ವಿವಿಧ ಬೇಡಿಕೆ ಈಡೇರಿಕೆಗೆ ರೈತರ ಆಗ್ರಹ
Team Udayavani, Oct 25, 2019, 2:08 PM IST
ಬೈಲಹೊಂಗಲ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ ನವದೆಹಲಿಯ ಘಟಕದ ಪದಾಧಿಕಾರಿಗಳು ಉಪವಿಭಾಗಾಧಿಕಾರಿಗೆ ಮೂಲಕ ಗುರುವಾರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಭಾರತೀಯ ಕೃಷಿಕ ಸಮಾಜ ನವದೆಹಲಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕಮತ ಮಾತನಾಡಿ, ಭಾರತ ಸರ್ಕಾರ ಜಾರಿಗೆ ತರಲು ಹೊರಟಿರುವ ಆರ್‌ಸಿಇಪಿ ಮುಕ್ತ ವ್ಯಾಪಾರ ಯೋಜನೆಯಲ್ಲಿ ಕೃಷಿ ಉತ್ಪನ್ನಗಳನ್ನು ಈ ಯೋಜನೆಯಿಂದ ಹೊರಗಿಡಲು ನಿರ್ದೇಶನ ನೀಡಬೇಕು. ಈ ಯೋಜನೆಯಿಂದ ಭಾರತದ ಕೃಷಿ ಚಟುವಟಿಕೆಯಲ್ಲಿ ನಿರತರಾಗಿರುವ ಸಣ್ಣ ಮತ್ತು ಮಧ್ಯಮ ರೈತರು ಜಮೀನು ಕಳೆದುಕೊಳ್ಳುವದರೊಂದಿಗೆ ಹೈನುಗಾರಿಕೆಯ ಉದ್ಯೋಗದಿಂದ ವಂಚಿತರಾಗಲಿದ್ದಾರೆ ಎಂದರು.
ಎಪಿಎಂಸಿ ಸದಸ್ಯ ಎಫ್.ಎಸ್.ಸಿದ್ದನಗೌಡರ ಮಾತನಾಡಿ, ಕರ್ನಾಟಕ ರಾಜ್ಯದ ಉತ್ತರ ಭಾಗದ ಜಿಲ್ಲೆಗಳಲ್ಲಿ ಹಿಂದೆ ಎಂದು ಖಂಡರಿಯದ ಮಳೆ ಮತ್ತು ಪ್ರವಾಹ ಉಂಟಾಗಿ ರೈತರ ಜೀವನ ದುಸ್ಥರವಾಗಿದೆ ಆದ್ದರಿಂದ ಈ ಭಾಗದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.
ಬೇಡಿಕೆಗಳು: ಭಾರತ ಸರ್ಕಾರ ಆರ್‌ಸಿಇಪಿ ಮುಕ್ತ ವ್ಯಾಪಾರ ಯೋಜನೆಯಿಂದ ಕೃಷಿ ಉತ್ಪನ್ನಗಳನ್ನು ಕೈ ಬಿಡಬೇಕು. ರಾಜ್ಯದ ಪ್ರವಾಹ ಪೀಡಿತ ರೈತರ ಸಂಪೂರ್ಣ ಸಾಲ ಮನ್ನಾ, ಸವದತ್ತಿ ತಾಲೂಕಿನ ಯಕ್ಕುಂಡಿ ಗ್ರಾಮದಲ್ಲಿ ಮಲಪ್ರಭಾ ನದಿಯ ಸುಮಾರು 2 ಟಿಎಮ್‌ಸಿ ನೀರು ಬಳಸಿಕೊಂಡು ವಿದ್ಯುತ್ ತಯಾರಿಸುವ ಗ್ರೀನ್ ಕೋ ಕಂಪನಿ ಕಾರ್ಯವನ್ನು ಸ್ಥಗಿತಗೊಳಿಸಬೇಕು. ಬಾಗೇವಾಡಿ-ಸವದತ್ತಿಯ ರಾಜ್ಯ ಹೆದ್ದಾರಿ ಯೋಜನೆಗೆ ಟೋಲ್ ಅಳವಡಿಸುವ ಯೋಜನೆ ಕೈಬಿಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಈ ವೇಳೆ ಜಿಲ್ಲಾ ಕಾರ್ಯಾಧ್ಯಕ್ಷ ಈರಣ್ಣ ಹುಬ್ಬಳ್ಳಿ, ಮಹಾದೇವ ಕಲಭಾಂವಿ, ಸುರೇಶ ಹೋಳಿ, ಶ್ರೀಪತಿ ಪಠಾಣಿ, ಮಲ್ಲಿಕಾರ್ಜುನ ದೇಸಾಯಿ, ಮಡಿವಾಳಪ್ಪ ಬುಳ್ಳಿ, ಸೋಮಲಿಂಗಪ್ಪ ಯಡ್ರಾವಿ, ಮನೋಜ ವಣ್ಣುರ, ಮೋಹನ ವಕ್ಕುಂದ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.