ಪ್ರಾಣಿ ಸಂಗ್ರಹಾಲಯ ಅಭಿವೃದ್ಧಿಗೆ ಹೆಚ್ಚು ಒತ್ತು
Team Udayavani, Jan 7, 2019, 12:15 PM IST
ಬೆಳಗಾವಿ: ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಪ್ರಾಣಿ ಉದ್ಯಾನದಲ್ಲಿರುವ ಪ್ರಾಣಿ ಸಂಗ್ರಹಾಲಯವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ತಾಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರವಿವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿ, ಪ್ರಾಣಿ ಸಂಗ್ರಹಾಲಯವನ್ನು ಮಾದರಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಈ ಭಾಗದಲ್ಲಿಯೇ ಅತ್ಯುತ್ತಮ ಸಂಗ್ರಹಾಲಯ ಇದಾಗಲಿದೆ. ಈಗಾಗಲೇ ರಾಜ್ಯ ಸರ್ಕಾರ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಕೈ ಜೋಡಿಸುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರಮವಾಗಿ ಕೆಲವು ಯೋಜನೆಗಳನ್ನು ಹಾಕಿಕೊಳ್ಳಲಾಗುವುದು. ಪ್ರವಾಸಿಗರನ್ನು ಸಂಗ್ರಹಾಲಯದತ್ತ ಸೆಳೆಯುವ ಪ್ರಯತ್ನ ಸರಕಾರದ್ದಾಗಿದೆ ಎಂದರು.
ಪ್ರಾಣಿ ಸಂಗ್ರಹಾಲಯಕ್ಕಾಗಿ 1.85 ಕಿ.ಮೀ. ಉದ್ದ ಹಾಗೂ 8 ಅಡಿ ಎತ್ತರದ ತಡೆ ಗೋಡೆ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ಎರಡು ಕೋಟಿ ರೂ. ಮಂಜೂರಾಗಿದೆ. ಮತ್ತೆ ಕ್ರಮವಾಗಿ ಅರಣ್ಯ ಇಲಾಖೆಯಿಂದ ಅನುದಾನವನ್ನು ಬಿಡುಗಡೆಗೊಳಿಸಲಾಗುವುದು. ಈ ಭಾಗದ ಎಲ್ಲ ಜನರಿಗೂ ಈ ಉದ್ಯಾನವನ ಪ್ರಶಾಂತ ತಾಣವಾಗಿ ರೂಪಿತವಾಗಲಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಇಲ್ಲಿ ಯಾವ ಅಭಿವೃದ್ಧಿ ಕೈಗೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುವುದು ಎಂದರು.
ಈ ವೇಳೆ ಸಂಸದ ಸುರೇಶ ಅಂಗಡಿ, ಮೇಯರ್ ಬಸಪ್ಪ ಚಿಕ್ಕಲದಿನ್ನಿ, ಜಿಲ್ಲಾಧಿಕಾರಿ ಡಾ| ಎಸ್.ಬಿ. ಬೊಮ್ಮನಹಳ್ಳಿ, ಪಾಲಿಕೆ ಆಯುಕ್ತ ಶಶಿಧರ ಕುರೇರ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿ.ಬಿ. ಕರುಣಾಕರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ವಿ. ಅಮರನಾಥ ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು, ಅರಣ್ಯ ರಕ್ಷಕರು ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.
ಭೂತರಾಮನಹಟ್ಟಿಗೆ ಎರಡು ಹುಲಿ
ಭೂತರಾಮನಹಟ್ಟಿ ಪ್ರಾಣಿ ಸಂಗ್ರಹಾಲಯ ಬೆಳೆಸುವ ಉದ್ದೇಶದಿಂದ ಮೊದಲ ಹಂತದಲ್ಲಿ ಎರಡು ಹುಲಿಗಳನ್ನು ತರಿಸಲಾಗುವುದು. ಪ್ರವಾಸಿ ತಾಣವನ್ನಾಗಿ ಮಾಡುವ ಮೂಲಕ ಇದನ್ನು ಅಭಿವೃದ್ಧಿಪಡಿಸಲಾಗುವುದು. ಎರಡು ಹುಲಿಗಳನ್ನು ಬಿಟ್ಟು ಟೈಗರ್ ಸಫಾರಿ ಮಾಡಲಾಗುವುದು. ಜತೆಗೆ 18 ವಿವಿಧ ಪ್ರಕಾರದ ಪ್ರಾಣಿಗಳನ್ನು ಸಂಗ್ರಹಾಲಯದಲ್ಲಿ ಇರಿಸಲಾಗುವುದು. ಉದ್ಯಾನ ಮತ್ತು ಪ್ರಾಣಿ ಸಂಗ್ರಹಾಲಯಕ್ಕೆ ಕುಡಿಯುವ ನೀರು ಪೂರೈಸಲು ಮಾರ್ಕಂಡೇಯ ನದಿಯಿಂದ ನೀರು ಒದಗಿಸಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
MUST WATCH
ಹೊಸ ಸೇರ್ಪಡೆ
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.