ಮೂಡಲಗಿಯ ಐದು ಸೇತುವೆಗಳು ಸಂಪೂರ್ಣ ಮುಳಗಡೆ: ಸಂಚಾರ ಸ್ಥಗಿತ
Team Udayavani, May 21, 2022, 11:15 AM IST
ಮೂಡಲಗಿ: ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹಿರಣ್ಯಕೇಶಿ ನದಿಯಿಂದ ಘಟಪ್ರಭಾ ನದಿಗೆ ನೀರು ಹರಿದು ಬರುತ್ತಿದ್ದು, ಮೂಡಲಗಿ ತಾಲೂಕಿನ ಘಟಪ್ರಭಾ ನದಿಯ ಐದು ಸೇತುವೆಗಳು (ಬ್ರೀಡ್ಜ್ ಕಂ ಬ್ಯಾರೇಜ್) ಹಾಗೂ ನದಿ ದಡದಲ್ಲಿರುವ ಕೃಷಿ ಭೂಮಿಗಳು ಜಲಾವೃತಗೊಂಡಿದೆ.
ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಘಟಪ್ರಭಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದರಿಂದ ಸುಣಧೋಳಿ, ಕಮಲದಿನ್ನಿ, ಹುಣಶ್ಯಾಳ ಪಿ.ವೈ, ಅವರಾದಿ, ಢವೇಳಶ್ವರ ಸೇತುವೆಗಳು ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.
ಕೊರೋನಾ ಸಂಕಷ್ಟ ಹಾಗೂ ಕಳೆದ ವರ್ಷ ಜೂನ್ ನಲ್ಲಿ ಭಾರಿ ಪ್ರಮಾಣದ ನೀರು ನುಗ್ಗಿ, ಸಾವಿರಾರೂ ಎಕರೆ ಕೃಷಿಗೆ ಹಾನಿಯುಂಟಾಗಿತ್ತು. ಈ ಭಾರಿ ಅದೇ ರೀತಿಯಲ್ಲಿ ಗೋವಿನ ಜೋಳ, ಕಬ್ಬಿನ ಗದ್ದೆಗಳಲ್ಲಿ ನೀರು ನುಗ್ಗಿದ್ದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಅಧಿಕಾರಿಗಳ ನಿರ್ಲಕ್ಷ: ಮಳೆಗಾಲ ಸಂದರ್ಭದಲ್ಲಿ ಸೇತುವೆಗಳಿಗೆ ಹಾಕಲಾಗಿದ್ದ ಗೇಟ್‌ಗಳನ್ನು ತೆಗೆಯದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಇದರಿಂದಾಗಿ ಸೇತುವೆಗಳು ಹಾಗೂ ರೈತರ ಗದ್ದೆಗಳಿಗೆ ನೀರು ನುಗ್ಗಿದೆ. ಗದ್ದೆಗಳಿಗೆ ನೀರು ನುಗ್ಗಿ ಬೆಳೆ ನಾಶವಾಗುತ್ತಿದ್ದು, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೇ ಇದಕ್ಕೆ ಕಾರಣ ಎಂದು ರೈತಾಪಿ ವರ್ಗದವರು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ ಕೈ ಸೇರದ ಬೆಳೆ ಪರಿಹಾರ: ಕಳದ ವರ್ಷ ಜೂನ್ ತಿಂಗಳಲ್ಲಿ ಮಳೆಯಿಂದಾಗಿ ಘಟಪ್ರಭಾ ನದಿಯ ನೀರಿನ ಮಟ್ಟ ಹೆಚ್ಚಾಗಿದರಿಂದ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷದಿಂದ ಸಾವಿರಾರೂ ಎಕರೆ ಗದ್ದೆಗಳಿಗೆ ನೀರು ನುಗ್ಗಿದ ಪರಿಣಾಮ ರೈತರು ಬೆಳದ ಬೆಳೆ ನಾಶವಾಗಿತ್ತು. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆಗಳು ಜಂಟಿಯಾಗಿ ಬೆಳೆ ಸಮಿಕ್ಷೆ ಮಾಡಿತ್ತು. ಹಾನಿಯಾದ ಬೆಳೆಗೆ ಕಂದಾಯ ಇಲಾಖೆಯಿಂದ ಪರಿಹಾರವನ್ನು ಕೊಡಿಸಲಾಗುವುದು ಎಂದು ಭರವಸೆಯನ್ನು ಅಧಿಕಾರಿಗಳು ನೀಡಿದ್ದರು. ಆದರೆ ಕೆಲವು ರೈತರಿಗೆ ಪರಿಹಾರ ನೀಡಿಲ್ಲ ಎಂದು ರೈತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಇದನ್ನೂ ಓದಿ:ಮೂರು ತಿಂಗಳಲ್ಲಿ ಎರಡನೇ ಬಾರಿ ವಿಶ್ವ ಚಾಂಪಿಯನ್ ಕಾರ್ಲ್‌ಸನ್ ವಿರುದ್ಧ ಗೆದ್ದ ಪ್ರಗ್ನಾನಂದ
ಗದ್ದೆಗಳಿಗೆ ನೀರು ನುಗ್ಗಲು ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ. ಮಳೆಯಾಗುವ ಸಂದರ್ಭದಲ್ಲಿ ಸೇತುವೆಗಳಿಗೆ ಅಡ್ಡಲಾಗಿ ಹಾಕಿರುವ ಗೇಟ್‌ಗಳನ್ನು ತೆಗೆಯಬೇಕು ಆದರೆ ಅಧಿಕಾರಿಗಳು ಗೇಟ್‌ಗಳನ್ನು ತೆಗೆಯದಿರುವುದರಿಂದ ರೈತರ ಬೆಳೆಗಳು ನಾಶವಾಗುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಅಷ್ಟೇ ಅಲ್ಲದೆ ರೈತರ ಪಂಪ್ ಸೆಟ್‌ಗಳು ನೀರಿನಲ್ಲಿ ಮುಳುಗಡೆಯಾಗಿವೆ. –ಪದ್ಮಾಕರ ಉಂದ್ರಿ ರೈತ ಸಂಘದ ಮುಖಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.