![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 30, 2022, 2:57 PM IST
ಚಿಕ್ಕೋಡಿ: ಕೃಷ್ಣಾ ನದಿ ತಟದ ಚೆಂದೂರ, ಯಡೂರ ಮತ್ತು ಯಡೂರವಾಡಿ ಗ್ರಾಮದ ವ್ಯಾಪ್ತಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಕಳೆದ ಒಂದು ವಾರದಿಂದ ಜನ ಭಯ ಭೀತಿಯಲ್ಲಿದ್ದು, ಚಿರತೆ ಹಿಡಿಯಲು ಅರಣ್ಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಕೃಷ್ಣಾ ನದಿ ತೀರದ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಚಿರತೆ ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದೆ ಎಂದು ಜನ ಅಲ್ಲಲ್ಲಿ ಮಾತನಾಡುವುದು ಕಂಡು ಬಂದಿತ್ತು. ಕುರಿ, ಆಡು ಮತ್ತು ನಾಯಿ ಮೇಲೆ ದಾಳಿ ಮಾಡಿದ ಮೇಲೆ ಚಿರತೆ ಇರುವುದು ಖಚಿತವಾಗಿತ್ತು. ಈಗಾಗಲೇ ಮೂರು ಗ್ರಾಮದಲ್ಲಿ ಎರಡರಿಂದ ಮೂರು ನಾಯಿ ಮತ್ತು ಮೇಕೆಗಳನ್ನು ಎಳೆದು ತಿಂದಿರುವುದು ಖಚಿತವಾಗಿದೆ.
ಸುದ್ದಿ ತಿಳಿದ ಕೂಡಲೇ ಚಿಕ್ಕೋಡಿ ಅರಣ್ಯ ಇಲಾಖೆ ಸಿಬ್ಬಂದಿಗಳು ಚೆಂದೂರ. ಚಂದೂರ ಟೇಕ ಮತ್ತು ಯಡೂರ ಗ್ರಾಮದಲ್ಲಿ ಸಂಚರಿಸಿ ಪರಿಶೀಲಿಸಿದ್ದು. ಚಿರತೆಯ ಹೆಜ್ಜೆ ಗುರ್ತು ಕಾಣಿಸಿವೆ. ನಿನ್ನೆ ರಾತ್ರಿ ಚಿರತೆ ನಾಯಿ ಮೇಲೆ ದಾಳಿ ಮಾಡಿರುವ ವಿಡಿಯೋ ವೈರಲ್ ಆಗಿದೆ. ಇದರಿಂದ ಅರಣ್ಯ ಇಲಾಖೆ ಸಿಬ್ಬಂದಿಗಳು ಮೂರು ಗ್ರಾಮದಲ್ಲಿ ಚಿರತೆ ಹಿಡಿಯುವ ಮೂರು ಬೋನ್ ಇಟ್ಟು ಹಿಡಿಯಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ.
ರಾತ್ರಿ ಹೊತ್ತು ಜನರು ಹೊರಬರದಂತೆ ಡಂಗೂರ: ರಾತ್ರಿ ಹೊತ್ತು ಒಬ್ಬೊಬ್ಬರಾಗಿ ತಿರುಗಾಡಬಾರದೆಂದು ಆಯಾ ಗ್ರಾಮ ಪಂಚಾಯತಿ ವತಿಯಿಂದ ಡಂಗೂರ ಸಾರಿದ್ದಾರೆ. ಕೃಷ್ಣಾ ನದಿ ನೀರಿನ ಮಟ್ಟ ಇಳಿಕೆ ಕಂಡಿರುವುದರಿಂದ ಜಮೀನಿಗೆ ನೀರಿನ ಪಂಪ್‌ಸೆಟ್ ಚಾಲು ಮಾಡಲು ರೈತರು ಹೊಲಗಳತ್ತ ಹೋಗುತ್ತಾರೆ. ಚಿರತೆ ಇರುವುದರಿಂದ ಜನ ಆತಂಕಗೊಂಡಿದ್ದು. ರಾತ್ರಿ ಹೊತ್ತು ನಾಲ್ಕೈದು ಜನ ಕೂಡಿಕೊಂಡು ಹೊರಗೆ ಹೋಗಬೇಕೆಂದು ಡಂಗೂರ ಸಾರಿದ್ದಾರೆ.
ಶೀಘ್ರವಾಗಿ ಹಿಡಿಯುತ್ತೇವೆ: ಯಡೂರ, ಚೆಂದೂರ ಮತ್ತು ಚೆಂದೂರ ಟೇಕ ಗ್ರಾಮಗಳಲ್ಲಿ ಚಿರತೆ ಇರುವುದು ನಿಜ. ಚಿರತೆ ಹಿಡಿಯಲು ಅರಣ್ಯ ಇಲಾಖೆ ಎಲ್ಲ ಕ್ರಮ ಕೈಗೊಂಡಿದೆ. ಬೋನು ಮತ್ತು ಕ್ಯಾಮೆರಾ ಅಳವಡಿಸಿದ್ದು, ಶೀಘ್ರವಾಗಿ ಚಿರತೆ ಹಿಡಿಯುತ್ತೇವೆ. ಜನರು ಹೆದರುವ ಅವಶ್ಯಕತೆ ಇಲ್ಲ. –ಪ್ರಶಾಂತ ಗೌರಾಣಿ ಆರ್‌ಎಫ್‌ಒ, ಚಿಕ್ಕೋಡಿ
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.