ಹಠಾತ್ ಪ್ರವಾಹ ಮುನ್ಸೂಚನೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ
Team Udayavani, Jul 25, 2023, 11:00 PM IST
ಬೆಳಗಾವಿ: ಹವಾಮಾನ ಇಲಾಖೆಯು ಉಡುಪಿ, ಉತ್ತರ ಕನ್ನಡ, ಮಹಾರಾಷ್ಟ್ರದ ಸಿಂಧುದುರ್ಗ, ರತ್ನಾಗಿರಿ, ಉತ್ತರ ಹಾಗೂ ದಕ್ಷಿಣ ಗೋವಾ ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ(ಫ್ಲ್ಯಾಷ್ ಫ್ಲಡ್) ಮುನ್ಸೂಚನೆ ನೀಡಿರುವುದರಿಂದ ಖಾನಾಪುರ ಸೇರಿದಂತೆ ಜಿಲ್ಲೆಯ ಜನರು ಕೂಡ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಹಠಾತ್ ಪ್ರವಾಹ(ಫ್ಲ್ಯಾಷ್ ಫ್ಲಡ್)ದ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಜಿಲ್ಲೆಯ ಖಾನಾಪುರ ತಾಲ್ಲೂಕು ಸೇರಿದಂತೆ ವಿವಿಧ ಜಿಲ್ಲೆಗಳ ಜಲಪಾತ ವೀಕ್ಷಣೆ ಅಥವಾ ಚಾರಣ ಕೈಗೊಳ್ಳದಿರುವುದು ಸೂಕ್ತ ಎಂದು ಅವರು ತಿಳಿಸಿದ್ದಾರೆ.
ಇಂತಹ ಸಂದರ್ಭಗಳಲ್ಲಿ ಗುಡ್ಡ ಕುಸಿಯುವ ಸಂಭವ ಇರುತ್ತದೆ. ಆದ್ದರಿಂದ ಪ್ರವಾಸಿಗರು ಮತ್ತು ಗುಡ್ಡದ ಮೇಲೆ ವಾಸಿಸುವ ಗ್ರಾಮಸ್ಥರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.
ನೆರೆಯ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ ಮುನ್ಸೂಚನೆ ಇರುವುದರಿಂದ ಅಧಿಕಾರಿಗಳು ಖಾನಾಪುರ ಸೇರಿದಂತೆ ಗಡಿಭಾಗದ ತಾಲ್ಲೂಕುಗಳಲ್ಲಿ ನಿರಂತರ ನಿಗಾ ವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.