ಬೆಳಗಾವಿಯಲ್ಲಿ ರೈತ ಸಂಘಟನೆಗಳ ಕರಾಳ ದಿನ
ಕೇಂದ್ರ ಸರಕಾರದ ಮೂರು ಕಾಯ್ದೆಗಳು ರೈತರ ಪಾಲಿಗೆ ಮರಣ ಶಾಸನ
Team Udayavani, May 27, 2021, 8:33 PM IST
ಬೆಳಗಾವಿ: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ, ಕಾರ್ಮಿಕ ಕಾಯ್ದೆ ವಿರೋದಿಸಿ ವಿವಿಧ ರೈತ ಸಂಘಟನೆಗಳು ಬುಧವಾರ ಬೆಳಗಾವಿಯಲ್ಲಿ ಕರಾಳ ದಿನ ಆಚರಿಸಿದವು.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಪ್ಪುಬಾವುಟ ಪ್ರದರ್ಶನ ಮಾಡಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡರು ಕೇಂದ್ರದ ವಿರುದ್ಧ ರೈತರು ನಡೆಸುತ್ತಿರುವ ಚಳವಳಿ ಆರು ತಿಂಗಳು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಸಂಯುಕ್ತ ರೈತ ಕಿಸಾನ್ ಮೋರ್ಚಾ ಕರೆ ನೀಡಿದ ಕರಾಳ ದಿನಾಚರಣೆಗೆ ಬೆಂಬಲವಾಗಿ ಪ್ರತಿಭಟನೆ ನಡೆಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ಕೃಷಿಕ ಸಮಾಜದ ಅಧ್ಯಕ್ಷ ಸಿದಗೌಡ ಮೋದಗಿ ಅವರು, ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳು ರೈತರ ಪಾಲಿಗೆ ಮರಣ ಶಾಸನವಾಗಿವೆ. ಇವು ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡಲು ಜಾರಿಗೆ ತಂದ ಕಾಯ್ದೆಗಳಾಗಿವೆ ಎಂದು ಆರೋಪ ಮಾಡಿದರು.
ಕೋವಿಡ್ ಮಹಾಮಾರಿಯಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ರೈತರ ಪರ ಕಾಳಜಿ ಇದ್ದರೆ ತಕ್ಷಣವೇ ಈ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡ ಚೂನಪ್ಪ ಪೂಜೇರಿ ಮೊದಲಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.