ಪ್ಲಾಸ್ಟಿಕ್ ಬಳಸಿದರೆ ದಂಡ ಖಚಿತ
Team Udayavani, Jan 8, 2020, 3:10 PM IST
ಚಿಕ್ಕೋಡಿ: ಪ್ಲಾಸ್ಟಿಕ್ ಮಾರಾಟ ಮಾಡುವ ವ್ಯಕ್ತಿಗಳು ಹಾಗೂ ಅಂಗಡಿ ಮುಂಗಟ್ಟುಗಳ ಮೇಲೆ ನಗರಸಭೆ ಅಧಿಕಾರಿಗಳು ದಾಳಿ ನಡೆಸಿ ಓರ್ವ ವ್ಯಾಪಾರಸ್ಥನಿಗೆ 25 ಸಾವಿರ ದಂಡ ಹಾಕಿದ್ದಾರೆ.
ನಿಪ್ಪಾಣಿ ನಗರಸಭೆ ಪೌರಾಯುಕ್ತ ಮಹಾವೀರ ಬೋರನ್ನವರ ನೇತೃತ್ವದಲ್ಲಿ ಅ ಧಿಕಾರಗಳ ತಂಡ ಪ್ರತಿದಿನ ನಿಪ್ಪಾಣಿ ನಗರದಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಪ್ಲಾಸ್ಟಿಕ್ ಬಳಕೆ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ಹಾಕುತ್ತಿದ್ದಾರೆ. ಸರ್ಕಾರ ಪ್ಲಾಸ್ಟಿಕ್ ನಿಷೇಧ ಮಾಡಿದರೂ ನಿಪ್ಪಾಣಿಯಲ್ಲಿ ಪ್ಲಾಸ್ಟಿಕ್ ಬಳಕೆ ಇರುವುದನ್ನು ಗಮನಿಸಿದ ನಗರಸಭೆ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ 10 ಸಾವಿರ ರೂ ಮೌಲ್ಯದ ಕೆಮಿಕಲ್ ಮಿಶ್ರಿತ ಪ್ಲಾಸ್ಟಿಕ್ ಹಾಗೂ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡು 25 ಸಾವಿರ ರೂ ದಂಡ ಹಾಕಿದ್ದಾರೆ.
ಈ ಕುರಿತು ಪೌರಾಯುಕ್ತ ಮಹಾವೀರ ಬೋರನ್ನವರ ಮಾತನಾಡಿ, ಇಡೀ ದೇಶದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಆದರೆ ನಗರದಲ್ಲಿ ಕೆಲವೊಬ್ಬರು ಅಕ್ರಮವಾಗಿ ಅಂಗಡಿ, ಹೊಟೇಲ, ಬೇಕರಿ ಮತ್ತು ಸಣ್ಣ ಸಣ್ಣ ವ್ಯಾಪಾರಸ್ಥರು ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ದಾಳಿ ನಡೆಸಲಾಗುತ್ತಿದೆ. ಅದರಂತೆ ಬೇಕರಿಯಲ್ಲಿ ಸಾಮಾನು ಖರೀದಿ ಮಾಡಿ ಪ್ಲಾಸ್ಟಿಕ್‌ನಲ್ಲಿ ತೆಗೆದುಕೊಂಡು ಹೋಗುವ ವ್ಯಕ್ತಿಯೊಬ್ಬನಿಗೂ 2 ಸಾವಿರ ರೂ. ದಂಡ ಹಾಕಲಾಗಿದೆ ಎಂದರು.
ನಗರದ ಎಲ್ಲ ಸಾರ್ವಜನಿಕರು ಸರ್ಕಾರದ ನಿಯಮ ಪಾಲನೆ ಮಾಡಬೇಕು. ಪ್ಲಾಸ್ಟಿಕ್ ಬಳಕೆ ನಿಷೇಧವಿದೆ. ವ್ಯಾಪಾರಸ್ಥರು ಬಳಕೆ ಮಾಡುವುದನ್ನು ನಿಲ್ಲಿಸಬೇಕು. ನಗರದ ಸ್ವಚ್ಛತೆಗೆ ಸಹಕರಿಸಬೇಕು ಎಂದು ಪೌರಾಯುಕ್ತ ಮಹಾವೀರ ಬೋರನ್ನವರ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.