ಜಿಲ್ಲೆಯಲ್ಲಿ ಯೋಜನೆ ಸಫಲವಾದರೆ ರಾಜ್ಯಾದ್ಯಂತ ವಿಸ್ತರಣೆ
1.50 ಕೋಟಿ ವೆಚ್ಚದಲ್ಲಿ ತೂಕ ಕಡಿಮೆ ಇರುವ ಮಕ್ಕಳಿಗೆ ಉಚಿತ ಪೌಷ್ಟಿಕ ಆಹಾರ ವಿತರಣೆ: ಸಚಿವೆ ಜೊಲ್ಲೆ
Team Udayavani, May 14, 2020, 2:00 PM IST
ಅಗ್ರೋ ಕ್ರಾಪ್ ಕಂಪನಿ ವತಿಯಿಂದ ನೀಡಿದ ಪೌಷ್ಟಿಕ ಆಹಾರದ ಚಾಕಲೇಟ್ ಗಳನ್ನು ಚಿಕ್ಕೋಡಿಯಲ್ಲಿ ಮನೆ ಮನೆಗಳಿಗೆ ತೆರಳಿ ಸಚಿವೆ ಶಶಿಕಲಾ ಜೊಲ್ಲೆ ವಿತರಿಸಿದರು.
ಚಿಕ್ಕೋಡಿ: ಹೈದ್ರಾಬಾದನ ಅಗ್ರೋಕ್ರಾಪ್ ಕಂಪನಿಯು ಅಂಗನವಾಡಿಗೆ ದಾಖಲಾದ ಕಡಿಮೆ ತೂಕದ ಮಕ್ಕಳಿಗೆ 1.50 ಕೋಟಿ ರೂ. ವೆಚ್ಚದಲ್ಲಿ ಉಚಿತವಾಗಿ ಪೌಷ್ಟಿಕ ಆಹಾರ ನೀಡುತ್ತಿದ್ದು, 3ರಿಂದ 6 ವರ್ಷದ ಬೆಳಗಾವಿ ಜಿಲ್ಲೆಯ ಮಕ್ಕಳಿಗೆ ಪ್ರಾಯೋಗಿಕವಾಗಿ ವಿತರಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಬುಧವಾರ ಚಿಕ್ಕೋಡಿ ನಗರದ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ಸಭಾಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ
ಪೌಡರ್ ವಿತರಿಸಿ ಮಾತನಾಡಿದ ಅವರು, ಇಂದು ಶಿಶುಗಳಿಗೆ ಅಪೌಷ್ಟಿಕತೆ ಎನ್ನುವುದು ಬಹುದೊಡ್ಡ ಕಂಟಕವಾಗಿದ್ದು, ಇದನ್ನು ಹೋಗಲಾಡಿಸಲು ಪ್ರಾಯೋಗಿಕವಾಗಿ ಬೆಳಗಾವಿ
ಜಿಲ್ಲೆಯಲ್ಲಿ ಪೌಡರ್ ಉಚಿತವಾಗಿ ವಿತರಿಸಲು ಕಂಪನಿ ಮುಂದಾಗಿದ್ದು, ಒಳ್ಳೆಯ ಫಲಿತಾಂಶ ಬಂದರೆ ಈ ಯೋಜನೆಯನ್ನು ರಾಜ್ಯಾದ್ಯಂತ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಮೊದಲ ಹಂತದಲ್ಲಿ ಬೆಳಗಾವಿ, ಶಿವಮೋಗ್ಗ, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ ವಿತರಿಸಲಾಗುತ್ತದೆ ಎಂದರು. ಸಂಸದ ಅಣ್ಣಸಾಹೇಬ ಜೊಲ್ಲೆ ಮಾತನಾಡಿ, ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಬಿಸಿಲು, ಮಳೆ ಲೆಕ್ಕಿಸದೆ ದುಡಿಯುತ್ತಿರುವ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಜೊಲ್ಲೆ ಉದ್ಯೋಗ ಸಮೂಹದಿಂದ 7000 ಛತ್ರಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಮಾತನಾಡಿದರು. ರಾಜ್ಯ ಸೌಹಾರ್ದ ಸಹಕಾರಿ ಉಪಾಧ್ಯಕ್ಷ ಜಗದೀಶ ಕವಟಗಿಮಠ, ತಹಶೀಲ್ದಾರ ಸುಭಾಷ ಸಂಪಗಾವಿ, ಸಿಪಿಐ ಆರ್. ಆರ್. ಪಾಟೀಲ, ಬೀರೇಶ್ವರ ಸಹಕಾರಿ ಅಧ್ಯಕ್ಷ ಜಯಾನಂದ ಜಾಧವ, ಉಪಾಧ್ಯಕ್ಷ ಸಿದ್ರಾಮ ಗಡದೆ, ಸಂಜು ಅರಗೆ, ಮಹೀಂದ್ರಾ ಕಂಪನಿಯ ಸಿದ್ದಾರ್ಥ, ಸಂಜಯ ಅಡಕೆ, ಸಿಡಿಪಿಒ ದೀಪಾ ಕಾಳೆ ಉಪಸ್ಥಿತರಿದ್ದರು. ಬಸವಪ್ರಸಾದ ಜೊಲ್ಲೆ ಸ್ವಾಗತಿಸಿದರು. ಜಂಟಿ ನಿರ್ದೇಶಕ ಬಸವರಾಜ ವರವಟ್ಟಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.