ಘಟಪ್ರಭಾದಲ್ಲಿ ರೈತರಿಂದ ರಸ್ತೆ ತಡೆ
•20ಕ್ಕೆ ಜಿಲ್ಲಾಧಿಕಾರಿ ಕಚೆೇರಿಗೆ ಮುತ್ತಿಗೆ •ಎಡದಂಡೆ ಕಾಲುವೆಗೆ ನೀರು ಹರಿಸಲು ಆಗ್ರಹ
Team Udayavani, May 15, 2019, 12:13 PM IST
ಘಟಪ್ರಭಾ: ಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ಮೃತ್ಯುಂಜಯ ಸರ್ಕಲ್ನಲ್ಲಿ ರೈತರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಘಟಪ್ರಭಾ: ಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ಮಂಗಳವಾರ ಘಟಪ್ರಭಾ ಮೃತ್ಯುಂಜಯ ಸರ್ಕಲ್ನಲ್ಲಿ ರೈತರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗೋಕಾಕ, ಮೂಡಲಗಿ, ರಾಯಬಾಗ, ಮುಧೋಳ, ಜಮಖಂಡಿ, ಬೀಳಗಿ ತಾಲೂಕು ಭಾಗದ ರೈತರು ಆಗಮಿಸಿ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡ ಚೂನ್ನಪ್ಪ ಪೂಜೇರಿ ಮಾತನಾಡಿ, ಮೇ 24ರಿಂದ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ 2ಟಿಎಂಸಿ ಅಡಿ ನೀರು ಬಿಡುತ್ತಿದ್ದು, ಅದರಲ್ಲಿ 1 ಟಿಎಂಸಿ ನೀರನ್ನು ಎಡದಂಡೆ ಕಾಲುವೆಗೆ ಹರಿಸಬೇಕು. ಈಗಾಗಲೆ ಈ ಭಾಗದ ಜನ-ಜಾನುವಾರುಗಳಿಗೆ ಕುಡಿಯುವ ನೀರಿಲ್ಲದೇ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಕೆರೆ, ಬಾವಿ, ಬೋರ್‌ವೆಲ್ಗಳು ಸಂಪೂರ್ಣ ಬತ್ತಿ ಹೋಗಿರುವುದರಿಂದ ನೀರಿಗಾಗಿ ಪರದಾಡಬೇಕಾಗಿದೆ ಎಂದು ಆಗ್ರಹಿಸಿದರು.
ಇದೇ ಬೇಡಿಕೆಗೆ ಆಗ್ರಹಿಸಿ 20ರಂದು ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೂರಾರು ರೈತರು ಸೇರಿ ನೀರು ಬಿಡಲು ಆಗ್ರಹಿಸಿ ಮುತ್ತಿಗೆ ಹಾಕಲು ನಿರ್ಧರಿಸಿರುವುದಾಗಿ ತಿಳಿಸಿದರು. ರೈತರ ಮನವಿ ಸ್ವೀಕರಿಸಿದ ನೀರಾವರಿ ನಿಗಮದ ಅಧಿಕಾರಿ ಕಲ್ಲಪ್ಪ ಕೊಣ್ಣೂರಕರ ಮಾತನಾಡಿ, ಹಿಡಕಲ್ ಜಲಾಶಯದಿಂದ ನೀರು ಬಿಡುವುದಾಗಲಿ ಹಾಗೂ ಕಾಲುವೆಗೆ ನೀರು ಬಿಡುವ ಅಧಿಕಾರ ನಮ್ಮ ಕೈಯಲ್ಲಿ ಇಲ್ಲ ರೈತರು ನೀಡಿದ ಮನವಿಯನ್ನು ಮೇಲಧಿಕಾರಿಗಳಿಗೆ ಕಳುಹಿಸಿ ಕೊಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಗಂಗಾಧರ ಮೇಟಿ, ಕಲ್ಯಾಣ ಮಗದುಮ, ಕಲ್ಲನ್ನಗೌಡ ಪಾಟೀಲ, ಮಂಜು ಗದಾಡಿ, ಲಕ್ಕಪ್ಪ ಕಣದಾಳೆ, ರಮೇಶ ಕಪ್ಪಲಗುದ್ದಿ, ಜಗದೀಶ ಮುತ್ನಾಳಿ ಹಾಗೂ ಬಾಗಲಕೋಟೆ, ಜಮಖಂಡಿ, ಮುಧೋಳ, ಬೀಳಗಿ, ರಾಯಬಾಗ, ಮೂಡಲಗಿ, ಗೋಕಾಕ ತಾಲೂಕಿನ ರೈತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.