ಮಾಜಿ ಶಾಸಕ, ಅಪ್ಪಟ ಗಾಂಧಿವಾದಿ ಸದಾಶಿವರಾವ್ ಭೋಸಲೆ ಇನ್ನಿಲ್ಲ
Team Udayavani, Apr 15, 2021, 10:57 AM IST
ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ, ಗಾಂಧಿವಾದಿ ಹಾಗೂ ಮಾಜಿ ಶಾಸಕ ಸದಾಶಿವರಾವ್ ಬಾಪುಸಾಹೇಬ ಭೋಸಲೆ (101) ಗುರುವಾರ ಬೆಳಗ್ಗೆ ತಾಲೂಕಿನ ಕಡೋಲಿ ಗ್ರಾಮದ ತಮ್ಮ ನಿವಾಸದಲ್ಲಿ ನಿಧನ ಹೊಂದಿದರು.
ಕೆಲವು ದಿನಗಳಿಂದ ಸದಾಶಿವರಾವ್ ಅವರು ವಯೋಸಹಜ ಅನಾರೋಗ್ಯದಿಂದಾಗಿ ಬಳಲುತ್ತಿದ್ದರು. ಇತ್ತೀಚೆಗೆ ಸಾರ್ವಜನಿಕ ಕಾರ್ಯಕ್ರಮಗಳನಲ್ಲಿಯೂ ಪಾಲ್ಗೊಳ್ಳುತ್ತಿರಲಿಲ್ಲ. ಸದಾಶಿವ ರಾವ್ ಭೋಸಲೆ ಅವರು ಪುತ್ರ, ಪುತ್ರಿ ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ. ಗುರುವಾರ ಮಧ್ಯಾಹ್ನ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಅಪ್ಪಟ ಗಾಂಧಿವಾದಿ ಆಗಿದ್ದ ಮಾಜಿ ಸದಾಶಿವರಾವ್ ಭೋಸಲೆ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಗಾಂಧೀಜಿ ಹಾಗೂ ವಿನೋಬಾ ಭಾವೆ ಅವರ ವಿಚಾರಧಾರೆ, ಆದರ್ಶಗಳನ್ನು ಅಳವಡಿಸಿಕೊಂಡಿದ್ದರು. ಜೀವನದ ಕೊನೆಯ ದಿನಗಳವರೆಗೂ ಆ ವಿಚಾರಧಾರೆಗಳಿಗೆ ಕಟಿಬದ್ಧರಾಗಿದ್ದರು.
ಇದನ್ನೂ ಓದಿ:10 ದಿನಗಳಲ್ಲಿ ಮತ್ತಷ್ಟು ಹೆಚ್ಚಳ; ಭಾರತದಲ್ಲಿ 24 ಗಂಟೆಯಲ್ಲಿ 2 ಲಕ್ಷ ಕೋವಿಡ್ ಪ್ರಕರಣ ಪತ್ತೆ
ಬ್ರಿಟಿಷ್ ಸರ್ಕಾರ 1946ರಲ್ಲಿ ಚುನಾವಣೆ ನಡೆಸಿದಾಗ ಬೆಳಗಾವಿಯು ಮುಂಬೈ ಪ್ರಾಂತ್ಯಕ್ಕೆ ಒಳಪಟ್ಟಿತ್ತು. ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿದ್ದರು. 1952ರಲ್ಲಿ ಹಿರೇಬಾಗೇವಾಡಿ ಕ್ಷೇತ್ರದಿಂದ ಶಾಸಕರಾಗಿದ್ದರು. ಸರ್ಕಾರ ಬಡವರ ಪರವಾಗಿ ಕೆಲಸ ಮಾಡುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿ 1954ರಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಭೂ ದಾನ ಚಳವಳಿಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ: ಸೋಂಕು ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಇನ್ನಷ್ಟು ನಗರಗಳಿಗೆ ವಿಸ್ತರಣೆ: ಗೃಹ ಸಚಿವ ಬೊಮ್ಮಾಯಿ
ತಮಗೆ ಹಾಗೂ ಪತ್ನಿಗೆ ಬೇಕಾದ ಖಾದಿ ಬಟ್ಟೆಗಳನ್ನು ಚರಕದಲ್ಲಿ ಸ್ವತಃ ಅವರೇ ಸಿದ್ಧಪಡಿಸಿಕೊಳ್ಳುತ್ತಿದ್ದರು. ಗ್ರಾಮದಲ್ಲಿ ಸಾವಯವ ಕೃಷಿ ನಡೆಸುತ್ತಿದ್ದರು. ಸರಳ ಜೀವನ ನಡೆಸುತ್ತಿದ್ದರು. ಕಡೋಲಿ ಸಮೀಪದ ದೇವಗಿರಿಯಲ್ಲಿ ಕಟ್ಟಡ ಕಟ್ಟಿಸಿ ಅದಕ್ಕೆ ‘ಗಾಂಧಿ ಘರ್’ಎಂದು ಹೆಸರಿಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.