ಕಾರ್ಯಕರ್ತರ ಮೇಲಿನ ಪ್ರಕರಣ ಹಿಂಪಡೆಯಲು ಒತ್ತಾಯ
ಡಿವೈಎಸ್ಪಿ ಕಚೇರಿವರೆಗೆ ಜೆಡಿಎಸ್ ಪ್ರತಿಭಟನಾ ಮೆರವಣಿಗೆ
Team Udayavani, Aug 7, 2022, 3:13 PM IST
ಬೈಲಹೊಂಗಲ: ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೋರಾಟ ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಡಿವೈಎಸ್ಪಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ತೆರಳಿ ಅಸಮಾಧಾನ ಹೊರ ಹಾಕಿದರು.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ ಮಾತನಾಡಿ, ಪೊಲೀಸರು ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕುವುದು ಬಿಟ್ಟು ಜೆಡಿಎಸ್ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವುದು ಅಕ್ಷಮ್ಯ ಅಪರಾಧ. ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸಿ ಕೊಡಲು ಅವರು ಶ್ರಮಿಸಬೇಕು. ಕಾರ್ಯಕರ್ತರ ಮೇಲೆ ಹಾಕಿದ ಸುಳ್ಳು ಪ್ರಕರಣ ಹಿಂಪಡೆಯುವಂತೆ ಒತ್ತಾಯಿಸಿದರು.
ಈ ವೇಳೆ ಜಿಲ್ಲಾ ವಕ್ತಾರ ಸಣಗೌಡ ಸಂಗನಗೌಡರ, ಜಿಲ್ಲಾ ಯುವ ಅಧ್ಯಕ್ಷ ಸುನೀಲ ವೆರ್ಣೆಕರ, ತಾಲೂಕು ಅಧ್ಯಕ್ಷ ಎಸ್.ವಿ. ಪಾಟೀಲ, ನಿಂಗಪ್ಪ ಕಂಬಳಿ, ಫಕೀರ ಕಡಕೋಳ, ಪುಂಡಲೀಕ ಸಾಣಿಕೊಪ್ಪ, ನಾಗಪ್ಪ ಸವದತ್ತಿ, ಬಸು ವಣ್ಣೂರ, ಸುನೀಲ ಮೇಟಿ, ಆನಂದ ಕಾಜಗಾರ, ಸಂತೋಷ ಪಶುಪತಿಮಠ ಇತರರಿದ್ದರು.
ಕಾನೂನು ಮೀರಿದರೆ ಕ್ರಮ: ಡಿವೈಎಸ್ಪಿ ಕಟಗಿ
ಕಾನೂನು ದೃಷ್ಟಿಯಲ್ಲಿ ಎಲ್ಲರೂ ಒಂದೇ. ಯಾರೂ ಹೆಚ್ಚು ಕಡಿಮೆ ಇಲ್ಲ. ಸಾರ್ವಜನಿಕ ಸ್ಥಳದಲ್ಲಿ ವಿನಾಕಾರಣ ದಾಂಧಲೆ ಮಾಡಿ ಅಮಾಯಕರ ಮೇಲೆ ಹಲ್ಲೆ ಮಾಡಿದರೆ ಸುಮ್ಮನೇ ಕುಳಿತುಕೊಳ್ಳಲು ಆಗಲ್ಲ. ಕಾನೂನು ಮೀರಿ ಯಾರೇ ನಡೆದುಕೊಂಡರೂ ಅಂಥವರ ವಿರುದ್ಧ ಕ್ರಮ ವಹಿಸಲಾಗುವುದು. ಒಂದು ಪಕ್ಷದ ಕಾರ್ಯಕರ್ತರು ಎಂದೆನಿಸಿಕೊಳ್ಳುವ ಕೆಲ ಯುವಕರು ಮದ್ಯದ ಅಮಲಿನಲ್ಲಿ ಬಾರ್ -ರೆಸ್ಟೋರೆಂಟ್‌ನಲ್ಲಿ ಗಲಾಟೆ ಮಾಡಿದ್ದಲ್ಲದೇ ಮಾಲೀಕ, ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಇದು ಸತ್ಯ ಘಟನೆ. ಆ ವ್ಯಕ್ತಿಗಳು ಅಪರಾಧ ಹಿನ್ನೆಲೆಯಳ್ಳವರಾಗಿದ್ದಾರೆ. ಹೀಗಾಗಿ ಅವರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಡಿವೈಎಸ್ಪಿ ಶಿವಾನಂದ ಕಟಗಿ ಸುದ್ದಿಗಾರರಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.