ನಗರದಲ್ಲಿನ್ನು ನಾಲ್ಕು ಹೋಲ್‌ಸೇಲ್‌ ಮಾರ್ಕೆಟ್‌


Team Udayavani, Apr 4, 2020, 3:21 PM IST

bg-tdy-1

ಬೆಳಗಾವಿ: ಕೋವಿಡ್ 19 ವೈರಸ್‌ ಹಿನ್ನೆಲೆಯಲ್ಲಿ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕೆ ಕ್ರಮವಹಿಸಲಾಗಿದೆ. ಈಗ ಎಪಿಎಂಸಿ ಪ್ರಾಂಗಣದಲ್ಲಿ ಜನಸಂದಣಿ ಕಡಿಮೆಗೊಳಿಸುವ ದೃಷ್ಟಿಯಿಂದ ನಗರಹೊರವಲಯದ ನಾಲ್ಕು ದಿಕ್ಕುಗಳಲ್ಲಿ ಪ್ರತ್ಯೇಕ ಹೋಲಸೇಲ್‌ ತರಕಾರಿ ಮಾರಾಟಕ್ಕೆ ಸ್ಥಳ ನಿಗದಿಪಡಿಸಲಾಗಿದ್ದು, ಸೋಮವಾರದಿಂದ ನಿಗದಿತ ನಾಲ್ಕು ಸ್ಥಳಗಳಲ್ಲಿ ಮಾತ್ರವೇ ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಎಸ್‌ .ಬಿ.ಬೊಮ್ಮನಹಳ್ಳಿ ಹೇಳಿದರು.

ನಗರದ ಎಪಿಎಂಸಿ ಕಚೇರಿಯಲ್ಲಿ ಶುಕ್ರವಾರ ನಡೆದ ವರ್ತಕರ ಸಭೆಯಲ್ಲಿ ಮಾತನಾಡಿದ ಅವರು, ಸೋಮವಾರದಿಂದ ನಗರದ ಹೊರವಲಯದ ಹಿಂಡಾಲ್ಕೋ ಮೈದಾನ, ಆರ್‌.ಟಿ.ಓ ಮೈದಾನ, ಪೊದ್ದಾರ್‌ ಶಾಲಾ ಮೈದಾನ ಹಾಗೂ ಬಿ.ಎಸ್‌.ಯಡಿಯೂರಪ್ಪ ಮಾರ್ಗದ ಗಾಳಿಪಟ ಉತ್ಸವ(ಮಾಲಿನಿ ಸಿಟಿ) ಮೈದಾನ ಹೀಗೆ ನಾಲ್ಕು ದಿಕ್ಕುಗಳಲ್ಲಿ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರವೇ ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ನಿಗದಿತ ಈ ಸ್ಥಳಗಳಲ್ಲಿ ತಕ್ಷಣವೇ ವ್ಯಾಪಾರಕ್ಕೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬರುವ ಭಾನುವಾರದವರೆಗೆ ಮಾತ್ರ ಈಗಿರುವ ವ್ಯವಸ್ಥೆಯಲ್ಲಿಯೇ ವಹಿವಾಟು ನಡೆಸಬೇಕು. ನಂತರ ನಗರದ ಹೊರ ವಲಯದಲ್ಲಿ ಗುರುತಿಸಲಾಗಿರುವ ನಿಗದಿತ ಸ್ಥಳಗಳಲ್ಲಿಯೇ ವಹಿವಾಟು ನಡೆಸಬೇಕು. ಉಳ್ಳಾಗಡ್ಡಿ, ಆಲೂಗಡ್ಡೆ ಮತ್ತು ಗೆಣಸು ವ್ಯಾಪಾರ ವಹಿವಾಟನ್ನು ಮುಖ್ಯ ಪ್ರಾಂಗಣದಲ್ಲಿ ನಡೆಸಬೇಕು ಎಂದರು.

ಕಾನೂನು ಕ್ರಮದ ಎಚ್ಚರಿಕೆ: ತರಕಾರಿ ಸೇರಿದಂತೆ ಅಗತ್ಯ ಸಾಮಗ್ರಿಗಳ ಪೂರೈಕೆಯಲ್ಲಿ ವಿನಾಕಾರಣ ವ್ಯತ್ಯಯ ಉಂಟು ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಕೂಡ ಹಿಂದೇಟು ಹಾಕುವುದಿಲ್ಲ. ಇಡೀ ದೇಶವೇ ಸಂದಿಗ್ಧ ಸ್ಥಿತಿಯಲ್ಲಿ ಇರುವುದರಿಂದ ಸೋಂಕು ಹರಡುವುದನ್ನು ತಡೆಗಟ್ಟಲು ವ್ಯಾಪಾರಸ್ಥರು ಮತ್ತು ರೈತರು ಸೇರಿದಂತೆ ಎಲ್ಲರೂ ಕೈಜೋಡಿಸಬೇಕು ಎಂದರು.

ರೈತರು, ವ್ಯಾಪಾರಸ್ಥರು, ಹಮಾಲರ ಕುಟುಂಬಗಳು ಸೇರಿದಂತೆ ಎಲ್ಲ ಸಾರ್ವಜನಿಕರ ಆರೋಗ್ಯ ಕಾಪಾಡುವುದು ಸರ್ಕಾರದ ಜವಾಬ್ದಾರಿ ಆಗಿದೆ. ಆದ್ದರಿಂದ ಸ್ವಲ್ಪ ಅನಾನುಕೂಲ ಆದರೂ ಸರಿ. ಎಲ್ಲರೂ ಸಹಕರಿಸಬೇಕು. ರೈತರು ಮತ್ತು ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ಎಲ್ಲ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳಲಿದೆ. ವ್ಯಾಪಾರಿಗಳು, ಹಮಾಲರು ಸೇರಿದಂತೆ ಎಲ್ಲರಿಗೂ ಅಗತ್ಯವಿರುವಷ್ಟು ಪಾಸ್‌ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಲಾಕ್‌ ಡೌನ್‌ ಸಂದರ್ಭದಲ್ಲಿ ಜನರಿಗೆ ಅಗತ್ಯ ವಸ್ತುಗಳನ್ನು ಪೂರೈಸಬೇಕಿರುವುದರಿಂದ ಯಾರೂ ಕೂಡ ವ್ಯಾಪಾರ-ವಹಿವಾಟು ಬಂದ್‌ ಮಾಡದೇ ಸಾರ್ವಜನಿಕರ ದೃಷ್ಟಿಯಿಂದ ಇಂತಹ ತುರ್ತು ಸಂದರ್ಭದಲ್ಲಿ ಪರಸ್ಪರ ಸಹಕರಿಸಬೇಕು. ನಿಗದಿಪಡಿಸಿದ ಸ್ಥಳಗಳಲ್ಲಿ ವ್ಯಾಪಾರ ಕೈಗೊಂಡರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದರು.

ಮಾರುಕಟ್ಟೆಗೆ ಪ್ರತಿದಿನ ಸಾವಿರಾರು ಕ್ವಿಂಟಲ್‌ ಮೆಣಸಿನಕಾಯಿ ಬರಲಿದೆ. ಕಾರಣ ಕಿತ್ತೂರು, ಬೆ„ಲಹೊಂಗಲ, ಖಾನಾಪುರ ಮತ್ತಿತರ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ವರ್ತಕರು ಮನವಿ ಮಾಡಿಕೊಂಡರು.

ಎ.ಪಿ.ಎಂ.ಸಿ. ಪ್ರಾಂಗಣದಲ್ಲಿ ಹೋಲ್‌ ಸೇಲ್‌ ಮಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಬೇಕು. ಸಾರ್ವಜನಿಕರು ಸಹ ತರಕಾರಿ ಖರೀದಿಸಲು ಇಲ್ಲಿಗೆ ಬರುತ್ತಿರುವುದರಿಂದ ಜನಸಂದಣಿ ಹೆಚ್ಚಾಗುತ್ತದೆ. ಆದ್ದರಿಂದ ಹೋಲಸೇಲ್‌ ವ್ಯಾಪಾರಸ್ಥರನ್ನು ಹೊರತುಪಡಿಸಿ ಉಳಿದವರನ್ನು ನಿರ್ಬಂಧಿಸಬೇಕು ಎಂದು ವರ್ತಕರು ಸಲಹೆ ನೀಡಿದರು. ಜಿಪಂ ಸಿಇಒ ಡಾ| ರಾಜೇಂದ್ರ ಕೆ.ವಿ. ಮಾತನಾಡಿ, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ನಿಗದಿಪಡಿಸುವ ಸ್ಥಳಗಳಲ್ಲಿ ವಹಿವಾಟು ನಡೆಸುವ ಮೂಲಕ ಸಹಕರಿಸಬೇಕು ಎಂದರು.

ಸಭೆಯಲ್ಲಿ ಪೊಲೀಸ್‌ ಆಯುಕ್ತ ಬಿ.ಎಸ್‌.ಲೋಕೇಶ್‌ ಕುಮಾರ್‌, ಎಸ್‌ಪಿ ಲಕ್ಷ್ಮಣ ನಿಂಬರಗಿ, ಡಿಸಿಪಿ ಯಶೋಧಾ ವಂಟಗೋಡಿ, ಎಸಿಪಿ ನಾರಾಯಣ ಭರಮನಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

7-bng

Bengaluru: ಕೆರೆ ಒತ್ತುವರಿ ಮಾಡಿದ್ದ ಮೂವರಿಗೆ 1ವರ್ಷ ಜೈಲು

6-bng

Actor Darshan: 6 ತಿಂಗಳ ಬಳಿಕ ದರ್ಶನ್‌ ಭೇಟಿ: ಪವಿತ್ರಾ ಭಾವುಕ

Nimma Vasthugalige Neeve Javaabdaararu movie review

Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.