ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ : ಬೀದಿಗೆ ಬಿದ್ದ 72 ಕುಟುಂಬಗಳು
Team Udayavani, Apr 30, 2017, 12:27 PM IST
ಬೆಳಗಾವಿ: ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಶನಿವಾರ ರಾತ್ರಿ ಭೀಕರ ಅವಘಡ ಸಂಭವಿಸಿದ್ದು , 72 ಮನೆಗಳು ಬೆಂಕಿಗೆ ಆಹುತಿಯಾಗಿದ್ದು ,73 ಹುಲ್ಲಿನ ಬಣವೆ, 3 ಜಾನುವಾರುಗಳು ಸಜೀವ ದಹನಗೊಂಡಿವೆ.
72 ಕುಟುಂಬಗಳು ಮನೆ ಮಾರು ಕಳೆದುಕೊಂಡಿದ್ದು, ಅವರಿಗೆ ಸರ್ಕಾರಿ ಶಾಲೆಗಳಲ್ಲಿ ಆಶ್ರಯ ನೀಡಲಾಗಿದ್ದು , ಜಿಲ್ಲಾಡಳಿತದ ವತಿಯಿಂದ ಊಟ ತಿಂಡಿಯ ವ್ಯವಸ್ಥೆ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೋಳಿ ಸ್ಥಳಕ್ಕಾಗಮಿಸಿ ಪರಿಹಾರ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಮನೆ ಕಳೆದುಕೊಂಡಿರುವವರಿಗೆ ಸರ್ಕಾರದ ವತಿಯಿಂದ ಬಸವ ವಸತಿ ಯೋಜನೆ ಅಡಿ 100 ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದ್ದು, 2 ದಿನಗಳಲ್ಲೇ ಮನೆ ನಿರ್ಮಾಣ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ ತಾತ್ಕಾಲಿಕ ಪರಿಹಾರವನ್ನು ವಿತರಿಸಿದರು.
ಶನಿವಾರ ಸಂಜೆ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಲು ಅಗ್ನಿ ಶಾಮಕದಳದ 70ಕ್ಕೂ ಅಧಿಕ ಸಿಬಂದಿಗಳು ಹರಸಾಹಸ ಪಡಬೇಕಾಯಿತು. ಜಾನುವಾರಗಳ ಮೇವಿನ ಬಣವೆಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಭಸ್ಮವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.