Bailhongal: ಕಷ್ಟ ಕೇಳದ ಬರ ಅಧ್ಯಯನ ತಂಡ; ಪೊಲೀಸರೆದುರು ಆತ್ಯಹತ್ಯೆಗೆ ಯತ್ನಿಸಿದ ರೈತ
Team Udayavani, Oct 6, 2023, 11:25 AM IST
ಬೆಳಗಾವಿ: ಬೆಳೆ ಹಾನಿಯಾಗಿದ್ದರೂ ತಮ್ಮ ಕಷ್ಟವನ್ನು ಕೇಂದ್ರ ಬರ ಅಧ್ಯಯನ ತಂಡದ ಅಧಿಕಾರಿಗಳು ಕೇಳಲಿಲ್ಲ ಎಂದು ರೈತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೈಲಹೊಂಗಲ ತಾಲೂಕಿನ ಕಲಕೊಪ್ಪ ಗ್ರಾಮದ ಬಳಿ ನಡೆದಿದೆ.
ಅಪ್ಪಾಸಾಹೇಬ ಯಕ್ಕುಂಡಿ ಎಂಬ ರೈತರೇ ಆತ್ಮಹತ್ಯೆಗೆ ಯತ್ನಿಸಿದವರು. ಎರಡು ಕ್ರಿಮಿನಾಶಕ ಬಾಟಲಿ ತಂದಿದ್ದ ರೈತ ಅಪ್ಪಾಸಾಹೆಬ ಯಕ್ಕುಂಡಿ ಅವರು ಅಧಿಕಾರಿಗಳು ತನ್ನ ಸಮಸ್ಯೆ ಕೇಳಲಿಲ್ಲ ಎಂದು ಕೋಪಗೊಂಡು ಕ್ರಿಮಿನಾಶಕ ಸೇವಿಸಲು ಮುಂದಾದರು.
ಆಗ ಇದನ್ನು ನೋಡಿದ ತಕ್ಷಣವೇ ಪೊಲೀಸರು ಬಾಟಲಿ ಕಸಿದುಕೊಂಡರು. ಅಷ್ಟೊತ್ತಿಗೆ ಬರ ಅಧ್ಯಯನ ತಂಡದ ಅಧಿಕಾರಿಗಳು ಅಲ್ಲಿಂದ ತೆರಳಿದ್ದರು.
ಇದನ್ನೂ ಓದಿ:Repo Rate: ಗೃಹ, ವಾಹನ ಸಾಲದ ಇಎಂಐ ಪಾವತಿದಾರರಿಗೆ ಸಿಹಿ ಸುದ್ದಿ: ರೆಪೋ ದರ ಯಥಾಸ್ಥಿತಿ-RBI
‘ನಾನು 40 ಎಕರೆ ಭೂಮಿಯಲ್ಲಿ ಶೇಂಗಾ, ಹುರಳಿ, ಸೋಯಾಬೀನ್ ಬೆಳೆದಿದ್ದೇನೆ. ಮಳೆ ಕೊರತೆಯಿಂದ ಬೆಳೆ ಸಂಪೂರ್ಣ ಹಾಳಾಗಿದೆ. ಆದರೆ, ಯಾರೂ ರೈತರ ಕಷ್ಟ ಕೇಳುತ್ತಿಲ್ಲ. ಸರ್ಕಾರ ಯಾವ ಗ್ಯಾರಂಟಿ ನೀಡದ್ದರಿಂದ ಮನನೊಂದು ನಾನು ಆತ್ಮಹತ್ಯೆಗೆ ಯತ್ನಿಸಿದೆ. ಸರ್ಕಾರ ರೈತರ ನೆರವಿಗೆ ಧಾವಿಸಬೇಕು’ ಎಂದು ರೈತ ಅಪ್ಪಾಸಾಹೇಬ ಯಕ್ಕುಂಡಿ ತಮ್ಮ ನೋವು ತೋಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!
Belagavi; ಮೈಕ್ರೋಫೈನಾನ್ಸ್ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.