ಮಹಿಳೆಗೆ ವಂಚನೆ: ಪೊಲೀಸರ ಬಲೆಗೆ ನಕಲಿ ಜ್ಯೋತಿಷಿ
Team Udayavani, Jul 22, 2019, 10:30 AM IST
ಬೆಳಗಾವಿ: ಜ್ಯೋತಿಷಿ ಎಂದು ಹೇಳಿಕೊಂಡು ವಂಚನೆ ಮಾಡುತ್ತಿದ್ದ ಆರೋಪಿಯನ್ನು ಬೆಳಗಾವಿ ಎಪಿಎಂಸಿ ಪೊಲೀಸರು ಬಂಧಿಸಿದರು.
ಬೆಳಗಾವಿ: ಪತಿಯ ಮನಸ್ಸು ಬದಲಿಸುತ್ತೇನೆ ಎಂದು ಪತ್ನಿಯನ್ನು ನಂಬಿಸಿ ಮೋಸ ಮಾಡಿದ ನಕಲಿ ಜ್ಯೋತಿಷಿಯನ್ನು ಬಂಧಿಸುವಲ್ಲಿ ನಗರದ ಎಪಿಎಂಸಿ ಪೊಲೀಸರು ಯಶಸ್ವಿಯಾಗಿದ್ದಾರೆ.
ರಾಯಚೂರು ಜಿಲ್ಲೆಯ ಹಟ್ಟಿಯ ವಿಜಯಕುಮಾರ ಸಸುಗತೆ (40) ಬಂಧಿತ ಆರೋಪಿ. ತಾನು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ವಿ.ಆರ್. ಗುರೂಜಿ ಎಂದು ಹೇಳಿಕೊಂಡು ವಂಚನೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕರ ಪತ್ರದಲ್ಲಿ ಮುದ್ರಿತ ಜ್ಯೋತಿಷಿಯ ನಂಬಿದ್ದ ನಗರದ ಗೃಹಣಿಯೊಬ್ಬರು ಈ ಜ್ಯೋತಿಷಿಯ ಮುಂದೆ ತನ್ನ ನೋವು ತೋಡಿಕೊಂಡು ತನ್ನ ಪತಿ ತನ್ನಿಂದ ದೂರಾದ ಬಗ್ಗೆ ತಿಳಿಸಿದ್ದನ್ನೇ ಬಂಡವಾಳವಾಗಿಸಿಕೊಂಡ ಜ್ಯೋತಿಷಿಯು ಮಹಿಳೆಯಿಂದ ಪೂಜೆ ಹಾಗೂ ಇತ್ಯಾದಿಗಳಿಗಾಗಿ ಹಂತ ಹಂತವಾಗಿ ಸುಮಾರು 2,60,000 ರೂ. ಗಳನ್ನು ಫೋನ್ ಮೂಲಕವೇ ತಮ್ಮ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡು ಅವಳಿಗೆ ಸುಳ್ಳು ಹೇಳುತ್ತ ಮೋಸ ಮಾಡುತ್ತಿದ್ದ.
ಈ ಬಗ್ಗೆ ನೀಡಿದ ದೂರಿನನ್ವಯ ಆತನ ಬ್ಯಾಂಕ್ ಖಾತೆ ಹಾಗೂ ಕರಪತ್ರದ ಜಾಡು ಹಿಡಿದು ಎಪಿಎಂಸಿ ಠಾಣೆಯ ಪೊಲೀಸರು ಬೆಂಗಳೂರಿನ ಸುಂಕದ ಕಟ್ಟೆಯಲ್ಲಿ ಡೋಂಗಿ ಜ್ಯೋತಿಷಿಯನ್ನು ಬಂಧಿಸಿ ವಿಚಾರಿಸಲಾಗಿ ಅವನು ಈ ಬೆಂಗಳೂರಿನ ಸುಂಕದಕಟ್ಟೆಯ ನಿವಾಸಿ. ಮೂಲತಃ ಹಟ್ಟಿಯ ವಿಜಯಕುಮಾರ ತಂದೆ ರಾಮಣ್ಣಾ ಸುಗತ ಎಂದು ತಿಳಿದು ಬಂದಿತು. ಆರೋಪಿಯಿಂದ 1.30 ಲಕ್ಷ ರೂ. ವಶಕ್ಕೆ ಪಡೆದುಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ನಕಲಿ ಜ್ಯೋತಿಷಿಯನ್ನು ಬಂಧಿಸುವಲ್ಲಿ ಶ್ರಮಿಸಿದ ಎಪಿಎಂಸಿ ಠಾಣೆಯ ಪಿಐ ಜೆ.ಎಂ ಕಾಲಿಮಿರ್ಚಿ ಹಾಗೂ ಸಿಬ್ಬಂದಿಗಳಾದ ಪ್ರಕಾಶ ಗಂಡವ್ವಗೋಳ ಮತ್ತು ನಾಗರಾಜ ಭೀಮಗೋಳ ಅವರ ಕಾರ್ಯವನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ. ಬೆಳಗಾವಿಯ ನಾಗರಿಕರು ಈ ರೀತಿಯ ಖೊಟ್ಟಿ ಕರಪತ್ರಗಳ ಬಗ್ಗೆ ಹಾಗೂ ಡೋಂಗಿ ಜ್ಯೋತಿಷಿಗಳ ಬಗ್ಗೆ ಜಾಗ್ರತೆಯಿಂದ ಇರಬೇಕು. ಯಾರಾದರೂ ಅಪರಿಚಿತರು ನೀಡುವ ಕರಪತ್ರಗಳನ್ನು ದಿನ ಪತ್ರಿಕೆಗಳಲ್ಲಿ ಸೇರಿಸಿ ಹಂಚದಂತೆ ಪತ್ರಿಕಾ ಏಜೆಂಟ್ ಮತ್ತು ಪೇಪರ್‌ಬಾಯ್‌ಗಳಿಗೂ ಸಹ ಸೂಚಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.