ಕೃಷಿ ಕಾರ್ಯದತ್ತ ರೈತನ ಚಿತ್ತ
|ಹೊಸ ನಿರೀಕ್ಷೆ ತಂತು ಮಳೆಯ ಮಾರುತ |ಬೆಳಗಾವಿ-ಖಾನಾಪುರದಲ್ಲಿ ವಾಡಿಕೆ ಮಳೆ ಕೊರತೆ
Team Udayavani, Jun 16, 2019, 10:33 AM IST
ಬೆಳಗಾವಿ: ಜಿಲ್ಲೆಯಲ್ಲಿ ರೈತರು ಬಿತ್ತನೆಗೆ ಹೊಲ ಹದ ಮಾಡಿ ಬಿತ್ತನೆ ಕಾರ್ಯದಲ್ಲಿ ತೊಡಗಿರುವುದು. Copyright 2019 © Udayavani | Contact Us
ಬೆಳಗಾವಿ: ಕಳೆದ ನಾಲ್ಕೈದು ತಿಂಗಳಿಂದ ಭೀಕರ ಬರಗಾಲಕ್ಕೆ ತುತ್ತಾಗಿರುವ ಗಡಿ ಜಿಲ್ಲೆ ಬೆಳಗಾವಿಯ ರೈತರು ಹೊಸ ಆಸೆ ಹಾಗೂ ನಿರೀಕ್ಷೆಗಳೊಂದಿಗೆ ಈ ವರ್ಷದ ಮುಂಗಾರು ಕೃಷಿ ಚಟುವಟಿಕೆಗೆ ಚಾಲನೆ ನೀಡಿದ್ದಾರೆ. ಜೂನ್ ಎರಡನೇ ವಾರದಲ್ಲಿ ಬಿದ್ದ ಮಳೆ, ಮೋಡ ಕವಿದ ವಾತಾವರಣ ಮುಂಗಾರಿನ ಬಿತ್ತನೆ ಕಾರ್ಯಕ್ಕೆ ಹೊಸ ಜೀವ ನೀಡಿದೆ. ಮೇ ತಿಂಗಳ ಅಂತ್ಯದವರೆಗೆ ರಣಬಿಸಿಲಿನ ಅನುಭವ ಕಂಡಿದ್ದ ಬೆಳಗಾವಿ ಜಿಲ್ಲೆಯ ವಾತಾವರಣದಲ್ಲಿ ಕಳೆದ ಒಂದು ವಾರದಿಂದ ಬದಲಾವಣೆ ಕಾಣುತ್ತಿದೆ. ಮುಂಗಾರು ಮಳೆ ಇನ್ನೂ ಚುರುಕು ಪಡೆದಿಲ್ಲವಾದರೂ ಆಗಾಗ ಬೀಳುತ್ತಿರುವ ಮಳೆ ಹಾಗೂ ವಾತಾವರಣದಲ್ಲಿನ ಬದಲಾವಣೆ ರೈತರಲ್ಲಿ ಹೊಸ ಆಸೆ ಮೂಡಿಸಿದೆ. ಅಲ್ಲಲ್ಲಿ ಕೃಷಿ ಚಟುವಟಿಕೆಗಳು ಮತ್ತೆ ಜೀವ ತುಂಬಿಕೊಂಡಿವೆ. ಬಹುತೇಕ ಕಡೆ ಬಿತ್ತನೆಗೆ ಹೊಲಗಳನ್ನು ಸಿದ್ಧಮಾಡಿಕೊಳ್ಳುವ ಕಾರ್ಯ ಭರದಿಂದ ನಡೆದಿದೆ. ಮುಂಗಾರು ಈ ಬಾರಿಯಾದರೂ ಸಂಪೂರ್ಣವಾಗಿ ನಮ್ಮ ಕೈಹಿಡಿಯುತ್ತದೆ ಎಂಬ ವಿಶ್ವಾಸ ರೈತರ ಮುಖದಲ್ಲಿ ಕಾಣುತ್ತಿದೆ. ಕಳೆದ ಒಂದೆರಡು ದಿನಗಳಿಂದ ಬಿದ್ದ ಮಳೆಯಿಂದ ಬೆಳಗಾವಿ, ಬೈಲಹೊಂಗಲ, ಸವದತ್ತಿ, ರಾಮದುರ್ಗ ಮೊದಲಾದ ಕಡೆ ಬಿತ್ತನೆ ಕಾರ್ಯ ಆರಂಭವಾಗಿದೆ. ಹೊಲಗಳನ್ನು ಹದಮಾಡಿಕೊಳ್ಳುವ ಕೆಲಸ ಜೋರಾಗಿ ನಡೆದಿರುವ ದೃಶ್ಯ ಎಲ್ಲ ಕಡೆ ಕಾಣುತ್ತಿದೆ.
ಕಳೆದ ಜನವರಿಯಿಂದ ಮೇ ಅಂತ್ಯದವರೆಗೆ ಜಿಲ್ಲೆಯಲ್ಲಿ ಶೇ. 78ರಷ್ಟು ಮಳೆಯ ಕೊರತೆ ಕಂಡುಬಂದಿತ್ತು, ಇದೇ ಕಾರಣದಿಂದ ಕೃಷಿ ಚಟುವಟಿಕೆಗಳು ಸಹ ಬಹುತೇಕ ಸ್ಥಗಿತಗೊಂಡಿದ್ದವು. ಅಡ್ಡ ಮಳೆಯ ಕೊರತೆಯಿಂದಾಗಿ ಬಿತ್ತನೆಗೆ ಹೊಲಗಳನ್ನು ಹದ ಮಾಡಿಕೊಳ್ಳುವ ಕಾರ್ಯ ಸಹ ನಡೆದಿರಲಿಲ್ಲ. ಜಿಲ್ಲೆಯಲ್ಲಿ ವಾಡಿಕೆ ಪ್ರಕಾರ ಜೂನ್ ಮೊದಲ ವಾರ ಮುಂಗಾರು ಪ್ರವೇಶವಾಗಿ ಬಿತ್ತನೆ ಕಾರ್ಯ ಭರದಿಂದ ನಡೆದಿರುತ್ತಿದ್ದವು. ಜಿಲ್ಲೆಯಲ್ಲಿ ಇದುವರೆಗೆ ವಾಡಿಕೆಯ 111 ಮಿಮೀ ಪೈಕಿ 74.4 ಮಿಮೀ ಮಳೆಯಾಗಿದೆ. ಅತಿ ಹೆಚ್ಚು ಮಳೆಯಾಗಬೇಕಿರುವ ಬೆಳಗಾವಿ ಹಾಗೂ ಖಾನಾಪುರ ತಾಲೂಕುಗಳಲ್ಲಿ ಅರ್ಧದಷ್ಟು ಸಹ ಮಳೆಯಾಗಿಲ್ಲ. ಆದರೆ ಈಗ ಬಿದ್ದ ತುಂತುರು ಮಳೆಯಿಂದ ಬಿತ್ತನೆ ಕಾರ್ಯ ಆರಂಭಗೊಂಡಿದೆ. ಈ ಬಾರಿ ಮುಂಗಾರು ಮಳೆ ಉತ್ತಮವಾಗಿರಲಿದೆ ಎಂಬ ವಿಶ್ವಾಸದಿಂದ ಕೃಷಿ ಇಲಾಖೆ ಈಗಾಗಲೇ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕಳೆದ ಒಂದೆರಡು ದಿನಗಳಿಂದ ಅಲ್ಲಲ್ಲಿ ಜಿಟಿ ಜಿಟಿ ಮಳೆ ಆರಂಭವಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬೀಳಬೇಕು. ಮುಖ್ಯವಾಗಿ ಖಾನಾಪುರ, ಬೈಲಹೊಂಗಲ, ಬೆಳಗಾವಿ ತಾಲೂಕುಗಳಲ್ಲಿ ಇನ್ನೂ ಮಳೆ ಕಾಣುತ್ತಿಲ್ಲ. ಒಂದೆರಡು ದಿನಗಳಲ್ಲಿ ಒಳ್ಳೆಯ ಮಳೆ ಆರಂಭವಾಗಬಹುದು ಎಂಬ ನಿರೀಕ್ಷೆ ಇದೆ. ಯಾವುದೇ ಕಾರಣಕ್ಕೂ ರೈತರಿಗೆ ಬೀಜ ಮತ್ತು ಗೊಬ್ಬರದ ಅಭಾವ ಉಂಟಾಗಬಾರದು ಎಂಬ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತೆ ವಹಿಸಿ 122 ರೈತ ಸಂಪರ್ಕ ಕೇಂದ್ರಗಳ ಮೂಲಕ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಎಚ್. ಮೊಕಾಸಿ ಹೇಳಿದರು.
ಎಲ್ಲೆಲ್ಲಿ ಎಷ್ಟು?:
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.