ನೋಂದಣಿಗೆ ರೈತರ ನೂಕುನುಗ್ಗಲು
Team Udayavani, Sep 7, 2018, 3:25 PM IST
ಬೈಲಹೊಂಗಲ: ಸರ್ಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ಬುಧವಾರ ಆರಂಭಿಸಲಾದ ಹೆಸರು ಖರೀದಿ ಕೇಂದ್ರದಲ್ಲಿ ಮೊದಲ ದಿನವೇ ಸಾವಿರಾರು ರೈತರು ನೋಂದಣಿಗಾಗಿ ಆಗಮಿಸಿದ್ದರಿಂದ ಕೇಂದ್ರದಲ್ಲಿ ನೂಕು ನುಗ್ಗಲು ಉಂಟಾದ ಪ್ರಸಂಗ ನಡೆಯಿತು.
ಎಫ್.ಎ.ಕ್ಯೂ. ಗುಣಮಟ್ಟದ ಹೆಸರು ಕಾಳು ಖರೀದಿಸಲು ತಾಲೂಕಿನ ದೊಡವಾಡ ಗ್ರಾಮದ ಸಂಗಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕೇಂದ್ರ ಪ್ರಾರಂಭಿಸಲಾಗಿದ್ದು, ನೋಂದಣಿಗೆ ಸೆ. 9ರವರೆಗೆ ಮಾತ್ರ ದಿನಾಂಕ ನಿಗದಿಪಡಿಸಲಾಗಿದೆ. ಇಲ್ಲಿಯವರೆಗೆ ಸಂಘದಲ್ಲಿ ಖರೀದಿ ಕೇಂದ್ರ ಆರಂಭಿಸುವಂತೆ ಅಧಿಕೃತ ಆದೇಶ ಬಂದಿಲ್ಲವಾದರೂ ತಾಲೂಕು ಎಪಿಎಂಸಿ ಅಧಿಕಾರಿಗಳ ನಿರ್ದೇಶನದಂತೆ ಒಮ್ಮಲೇ ಒತ್ತಡವಾಗದಿರಲೆಂದು ರೈತರ ನೋಂದಣಿ ಆರಂಭಿಸಲಾಗಿದೆ. ಖರೀದಿ ಏಜೆನ್ಸಿಯವರು ಅರ್ಜಿ ಅಪಲೋಡ್ ಮಾಡಲು ಮೊಬೈಲ್ ರಿಜಿಸ್ಟ್ರೇಷನ್‌ನ ಒಂದೇ ಆ್ಯಪ್ ಕಳಿಸಿದ್ದು ತೊಂದರೆಗೆ ಕಾರಣವಾಗಿದೆ ಎಂದು ಸಂಘದ ಆಡಳಿತ ಮಂಡಳಿ ಸದಸ್ಯರು ತಿಳಿಸಿದರು.
ರಾಜ್ಯದಲ್ಲೇ ಅತಿ ಹೆಚ್ಚು ಸುಮಾರು 2,500 ಹೆಕ್ಟೇರ್ ನಷ್ಟು ಹೆಸರನ್ನು ದೊಡವಾಡ ಕೃಷಿ ಭೂಮಿ ವ್ಯಾಪ್ತಿಯಲ್ಲೇ ಬೆಳೆಯಲಾಗಿದೆ. ಎಲ್ಲ ರೈತರ ರಿಜಿಸ್ಟ್ರೇಷನ್‌ಗಾಗಿ ನಾಲ್ಕೈದು ಆ್ಯಪ್‌ಗ್ಳಾದರೂ ಬೇಕು. ನೋಂದಣಿಗೆ ಕೇವಲ ಐದೇ ದಿನ ಬಾಕಿ ಇರುವ ಕಾರಣ ರೈತರು ರಾತ್ರಿಯೇ ನೋಂದಣಿಗಾಗಿ ಪಾಳಿ ನಿಂತಿದ್ದು, ಗೊಂದಲಕ್ಕೆ ಕಾರಣವಾಗಿದೆ. ಬೆಳಗ್ಗೆಯಿಂದ ಸಂಜೆವರೆಗೂ ಸುಮಾರು 1500 ರೈತರ ಹೆಸರನ್ನು ಒಂದೇ ದಿನ ನೋಂದಣಿ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.
ರೈತರಿಗೆ ಸಮಸ್ಯೆಯಾಗದಂತೆ ಖರೀದಿ ಕೇಂದ್ರಗಳಿಗೆ ಎಲ್ಲ ರೀತಿಯ ಮೂಲ ಸೌಕರ್ಯ ಒದಗಿಸಬೇಕೆಂಬ ಡಿಸಿ ಆದೇಶವನ್ನು ಸಮರ್ಪಕವಾಗಿ ಕಾರ್ಯರೂಪಕ್ಕೆ ತರದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುತ್ತಲಿನ ಗ್ರಾಮಗಳ ರೈತರಿಗೂ ಇದೊಂದೇ ಖರೀದಿ ಕೇಂದ್ರ ಸಮೀಪದಲ್ಲಿದ್ದು ನೋಂದಣಿಗೆ ಇನ್ನು ಹೆಚ್ಚಿನ ರೈತರು ಆಗಮಿಸುವ ನಿರೀಕ್ಷೆ ಇದ್ದು ಗಲಾಟೆ ಗದ್ದಲ ಉಂಟಾಗುವ ಸಂಭವವಿದೆ. ಆದ್ದರಿಂದ ನೋಂದಣಿ ದಿನಾಂಕ ವಿಸ್ತರಿಸಬೇಕು. ಏಜೆನ್ಸಿಯವರಿಂದ ನಾಲ್ಕೈದಾದರೂ ಮೊಬೈಲ್ ರಿಜಸ್ಟ್ರೇಷನ್ ಆ್ಯಪ್ ಒದಗಿಸುವ ವ್ಯವಸ್ಥೆ ಮಾಡಬೇಕೆಂದು ರೈತರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ದೊಡವಾಡ ಪೊಲೀಸ್ ಠಾಣೆಯಿಂದ ಸೂಕ್ತ ಭದ್ರತೆ ಒದಗಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.