ಎಸ್‌ಟಿಪಿ ಸ್ಥಳಾಂತರಕ್ಕೆ ರೈತರ ಪ್ರತಿಭಟನೆ
•ರೈತರ ಧರಣಿ •3 ಕೋಟಿ ಮೌಲ್ಯದ ಭೂಮಿಗೆ 3ಲಕ್ಷ •ಬ್ಯಾಂಕ್ ಕಿರುಕುಳ ತಪ್ಪಿಸಲು ಒತ್ತಾಯ
Team Udayavani, Jul 30, 2019, 10:19 AM IST
ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೆಳಗಾವಿ: ಹಲಗಾ ಗ್ರಾಮದಲ್ಲಿ ನಡೆಯುತ್ತಿರುವ ನಗರ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಳಾಂತರಗೊಳಿಸಬೇಕು. ಕಳಸಾ-ಬಂಡೂರಿ, ಮಹದಾಯಿ ಕಾಮಗಾರಿ ಆರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.
ಹಲಗಾ ಬಳಿ ಎಸ್‌ಟಿಪಿ ನಿರ್ಮಾಣಕ್ಕೆ ಆಯ್ಕೆ ಮಾಡಿರುವ ಸ್ಥಳ ಸಮರ್ಪಕವಾಗಿಲ್ಲ. ಎಸ್‌ಟಿಪಿ ಕಾಮಗಾರಿ ಕೂಡಲೇ ನಿಲ್ಲಿಸಬೇಕು. ಪರಿಣಿತ ಎಂಜಿನಿಯರ್‌ಗಳ ತಂಡ ನೇಮಿಸಿ ಪರಿಶೀಲಿಸಬೇಕು. ಭೂಮಿ ಕಳೆದುಕೊಂಡ ಯಾವೊಬ್ಬ ರೈತರಿಗೆ ಈವರೆಗೂ ಪರಿಹಾರ ಸಿಕ್ಕಿಲ್ಲ. ಎಕರೆಗೆ 3 ಕೋಟಿ ರೂ. ಬೆಲೆಬಾಳುವ ಜಮೀನಿಗೆ ಕೇವಲ 3 ಲಕ್ಷ ರೂ. ನೀಡುವ ಮೂಲಕ ರೈತರನ್ನು ಸುಲಿಗೆ ಮಾಡಲಾಗುತ್ತಿದೆ. ಕೂಡಲೇ ಕಾಮಗಾರಿ ನಿಲ್ಲಿಸಿ ಬೇರೆಡೆ ಸ್ಥಳಾಂತರ ಮಾಡಿ ರೈತರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು. ಸಾಲ ಮರುಪಾವತಿಸುವಂತೆ ಬ್ಯಾಂಕುಗಳು, ಫೈನಾನ್ಸ್‌ಗಳು ರೈತರು ಹಾಗೂ ಮಹಿಳಾ ಸಂಘದ ಸದಸ್ಯರಿಗೆ ಕಿರುಕುಳ ನೀಡುತ್ತಿವೆ. ಈ ವರ್ಷ ಮಳೆ ತಡವಾಗಿ ಆಗುತ್ತಿದ್ದು, ಈಗ ಬಿತ್ತನೆ ಕಾರ್ಯ ಪೂರ್ಣಗೊಳಿಸಲಾಗಿದೆ. ಇನ್ನೂ ಕೈಗೆ ಬೆಳೆ ಬಂದಿಲ್ಲ. ಹೀಗಿರುವಾಗ ಏಕಾಏಕಿ ಸಾಲ ಪಾವತಿಸುವಂತೆ ನೋಟಿಸ್ ನೀಡಿದರೆ ರೈತರು ಹೇಗೆ ಪಾವತಿಸುತ್ತಾರೆ. ರೈತರಿಗೆ ಕಿರುಕುಳ ನೀಡದಂತೆ ಜಿಲ್ಲಾಧಿಕಾರಿಗಳು ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು. ಕೇಂದ್ರ ಸರ್ಕಾರ ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸಬೇಕು. ಕಳಸಾ-ಬಂಡೂರಿ ಯೋಜನೆಗೆ ಶೀಘ್ರ ಚಾಲನೆ ನೀಡಬೇಕು. ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಲೆ ನಿಗದಿಪಡಿಸಬೇಕು. ಕಾರ್ಖಾನೆಗಳಿಂದ ಬಾಕಿ ಇರುವ ಬಿಲ್ ರೈತರಿಗೆ ಪಾವತಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ| ಎಸ್.ಬಿ. ಬೊಮ್ಮನಹಳ್ಳಿ ಅವರು, ಹಲಗಾದಲ್ಲಿ ನಡೆಯುತ್ತಿರುವ ಎಸ್‌ಟಿಪಿ ಕಾಮಗಾರಿ ಸ್ಥಳವನ್ನು ಪರಿಶೀಲಿಸಲು ಎಂಜಿನಿಯರ್‌ಗಳ ತಂಡ ನೇಮಿಸಲಾಗುವುದು. ಯಾವ ಬ್ಯಾಂಕ್ ಹಾಗೂ ಫೈನಾನ್ಸ್‌ಗಳಿಂದ ತೊಂದರೆಯಾಗುತ್ತಿದೆ ಎಂದು ಲಿಖೀತ ಮಾಹಿತಿ ನೀಡಿದರೆ ಕಿರುಕುಳ ಕೊಡದಂತೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಮುಖಂಡರಾದ ಚೂನಪ್ಪ ಪೂಜಾರಿ, ಜಿಲ್ಲಾಧ್ಯಕ್ಷ ರಾಘವೇಂದ್ರ ನಾಯಿಕ, ಅಶೋಕ ಯಮಕನಮರಡಿ, ಪ್ರಕಾಶ ನಾಯಕ, ಜಯಶ್ರೀ ಗುರಣ್ಣವರ, ರಾಜು ಮರವೆ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.