ಜನರ ನೋವಿಗೆ ಪ್ರಧಾನಿ ಸ್ಪಂದನೆ


Team Udayavani, Jun 21, 2020, 2:32 PM IST

ಜನರ ನೋವಿಗೆ ಪ್ರಧಾನಿ ಸ್ಪಂದನೆ

ಬೆಳಗಾವಿ: ದೇಶದಲ್ಲಿ ಲಾಕ್‌ಡೌನ್‌ದಿಂದಾಗಿ ಸಂಕಷ್ಟದಲ್ಲಿರುವ ಜನರ ಕಣ್ಣೀರು ಒರೆಸುವ ಕೆಲಸ ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ದೇಶದ ಜನರು ನೆಮ್ಮದಿಯಿಂದ ಬಾಳಬೇಕು ಎಂಬ ಉದ್ದೇಶದಿಂದ ಆರ್ಥಿಕ ಪರಿಹಾರ ನೀಡುತ್ತಿದ್ದಾರೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

ಹಿಂಡಲಗಾದಲ್ಲಿರುವ ಗ್ರಾಮೀಣ ಬಿಜೆಪಿ ಮಂಡಳ ಕಚೇರಿಯಲ್ಲಿ ಶನಿವಾರ ನಾಭಿಕ ಸಮಾಜ ಬಾಂಧವರಿಗೆ ಆಹಾರ ಕಿಟ್‌ಗಳನ್ನು ವಿತರಿಸಿ ಅವರು ಮಾತನಾಡಿದರು. ಈಗಾಗಲೇ ವಿವಿಧ ಸಮುದಾಯದ ಜನರಿಗೆ ಆರ್ಥಿಕ ಪರಿಹಾರ ನೀಡುವ ಕಾರ್ಯ ಪ್ರಗತಿಯಲ್ಲಿದೆ. ಕರ್ನಾಟಕದಲ್ಲಿಯೂ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅನೇಕ ಸವಾಲುಗಳನ್ನು ಎದುರಿಸಿ ಕೋವಿಡ್ ಸಂದರ್ಭದಲ್ಲಿ ಕಷ್ಟ ಪಡುತ್ತಿರುವ ಕುಟುಂಬಗಳಿಗೆ ಪರಿಹಾರ ನೀಡುವ ಮೂಲಕ ಅವರ ನೋವಿಗೆ ಸ್ಪಂದಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಅನೇಕ ಕುಟುಂಬಗಳಿಗೆ ಸರ್ಕಾರ ಸಹಾಯ ಮಾಡಿದೆ ಎಂದು ಹೇಳಿದರು. ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿ, ದೇಶದಲ್ಲಿ ಕೋವಿಡ್ ಬಂದಾಗಿನಿಂದ ಅದನ್ನು ಎದುರಿಸುವ ಸಾಮರ್ಥ್ಯ ಭಾರತೀಯರು ಹೊಂದಿದ್ದಾರೆ. ಭಾರತೀಯರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುವುದರಿಂದ ಕೋವಿಡ್ ಅಷ್ಟೊಂದು ಪ್ರಭಾವ ಬೀರಿಲ್ಲ. ಮೊದಲನೇ ದಿನದಿಂದಲೂ ಕಟ್ಟುನಿಟ್ಟಿನ ನಿಯಮ ಪಾಲನೆ ಮಾಡುತ್ತ ಕೋವಿಡ್ ವಿರುದ್ಧ ಹೋರಾಟ ನಡೆಸಲಾಗುತ್ತಿದೆ. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದನ್ನು ಮುಂದುವರಿಸಬೇಕಾದ ಅಗತ್ಯವಿದೆ ಎಂದರು.

ಬಿಜೆಪಿ ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ ಜಾಧವ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೋವಿಡ್ ಹಿಮ್ಮೆಟ್ಟಿಸಲು ಉತ್ತಮ ನಿರ್ಧಾರ ಕೈಗೊಂಡಿವೆ. ಕೊರೊನಾ ಕಾಲಿಟ್ಟ ಕೂಡಲೇ ಪ್ರಧಾನಿ ಮೋದಿ ಅವರು ಲಾಕ್‌ಡೌನ್‌ ನಿರ್ಧಾರ ಕೈಗೊಳ್ಳುವ ಮೂಲಕ ಕೋವಿಡ್ ಸೋಂಕು ನಿಯಂತ್ರಣಕ್ಕೆ ನಾಂದಿ ಹಾಡಿದರು. ಪ್ರಾರಂಭದಲ್ಲಿಯೇ ಇದಕ್ಕೆ ಕಡಿವಾಣ ಹಾಕಿ ಮಹಾಮಾರಿ ಹರಡದಂತೆ ತೆಗೆದುಕೊಂಡ ನಿರ್ಧಾರ ವಿಶ್ವಕ್ಕೆ ಮಾದರಿ ಆಯಿತು ಎಂದರು.

ಲಡಾಕ್‌ನಲ್ಲಿ ಚೀನಾ ಹೇಯ ಕೃತ್ಯಕ್ಕೆ ಹುತಾತ್ಮರಾದ ಭಾರತೀಯ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಆಹಾರದ ಪೊಟ್ಟಣಗಳನ್ನು ವಿತರಿಸಿದರು. ಮುಖಂಡರಾದ ಶಿವಾಜಿ ಸುಂಠಕರ, ಮನೋಹರ ಕಡೋಲ್ಕರ, ರಾಮಚಂದ್ರ ಮನ್ನೋಳಕರ, ಪ್ರವೀಣ ಪಾಟೀಲ, ಭಾಗ್ಯಶ್ರೀ ಕೋಕಿತಕರ, ರಂಜನಾ ಕೋಲಕಾರ, ಜ್ಯೋತಿಬಾ ಮೋರೆ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ

ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Tejasvi-surya

Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್‌ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ

Belagavi-SDA-Suside

Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್‌ ಪತ್ತೆ: ಪೊಲೀಸರಿಂದ ತನಿಖೆ ಚುರುಕು

lakshmi hebbalkar

Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.