![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 26, 2021, 8:19 PM IST
ಹುಕ್ಕೇರಿ: ಕೊರೊನಾ ನಿಯಂತ್ರಣಕ್ಕಾಗಿ ಸಾರ್ವಜನಿಕರ ಸೇವೆಗಾಗಿ ಉಚಿತ ಆಂಬ್ಯುಲೆನ್ಸ್ ನೀಡಿ ಸರ್ಕಾರದೊಂದಿಗೆ ಕೈಜೋಡಿಸುತ್ತಿರುವ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸೇವೆ ಶ್ಲಾಘನೀಯ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಹೇಳಿದರು.
ಪಟ್ಟಣದಲ್ಲಿ ಹಿರೇಮಠ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಉಚಿತವಾಗಿ ನೀಡಿದ ಆಂಬ್ಯುಲೆನ್ಸ್ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಜನರು ಚಿಕಿತ್ಸೆ ಪಡೆಯಲು ವಾಹನಗಳ ಸೌಲಭ್ಯವಿಲ್ಲದೇ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ರೀಗಳು ಉಚಿತವಾಗಿ ವಾಹನ ನೀಡುತ್ತಿದ್ದಾರೆ. ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಈ ವೇಳೆ ಪುರಸಭೆ ಅಧ್ಯಕ್ಷ ಎ.ಕೆ. ಪಾಟೀಲ, ಮಹಾವೀರ ಸಮೂಹ ಸಂಸ್ಥೆಗಳ ಅಧ್ಯಕ್ಷ ಮಹಾವೀರ ನಿಲಜಗಿ, ಪುರಸಭೆ ಸದಸ್ಯ ರಾಜೇಂದ್ರ ಮೂನ್ನೋಳಿ, ಜಿಲ್ಲಾಧಿ ಕಾರಿ ಎಂ.ಜಿ. ಹಿರೇಮಠ, ತಹಶೀಲ್ದಾರ್ ಡಿ.ಎಚ್. ಹೂಗಾರ, ತಾಪಂ ಇಒ ಬಿ.ಕೆ. ಲಾಳಿ, ಜಿಲ್ಲಾ ಆರೋಗ್ಯ ಅ ಧಿಕಾರಿ ಮುನ್ನಾಳ, ಡಿವೈಎಸ್ಪಿ ಮನೋಹರ ನಾಯಿಕ, ಸಿಪಿಐ ರಮೇಶ ಛಾಯಾಗೋಳ, ಡಾ| ಉಯದ ಕುಡಚಿ ಇದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

You seem to have an Ad Blocker on.
To continue reading, please turn it off or whitelist Udayavani.