ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ಎಸ್.ಬಿ. ಸಿದ್ನಾಳ್ ನಿಧನ
Team Udayavani, Apr 27, 2021, 9:54 AM IST
ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ನಾಲ್ಕು ಬಾರಿ ಸಂಸದರಾಗಿದ್ದ ಮಾಜಿ ಸಂಸದ, ಹಿರಿಯ ರಾಜಕಾರಣಿ ಎಸ್.ಬಿ. ಸಿದ್ನಾಳ(85) ಅವರು ಮಂಗಳವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ವಿಧಿವಶರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಬಿ. ಸಿದ್ನಾಳ ಅವರು ಮನೆಯಲ್ಲಿಯೇ ಇದ್ದರು. ಕೆಲ ದಿನಗಳಿಂದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಗುರುತಿಸಿಕೊಂಡಿರಲಿಲ್ಲ. ಬೈಲಹೊಂಗಲ ತಾಲೂಕಿನ ಸಾಣೆಕೊಪ್ಪ ಗ್ರಾಮದ ಫಾರ್ಮ್ ಹೌಸ್ ನಲ್ಲಿ ಪಾರ್ಥಿವ ಶರೀರವನ್ನು ಮಂಗಳವಾರ ಮಧ್ಯಾಹ್ನ12ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಸಂಜೆ 5 ಗಂಟೆಯ ಸುಮಾರಿಗೆ ಸಾಣೆಕೊಪ್ಪದ ಹೊಲದಲ್ಲಿಯೇ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೂಲತಃ ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದ ಎಸ್.ಬಿ.ಸಿದ್ನಾಳ ಅವರು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದವರಾಗಿದ್ದಾರೆ. ಇವರ ತಂದೆ ಬಸಪ್ಪ ಸಿದ್ನಾಳ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಮೂಲತಃ ಕೃಷಿಕರು ಹಾಗೂ ವಕೀಲರಾಗಿದ್ದ ಎಸ್.ಬಿ. ಸಿದ್ನಾಳ 1978ರಲ್ಲಿ ಬೆಳಗಾವಿಗೆ ಬಂದು 1979ರಲ್ಲಿ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದರು.
ಇದನ್ನೂ ಓದಿ:ಮೇ 1ರಂದು ಭಾರತಕ್ಕೆ ಮೊದಲ ಹಂತದ ಸ್ಫುಟ್ನಿಕ್-5 ಲಸಿಕೆ ಸರಬರಾಜು: ರಷ್ಯಾ
ನಂತರ 1980ರಲ್ಲಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದರು. ಬಳಿಕ 1984, 1989 ಹಾಗೂ 1991ರಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದರು. ನಂತರ ನಡೆದ ಚುನಾವಣೆಯಲ್ಲಿ ಇವರಿಗೆ ಟಿಕೆಟ್ ಸಿಗಲಿಲ್ಲ. ಇದಕ್ಕೂ ಮುನ್ನ ಕಿತ್ತೂರು ಮತ ಕ್ಷೇತ್ರದಿಂದ ವಿಧಾನಸಭೆಗೆ 1972ರಲ್ಲಿ ಬಿ.ಡಿ. ಇನಾಮದಾರ ಅವರ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು.
ಒಳ್ಳೆಯ ವಾಗ್ಮಿ ಆಗಿದ್ದ ಎಸ್.ಬಿ.ಸಿದ್ನಾಳ ಅವರು ರಾಜಕೀಯದಲ್ಲಿ ಅನೇಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
Belgavi; ಕರಾಳ ದಿನಾಚರಣೆ ನಡೆಸಿದ ಎಂಇಎಸ್ ನವರ ವಿರುದ್ಧ ಪ್ರಕರಣ ದಾಖಲು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.