ಶಾಲಾ-ಕಾಲೇಜುಗಳಿಗೆ ಅನುದಾನ ವಿಸ್ತರಿಸಿ
Team Udayavani, Nov 3, 2019, 3:47 PM IST
ಸವದತ್ತಿ: ಖಾಸಗಿ ಅನುದಾನ ರಹಿತ ಶಾಲಾ-ಕಾಲೇಜುಗಳಿಗೆಅನುದಾನ ವಿಸ್ತರಿಸಬೇಕೆಂದು ಆಗ್ರಹಿಸಿ ಶನಿವಾರ ಕರ್ನಾಟಕ ರಾಜ್ಯ ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿಗಳ ಮತ್ತು ನೌಕರರ ಹೋರಾಟ ಸಮನ್ವಯ ಸಮಿತಿಯಿಂದ ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಸಮಿತಿ ಮುಖಂಡ ಎಮ್.ಎಸ್. ಕಲಾಲ ಮಾತನಾಡಿ, ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿನ ನೌಕರರ ಬದುಕು ಅತಂತ್ರ ಸ್ಥಿತಿ ತಲುಪಿದೆ. ಕಡಿಮೆ ವೇತನದಿಂದ ಜೀವನ ನಡೆಸುವುದು ಕಷ್ಟವಾಗಿದೆ. ಅನುದಾನವಿಲ್ಲದೇ ಅದೆಷ್ಟೋ ಖಾಸಗಿ ಕನ್ನಡ ಮಾದ್ಯಮ ಶಾಲೆಗಳು ಮುಚ್ಚುವ ಸ್ಥಿತಿಗೆ ಬಂದಿವೆ. ಸರಕಾರಿ ಕನ್ನಡ ಶಾಲೆಗಳು ಅಳಿವಿನಂಚಿಗೆ ತಲುಪಿ ಕನ್ನಡ ಭಾಷೆ ಕಡೆಗಣಿಸುವಂತಹ ಸ್ಥಿತಿ ನಿರ್ಮಾಣವಾಗಿದೆ. ಅದಕ್ಕಾಗಿ ಸರಕಾರ ಕೂಡಲೇ ಈ ಕುರಿತು ಕ್ರಮವಹಿಸಿ ಕನ್ನಡ ಶಾಲೆ ಮತ್ತು ಕನ್ನಡ ಭಾಷೆಯ ಉಳಿವಿಗೆ ಒತ್ತು ನೀಡಬೇಕೆಂದು ಆಗ್ರಹಿಸಿದರು.
1995 ನಂತರದ ಅನುದಾನ ರಹಿತ ಕನ್ನಡ ಶಾಲೆಗಳಿಗೂ ಅನುದಾನ ವಿಸ್ತರಿಸಬೇಕು. ಈಗಾಗಲೇ ಸರಕಾರ ಜಾರಿಗೊಳಿಸಿರುವ ಎನ್.ಪಿ.ಎಸ್ ಯೋಜನೆಯನ್ನು ರದ್ದು ಮಾಡಬೇಕು. ಕಾಲ್ಪನಿಕ ವೇತನ ಬಡ್ತಿ ಜಾರಿಯಾಗಬೇಕು. ಶಿಕ್ಷಕರ ಮತ್ತು ಮಕ್ಕಳ ಅನುಪಾತವನ್ನು 1:30 ರಿಂದ 1:50 ಕ್ಕೇರಿಸಿ ಎಲ್ಲರೂ ಸಹಜ ಜೀವನ ನಡೆಸಲು ಅನುಕೂಲ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಬಸವರಾಜ ತಳವಾರ, ಬಸಪ್ಪ ಜೋಗಿಹಳ್ಳಿ, ಜ್ಞಾನೇಶ್ವರ ಕೊಪ್ಪದ, ಐ.ಎಸ್.ಹೊರಗಿನಮಠ, ಆರ್.ಎಸ್.ಪಾಟೀಲ, ಎನ್.ಬಿ. ಮಠ, ಎ.ಆರ್. ಶಿರಸಂಗಿ, ವೀರೇಶ ಹಿರೇಮಠ ಸೇರಿದಂತೆ ಪ್ರಮುಖರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.