ಯುದ್ಧ ವಿಮಾನ ದುರಂತ: ತವರೂರಿಗೆ ಬಂದ ಪೈಲಟ್ ಹನುಮಂತರಾವ್ ಸಾರಥಿ ಪಾರ್ಥಿವ ಶರೀರ
Team Udayavani, Jan 29, 2023, 2:53 PM IST
ಬೆಳಗಾವಿ: ಗ್ವಾಲಿಯರ್ ಸಮೀಪ ನಡೆದ ವಾಯುಪಡೆಯ ಯುದ್ಧ ವಿಮಾನಗಳ ಪತನ ವೇಳೆ ಹುತಾತ್ಮರಾದ ಪೈಲಟ್ ವಿಂಗ್ ಕಮಾಂಡರ್ ಬೆಳಗಾವಿಯ ಗಣೇಶಪುರದ ಹನುಮಂತರಾವ್ ರೇವಣಸಿದ್ದಪ್ಪ ಸಾರಥಿ ಅವರಿಗೆ ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಯೋಧನ ಪಾರ್ಥೀವ ಶರೀರವನ್ನು ಸೇನೆಯ ವಿಶೇಷ ವಿಮಾನದ ಮೂಲಕ ರವಿವಾರ ಮಧ್ಯಾಹ್ನ 12:30 ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ತರಲಾಯಿತು.
ಇದನ್ನೂ ಓದಿ:ಚಿಕ್ಕಮಗಳೂರು:ದುಬಾರಿ ಬೆಲೆಯ ಡ್ರಗ್ಸ್ ಮಾರುತ್ತಿದ್ದ ವ್ಯಕ್ತಿ ಪೊಲೀಸ್ ಬಲೆಗೆ
ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಡಾ. ನಿತೇಶ್ ಪಾಟೀಲ, ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ. ಎಂ.ಬಿ. ಬೋರಲಿಂಗಯ್ಯ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ವಿ.ದರ್ಶನ್, ಮತ್ತಿತರ ಗಣ್ಯರು ಪುಷ್ಪಗುಚ್ಛ ಸಮರ್ಪಿಸಿ ಅಂತಿಮ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿ ನಿತೇಶ ಪಾಟೀಲ ಶ್ರದ್ಧಾಂಜಲಿ: ಗ್ವಾಲಿಯರ್ ನಲ್ಲಿ ತರಬೇತಿ ಕಾರ್ಯಾಚರಣೆಯಲ್ಲಿದ್ದ ಯುದ್ಧ ವಿಮಾನ ಪತನದಿಂದ ಬೆಳಗಾವಿಯ ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿ ಅವರು ನಿಧನರಾದ ವಿಷಯ ತಿಳಿದು ತುಂಬ ದುಃಖವಾಯಿತು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಂತಾಪ ವ್ಯಕ್ತಪಡಿಸಿದರು.
ಹೆಮ್ಮೆಯ ಯೋಧ ಹನುಮಂತರಾವನನ್ನು ಕಳೆದುಕೊಂಡಿದ್ದು ದೇಶಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬದ ದುಃಖದಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರಿಗೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಜಿಲ್ಲಾಧಿಕಾರಿ ಪಾಟೀಲ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.