಿದಾರನ ಸುತ್ತಮುತ್ತ ಇರುವುರೆಲ್ಲರೂ ಚೋರರಿದ್ದಾರೆ ಎಂದು ವ್ಯಂಗ್ಯವಾಡಿದರು.
ರಾಯಬಾಗ ಮತಕ್ಷೇತ್ರಗಳಲ್ಲಿ ಕೆರೆ ತುಂಬುವ ಯೋಜನೆಯ 39 ಕೆರೆಗಳಿಗೆ 92 ಕೋಟಿ ರೂ. ಮಂಜೂರು ಮಾಡಿದ್ದು, ನಾನು ಮುಖ್ಯಮಂತ್ರಿಯಾದ ಅವಧಿಯಲ್ಲಿ ಎಂದು ಹೇಳಿದ ಅವರು, ದೇಶದಲ್ಲಿ ಅಭಿವೃದ್ಧಿಯಾಗಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಹೀಗಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಅವರಿಗೆ ಮತ ನೀಡಿ ಭಾರಿ ಅಂತರದಿಂದ ಅವರನ್ನು ಗೆಲ್ಲಿಸಬೇಕು ಎಂದು ಹೇಳಿದರು.
ಈ ಭಾಗದ ಪ್ರಭಾವಿ ನಾಯಕರಾದ ವಿ.ಎಲ್. ಪಾಟೀಲ ಹಾಗೂ ಎಸ್.ಆರ್.ಬಾನೆ ಅವರನ್ನು ನೆನಪಿಸಿಕೊಂಡು ಅವರೊಂದಿಗಿನ ರಾಜಕೀಯ ಒಡನಾಟ ಸ್ಮರಿಸಿಕೊಂಡರು. ಜಿಲ್ಲಾ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮಾಜಿ ಶಾಸಕ ಎಸ್.ಬಿ. ಘಾಟಗೆ, ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ, ಜಿಲ್ಲಾಧ್ಯಕ್ಷೆ ತೇಜಶ್ವಿನಿ ನಾಯಿಕವಾಡಿ, ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಈರಗೌಡ ಪಾಟೀಲ, ಅಮಿತ ಘಾಟಗೆ, ಸಂಜು ಬಾನೆ, ಧೂಳಗೌಡ ಪಾಟೀಲ, ಅರ್ಜುನ ನಾಯಿಕವಾಡಿ, ಸದಾಶಿವ ದೇಶಿಂಗೆ, ಮಹಾವೀರ ಮೋಹಿತೆ, ರಾಜು ಶಿರಗಾಂವೆ, ಬಿ.ಎನ್. ಬಂಡಗಾರ, ಕುಂತಿನಾಥ ಮಗದುಮ್ಮ, ಸುಕುಮಾರ ಕಿರಣಗಿ, ಅಪ್ಪಾಸಾಬ ಕುಲಗುಡೆ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.