ಲಾಕ್‌ಡೌನ್ ಮಾರ್ಗಸೂಚಿ ಪಾಲಿಸಿ: ಅಂಗಡಿ
Team Udayavani, Apr 20, 2020, 5:05 PM IST
ಬೆಳಗಾವಿ: ಕೋವಿಡ್ -19 ಹಿನ್ನೆಲೆಯಲ್ಲಿ ಘೋಷಿಸಲಾಗಿರುವ ಲಾಕ್ ಡೌನ್ ಸಂದರ್ಭದಲ್ಲಿ ಸರಕಾರದ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಮನವಿ ಮಾಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ರವಿವಾರ ಕೋವಿಡ್ -19 ವೈರಸ್ ನಿಯಂತ್ರಣ ಕುರಿತು ಅಲ್ಪಸಂಖ್ಯಾತ ಸಮುದಾಯದ ಮುಖಂಡರ ಸಭೆ ನಡೆಸಿದ ಅವರು, ಸಮಾಜದ ಪ್ರತಿಯೊಬ್ಬರು ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಜೊತೆ ಸಹಕರಿಸಬೇಕು ಎಂದರು. ದೆಹಲಿಯ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಬಂದವರು ಮತ್ತು ಅವರ ಜೊತೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರಲ್ಲಿ ಕೋವಿಡ್ -19 ಸೋಂಕು ಕಂಡುಬಂದಿರುವುದರಿಂದ ಅವರನ್ನು ಕ್ವಾರಂಟೈನ್‌ದಲ್ಲಿ ಇಡಲಾಗಿದೆ. ಈ ವ್ಯಕ್ತಿಗಳು ನಿಗದಿತ ಅವಧಿ ಪೂರ್ಣಗೊಳ್ಳುವವರೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಇದಲ್ಲದೆ ವೈದ್ಯರು ಹಾಗೂ ಸಿಬ್ಬಂದಿಗಳ ಜೊತೆ ಸಹಕಾರ ನೀಡುವಂತೆ ತಿಳಿವಳಿಕೆ ನೀಡಬೇಕು ಎಂದು ಸಚಿವರು ಹೇಳಿದರು.
ಇದೇ ತಿಂಗಳಲ್ಲಿ ಪವಿತ್ರ ರಂಜಾನ್ ಹಬ್ಬ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಮಾಜದ ಜನರು ತಮ್ಮ ಮನೆಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಕೋವಿಡ್-19 ನಿಯಂತ್ರಣಕ್ಕೆ ಸಹಕಾರ ನೀಡಬೇಕು. ಈ ನಿಟ್ಟಿನಲ್ಲಿ ಸಮಾಜದ ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಚಿವರು ಮನವಿ ಮಾಡಿದರು. ಸರಕಾರದ ನಿರ್ದೇಶನದಂತೆ ಪೊಲೀಸರು ಲಾಕ್‌ಡೌನ್ ಸಂದರ್ಭದಲ್ಲಿ ಜನಸಂಚಾರ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಕಾರಣ ಜನರು ಅವರೊಂದಿಗೆ ಕೈಜೋಡಿಸಬೇಕು. ನೀವು ಸಹಕಾರ ನೀಡಿದರೆ ಮಾತ್ರ ಈ ವೈರಸ್‌ನ್ನು ನಾವು ಹೊಡೆದೋಡಿಸಬಹುದು ಎಂದರು.
ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಮಾತನಾಡಿದರು. ಕೋವಿಡ್-19 ನಿಯಂತ್ರಣಕ್ಕೆ ಸಮಾಜದಿಂದ ಸಹಕಾರ ನೀಡಲು ಜನರಿಗೆ ಮನವರಿಕೆ ಮಾಡಲಾಗುವುದು ಎಂದು ಅಲ್ಪಸಂಖ್ಯಾತ ಸಮಾಜದ ಮುಖಂಡರು ಭರವಸೆ ನೀಡಿದರು. ಮುಕ್ತಾರ ಪಠಾಣ, ಬಿ.ಎಸ್. ಲೋಕೇಶಕುಮಾರ ಇದ್ದರು.
ನಿಷೇಧಿತ ಪ್ರದೇಶ ಎಂದು ಘೋಷಿಸಿರುವ ಕಡೆಗಳಲ್ಲಿ ದಿನಸಿ ತರಕಾರಿ ಮತ್ತು ತುರ್ತು ವೈದ್ಯಕೀಯ ಸೇವೆಗಳನ್ನು ಒದಗಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ.ಕಾರಣ ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಬರಬಾರದು. -ಎಸ್.ಬಿ. ಬೊಮ್ಮನಹಳ್ಳಿ, ಡಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ
Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.