ಬೆಳಗಾವಿ ಎಸ್ ಪಿ ಹೆಸರಲ್ಲಿ ನಕಲಿ ಇನ್ಸ್ಟ್ರಾಗ್ರಾಂ ಖಾತೆ: ಹಣ ಕೇಳುತ್ತಿದ್ದಾರೆ ಖದೀಮರು
Team Udayavani, Sep 24, 2022, 11:27 AM IST
ಬೆಳಗಾವಿ: ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಅವರ ಹೆಸರಿನಲ್ಲಿ ನಕಲಿ ಇನ್ಸ್ಟ್ರಾಗ್ರಾಂ ಖಾತೆ ತೆರೆದು ಹಣ ಕೇಳುತ್ತಿರುವ ಪ್ರಸಂಗ ನಡೆದಿದೆ. ಈ ಬಗ್ಗೆ ಎಚ್ಚರ ವಹಿಸುವಂತೆ ಎಸ್ ಪಿ ಸಂಜೀವ ಪಾಟೀಲ ಮನವಿ ಮಾಡಿದ್ದಾರೆ.
ಎಸ್ ಪಿ ಸಂಜೀವ ಪಾಟೀಲ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸ್ನೇಹಿತರಿಗೆ, ಪರಿಚಯಸ್ಥರಿಗೆ ಹಣ ಕೇಳಲಾಗುತ್ತಿದೆ. ಈವರೆಗೆ ಅನೇಕರಿಗೆ ಹಣ ಕೇಳಿ ಗೂಗಲ್ ಪೇ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಈ ಬಗ್ಗೆ ಎಸ್ ಪಿ ಸಂಜೀವ ಪಾಟೀಲ ಅವರ ಗಮನಕ್ಕೆ ವಿಷಯ ಬಂದಿದ್ದು, ಕೂಡಲೇ ಇದನ್ನು ತಿರಸ್ಕರಿಸುವಂತೆ ಕೋರಿದ್ದಾರೆ.
ಇದನ್ನೂ ಓದಿ:ಗಗನಕ್ಕೇರಿದ ಘಟ್ಟದ ಹುಲ್ಲಿನ ಬೆಲೆ; ಹೈನುಗಾರರಿಗೆ ಸಂಕಷ್ಟ, ಕರಾವಳಿಯಲ್ಲಿ ಬೈಹುಲ್ಲು ಕೊರತೆ
‘ನನ್ನ ಹೆಸರು ಮತ್ತು ಫೊಟೊ ಬಳಸಿ ಇನ್ಸ್ಟಾಗ್ರಾಂ ನಕಲಿ ಖಾತೆ ತೆರೆದು ಯಾರೋ ಸಾರ್ವಜನಿಕರಲ್ಲಿ ಹಣ ಕೇಳುತ್ತಿದ್ದುದು ಕಂಡು ಬಂದಿದ್ದು ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತಿದೆ. ಸಾರ್ವಜನಿಕರು ಇಂತಹ ಖಾತೆಗಳ ಮನವಿ ತಿರಸ್ಕರಿಸಿ ಈ ಬಗ್ಗೆ ಎಚ್ಚರ ವಹಿಸಿ’ ಎಂದು ಎಸ್ ಪಿ ಸಂಜೀವ ಪಾಟೀಲ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್ ಪತ್ತೆ: ಪೊಲೀಸರಿಂದ ತನಿಖೆ ಚುರುಕು
Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.