ಮೊದಲ ದಿನ 9 ನಾಮಪತ್ರ ಸಲ್ಲಿಕೆ

ಅಥಣಿ ಕ್ಷೇತ್ರದಲ್ಲಿ ನಾಲ್ಕು-ಕಾಗವಾಡದಿಂದ ಐದು

Team Udayavani, Sep 24, 2019, 11:16 AM IST

bg-tdy-1

ಬೆಳಗಾವಿ: ಅನರ್ಹತೆ ಶಿಕ್ಷೆಗೆ ಗುರಿಯಾಗಿರುವ ಬೆಳಗಾವಿ ಜಿಲ್ಲೆಯ ಮೂವರು ಶಾಸಕರ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಮೊದಲ ದಿನ ಸೋಮವಾರ ಒಟ್ಟು ಒಂಬತ್ತು ಉಮೇದುವಾರರು ನಾಮಪತ್ರ ಸಲ್ಲಿಸಿದ್ದಾರೆ. ಈ ಎಲ್ಲ ನಾಮಪತ್ರಗಳು ಕಾಂಗ್ರೆಸ್‌ ಪಕ್ಷದಿಂದ ಸಲ್ಲಿಕೆಯಾಗಿರುವುದು ವಿಶೇಷ.

ಮೊದಲ ದಿನ ಅಥಣಿ ಕ್ಷೇತ್ರಕ್ಕೆ ನಾಲ್ವರು ಕಾಂಗ್ರೆಸ್‌ದಿಂದ ನಾಮಪತ್ರ ಸಲ್ಲಿಸಿದರೆ, ಕಾಗವಾಡ ಕ್ಷೇತ್ರದಿಂದ ಐವರು ಅಭ್ಯರ್ಥಿಗಳು ಕಾಂಗ್ರೆಸ್‌ ಹೆಸರಿನಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. ಆದರೆ ತೀವ್ರ ಕುತೂಹಲ ಕೆರಳಿಸಿರುವ ಗೋಕಾಕ ಕ್ಷೇತ್ರದಿಂದ ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಕಾಗವಾಡ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ದಿಗ್ವಿಜಯ ಪವಾರ ದೇಸಾಯಿ(ಅಥಣಿ), ಚಂದ್ರಕಾಂತಇಮ್ಮಡಿ(ಬಾಳಿಗೇರಿ), ಓಂಪ್ರಕಾಶ ಪಾಟೀಲ (ಶಿವನೂರ), ಬಾಬಾಸಾಹೇಬ ಶಿಂದೆ(ಅನಂತಪುರ), ರವೀಂದ್ರ ಗಾಣಿಗೇರ(ಐನಾಪೂರ) ನಾಮಪತ್ರ ಸಲ್ಲಿಸಿದ್ದಾರೆ.  ಅಥಣಿ ಕ್ಷೇತ್ರದಿಂದ ಮಾಜಿ ಶಾಸಕ ಶಹಜಹಾನ್‌ ಡೊಂಗರಗಾವ್‌, ಸತ್ಯೆಪ್ಪ ಬೀರಪ್ಪ ಬಾಗೆನ್ನವರ, ಸಿದ್ರಾಮಗೌಡ ಪುರುಷೋತ್ತಮ ಪಾಟೀಲ, ಗಜಾನನ ಬಾಲಚಂದ್ರ ಮಂಗಸೂಳಿ ನಾಮಪತ್ರ ಸಲ್ಲಿಸಿದ್ದಾರೆ.

ಅಥಣಿ ಮತ್ತು ಕಾಗವಾಡ ವಿಧಾನಸಭಾ ಮತ ಕ್ಷೇತ್ರಗಳಿಗೆ ಅ. 21ರಂದು ನಡೆಯಲಿರುವ ಉಪ ಚುನಾವಣೆಗಾಗಿ ಸೋಮವಾರ ಕಾಂಗ್ರೆಸ್‌ ಪಕ್ಷದಿಂದ 9 ನಾಮ ಪತ್ರಗಳು ಸಲ್ಲಿಕೆಯಾಗಿವೆ.  ಅಥಣಿ ಮಿನಿ ವಿಧಾನಸಭೆಯಲ್ಲಿ ಅಥಣಿಯಿಂದ ನಾಲ್ಕು ಜನ ಕಾಂಗ್ರೆಸ್‌ ಪಕ್ಷದಿಂದ ನಾಮಪತ್ರಗಳನ್ನು ಸಲ್ಲಿಸಿದ್ದರೆ ಇನ್ನು ಕಾಗವಾಡದಿಂದ ಕಾಂಗ್ರೆಸ್‌ ಪಕ್ಷದಿಂದ 5 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮ ಪತ್ರ ಸಲ್ಲಿಕೆಯ ಮೊದಲ ದಿನವಾದ ಸೋಮವಾರ ಅಥಣಿ ಉಪ ಚುನಾವಣೆಗೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಾಗಿ ಶಹಜಾನ ಡೊಂಗರಗಾಂವ, ಸತ್ಯಪ್ಪ ಬಾಗೇನ್ನವರ, ಸಿದ್ರಮಗೌಡ ಪಾಟೀಲ(ಸುರೇಶ ಪಾಟೀಲ ಹಾಗೂ ಗಜಾನನ ಮಂಗಸೂಳಿ ನಾಮಪತ್ರ ಸಲ್ಲಿಸಿದ್ದಾರೆ.

ಅದೇ ರೀತಿಯಾಗಿ ಕಾಗವಾಡ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಾ ಆಕಾಂಕ್ಷಿಗಳಾಗಿ ಚಂದ್ರಕಾಂತ ಇಮಡಿ, ದಿಗ್ವಿಜಯ ಪವಾರದೇಸಾಯಿ, ರವೀಂದ್ರ ಗಾಣಗೇರ, ಓಂಪ್ರಕಾಶ ಪಾಟೀಲ ಹಾಗೂ ದಾದಾಸಾಬ ಸಿಂಧೆ ನಾಮ ಪತ್ರವನ್ನು ಸಲ್ಲಿಸಿದ್ದಾರೆ.ಈ ವೇಳೆ ಸತ್ಯಾಪ್ಪ ಬಾಗೇನ್ನವರ, ಸುರೇಶಗೌಡ ಪಾಟೀಲ, ಶಿವು ಗುಡ್ಡಾಪುರ, ಲೇನಿನ ಹಳಿಂಗಳಿ, ಮಾಂತೇಶ ಬಾಡಗಿ, ಅನೀಲ ಬಜಂತ್ರಿ, ಮಂಜು ಹೋಳಿಕಟ್ಟಿ, ರಫೀಕ ಪಟೇಲ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.