ಎತ್ತು ಚಕ್ಕಡಿಯೊಂದಿಗೆ ರೈತರ ಪ್ರತಿಭಟನೆ
ಕೃಷಿ ಕಾಯ್ದೆ ರದ್ದತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ! ಸಾಲಮನ್ನಾಗೆ ಒತ್ತಾಯ
Team Udayavani, Mar 5, 2021, 8:44 PM IST
ಬೆಳಗಾವಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ರೈತರು ಗುರುವಾರ ನಗರದ ಚನ್ನಮ್ಮ ವೃತ್ತದಲ್ಲಿ ಚಕ್ಕಡಿ, ಎತ್ತುಗಳನ್ನು ತಂದು ರಸ್ತೆತಡೆದು ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಬೇಕು ಎಂದು ಪಟ್ಟು ಹಿಡಿದರು. ಈ ವೇಳೆ ಚನ್ನಮ್ಮ ವೃತ್ತದಲ್ಲಿಎತ್ತುಗಳನ್ನು ತಂದಿದ್ದರಿಂದ ರಸ್ತೆ ಬಂದ್ ಆಗಿತ್ತು. ನಂತರ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು.
ಸರ್ಕಾರ ಜಾರಿಗೆ ತಂದಿರುವ ಕಾಯ್ದೆಗಳಿಂದರೈತರು ಸಂಕಷ್ಟಕ್ಕೆ ಸಿಲುಕಲಿದ್ದು, ಕೂಡಲೇ ಈ ಕಾಯ್ದೆಗಳನ್ನು ಹಿಂಪಡೆಯಬೇಕು. ಭೂಸ್ವಾಧೀನಕಾಯ್ದೆ ಕೈ ಬಿಡಬೇಕು. ವಿದ್ಯುತ್ ಖಾಸಗೀಕರಣವನ್ನು ಸರ್ಕಾರ ಕೈಬಿಡಬೇಕು, ಎಪಿಎಂಸಿ ಕಾಯ್ದೆತಿದ್ದುಪಡಿಯನ್ನು ರದ್ದುಗೊಳಿಸಬೇಕು, ರೈತರಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಇಲ್ಲಿಯ ಹಲಗಾ-ಮಚ್ಛೆ ಬೆ„ಪಾಸ್ ರಸ್ತೆ ನಿಮಾಣ ಕಾಮಗಾರಿ ರದ್ದುಪಡಿಸಬೇಕು. ಫಲವತ್ತಾದ ಭೂಮಿಯನ್ನು ಕಸಿದುಕೊಳ್ಳಲು ಹುನ್ನಾರ ನಡೆಸಿರುವರಾಷ್ಟ್ರೀಯ ಹೆದ್ದಾರಿ ಪ್ರಾ ಧಿಕಾರಕ್ಕೆ ಸೂಚನೆ ನೀಡಬೇಕು. ಬೈಪಾಸ್ ರಸ್ತೆ ಕಾಮಗಾರಿ ಬಂದ್ ಮಾಡಿ ರೈತರಿಗೆಉಳುಮೆ ಮಾಡಲು ಅನುಕೂಲ ಮಾಡಿಕೊಡಬೇಕು.ನಮ್ಮ ಜಮೀನು ನಮಗೆ ಬಿಟ್ಟು ಕೊಡಬೇಕು ಎಂದು ಒತ್ತಾಯಿಸಿದರು.
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2017-18ರಲ್ಲಿ ಪಡೆದಸಾಲ ಮನ್ನಾ ಮಾಡಬೇಕು. ಚಿಕ್ಕೋಡಿ ತಾಲೂಕಿನಜೋಡಕುರಳಿ ಗ್ರಾಮದ ಸರಹದ್ದಿನ ಜಮೀನಿನಲ್ಲಿಕ್ರಷರ್ ಮಷಿನ್ ಹಾಕಲು ಅನುಮತಿ ನೀಡಬಾರದು.ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳ ಹಿಂದಿನಬಿಲ್ ರೈತರ ಖಾತೆಗೆ ಜಮಾ ಮಾಡಬೇಕು ಎಂದುಆಗ್ರಹಿಸಿದರು.ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನವರುರೈತರ ಮನೆಗೆ ಬಂದು ಸಾಲ ವಸೂಲಾತಿಮಾಡುವುದನ್ನು ನಿಲ್ಲಿಸಬೇಕು. ದೇಶಾದ್ಯಂತ ಏರಿಕೆಆಗಿರುವ ಪೆಟ್ರೋಲ್ ಹಾಗೂ ಡೀಸೆಲ್ ದರ ಕಡಿಮೆಮಾಡಬೇಕು ಎಂದು ಒತ್ತಾಯಿಸಿದರು.ಜಿಲ್ಲಾಧ್ಯಕ್ಷ ಸತ್ಯಪ್ಪ ಮಲ್ಲಾಪುರಿ, ರಮೇಶಮಡಿವಾಳ, ರಾಜು ಮರವೆ, ಮಹಾದೇವಮಡಿವಾಳ, ರವಿ ಪಟೇಗಾರ, ಮಂಜು ಪರಗೌಡಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.