15 ದಿನದಲ್ಲಿ ಎಫ್‌ಎಸ್‌ಎಲ್‌ ವರದಿ: ಸಿಎಂ ಬೊಮ್ಮಾಯಿ ಆದೇಶ

ಐದು ವರ್ಷಗಳ ಅವಧಿಯಲ್ಲಿ ಒಂದೂ ಇಂತ ಘಟನೆಗಳು ಮರುಕಳಿಸಿಲ್ಲ

Team Udayavani, Dec 29, 2022, 6:27 PM IST

15 ದಿನದಲ್ಲಿ ಎಫ್‌ಎಸ್‌ಎಲ್‌ ವರದಿ: ಸಿಎಂ ಬೊಮ್ಮಾಯಿ ಆದೇಶ

ಬೆಳಗಾವಿ: ಈ ಹಿಂದೆ ವಿಧಿ  ವಿಜ್ಞಾನ ಪ್ರಯೋಗಾಲಯಲದ ವರದಿಗಳು ಕೈಸೇರಲು 30 ದಿನ ಬೇಕಾಗಿದ್ದು, ಈಗ 15 ದಿನಗಳಲ್ಲಿ ವರದಿ ಸಿಗುವಂತೆ ಆದೇಶ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರ ಪೊಲೀಸ್‌ ಆಯುಕ್ತರ ನೂತನ ಕಚೇರಿಯನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿ, ಪ್ರಯೋಗಾಲಯದಲ್ಲಿ ಅಗತ್ಯ ತಜ್ಞರ ನೇಮಕಾತಿ ಮಾಡಲಾಗಿದೆ. ಈ ಹಿಂದೆ ವಿಧಿ ವಿಜ್ಞಾನ ವರದಿ ಕೈಸೇರಲು ಮೂರು ತಿಂಗಳು ಹಿಡಿಯುತ್ತಿತ್ತು. ಸದ್ಯ 30 ದಿನಗಳ ವರದಿಗಳನ್ನು ನೀಡಲಾಗುತ್ತಿದೆ. 15 ದಿನದಲ್ಲಿ ವರದಿ ಬಂದರೆ ಅಪರಾಧ ಪ್ರಕರಣ ಪತ್ತೆ ಹಚ್ಚಲು ಅನುಕೂಲಕರವಾಗುತ್ತದೆ ಎಂದರು.

ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕ್ಷಿಪ್ರ ಗತಿಯಲ್ಲಿ ಕಾರ್ಯಾಚರಣೆ ನಡೆಸಿ ಅಪರಾಧಿಗಳನ್ನು ಬಂಧಿಸಬೇಕು. ಬೆಳಗಾವಿ ಸೇರಿದಂತೆ ಎಲ್ಲ ಜಿಲ್ಲೆಗಳ ಪೊಲೀಸರು ಜನರೊಂದಿಗೆ ನಿಕಟ ಸಂಪರ್ಕ, ವಿಶ್ವಾಸ ಇಟ್ಟುಕೊಳ್ಳಬೇಕು. ಪೊಲೀಸ್‌ ಇಲಾಖೆ ಜನರ ಸಹಕಾರದಿಂದ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದರು.

ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆದಾಗ ಕಾರ್ಯಾಚರಣೆ ನಡೆಸಿ 24 ಗಂಟೆಯೊಳಗೆ ಅಪರಾ ಧಿಗಳನ್ನು ಬಂಧಿಸಿರುವ ಹೆಗ್ಗಳಿಕೆ ನಮ್ಮ ಪೊಲೀಸರಿಗೆ ಇದೆ. ರಾಜ್ಯದ ಪೊಲೀಸರು ದೇಶದಲ್ಲಿಯೇ ಉತ್ತಮ ಕೆಲಸ ಮಾಡುತ್ತಿದ್ದಾರೆ. ಬೆಳಗಾವಿಯಲ್ಲಿ ಗಡಿಭಾಗ ಸೇರಿದಂತೆ ಹಲವು ಸವಾಲುಗಳು ಇವೆ. ಇವುಗಳನ್ನು ಅಚ್ಚುಕಟ್ಟಾಗಿ ಎದುರಿಸಿ ಶಾಂತಿ-ಸುವ್ಯವಸ್ಥೆ ಕಾಪಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಿಗಮದ ವತಿಯಿಂದ ರಾಜ್ಯದಲ್ಲಿ ಎರಡು ಬಂದಿಖಾನೆಗಳನ್ನು ನಿರ್ಮಿಸಲಾಗುವುದು. ಇದರ ಉದ್ಘಾಟನೆಗೆ ನಾನು ಬರುವುದಿಲ್ಲ, ನೀವೇ ಮಾಡಿ ಎಂದು ಮುಖ್ಯಮಂತ್ರಿಗಳು ಹಾಸ್ಯ ಚಟಾಕಿ ಹಾರಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಪೊಲೀಸರು ಗಡಿ ವಿಚಾರದಂತಹ ಭಾವನಾತ್ಮಕ ವಿಚಾರಗಳಲ್ಲಿ ಸಹನೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪೊಲೀಸ್‌ ಇಲಾಖೆ ಗೃಹ ನಿರ್ಮಾಣದ ಜೊತೆಗೆ ನೂತನ ಪೊಲೀಸ್‌ ಠಾಣೆ, ಎಫ್‌ಎಸ್‌ಎಲ್‌ ಲ್ಯಾಬ್‌ ನಿರ್ಮಾಣ, ವಾಹನ ಹಾಗೂ ನೂತನ ಶಸ್ತ್ರಾಸ್ತ್ರ ಖರೀದಿಸಲು ಮುಖ್ಯಮಂತ್ರಿಗಳು ಅಗತ್ಯ ಅನುದಾನ ನೀಡಿದ್ದಾರೆ ಎಂದರು.

ಶಾಸಕ ಅನಿಲ್‌ ಬೆನಕೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೆಳಗಾವಿ ಪೊಲೀಸರ ಮೇಲೆ ನನಗೆ, ನನ್ನ ಮೇಲೆ ಪೊಲೀಸರಿಗೆ ಪ್ರೀತಿ ಇದೆ. ನಾನು ಶಾಸಕನಾಗುವ ಮುನ್ನ ನಿತ್ಯವೂ ಕಲ್ಲು ತೂರಾಟ, ಗಲಾಟೆ ನಡೆಯುತ್ತಿತ್ತು. ಐದು ವರ್ಷಗಳ ಅವಧಿಯಲ್ಲಿ ಒಂದೂ ಇಂತ ಘಟನೆಗಳು ಮರುಕಳಿಸಿಲ್ಲ. ಇದಕ್ಕೆ ಪೊಲೀಸರ ದಕ್ಷತೆ ಕಾರಣ ಎಂದರು.

ಕೊರೊನಾ ಕಾಲದಲ್ಲಿ ಜನರ ಸೇವೆ ಮಾಡಿದ್ದಾರೆ. ಬೆಳಗಾವಿ ನಗರದ ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡಿದ್ದಾರೆ. ಬ್ರಿಟಿಷ್‌ ಕಾಲೋನಿಯಲ್ಲಿ ಪೊಲೀಸರಿಗೆ ವಸತಿ ಗೃಹಗಳನ್ನು ನಿರ್ಮಿಸಬೇಕು. ಬಂದೋಬಸ್ತ್ ಆಗಮಿಸುವ ಪೊಲೀಸರಿಗೆ ನಗರದಲ್ಲಿ ವಿಶ್ರಾಂತಿ ಕೊಠಡಿ ನಿರ್ಮಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಲಾ ಅಂಗಡಿ, ಶಾಸಕ ಮಹೇಶ ಕುಮಠಳ್ಳಿ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಪೊಲೀಸ್‌ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕ ಪ್ರವೀಣ ಸೂದ್‌, ಹೆಚ್ಚುವರಿ ಡಿಜಿ ಅರುಣ ಚಕ್ರವರ್ತಿ, ಬೆಳಗಾವಿ ಪ್ರಾದೇಶಿಕ ಆಯುಕ್ತ ಎಂ.ಜಿ. ಹಿರೇಮಠ, ಜಿಲ್ಲಾ ಕಾರಿ ನಿತೇಶ ಪಾಟೀಲ, ಉತ್ತರ ವಲಯ ಐಜಿಪಿ ಎನ್‌. ಸತೀಶ್‌ ಕುಮಾರ್‌, ಪೊಲೀಸ್‌ ಕಮಿಷನರ್‌ ಡಾ. ಎಂ.ಬಿ. ಬೋರಲಿಂಗಯ್ಯ ಸ್ವಾಗತಿಸಿದರು. ಎಸ್‌ಪಿ ಡಾ. ಸಂಜೀವ ಪಾಟೀಲ, ಡಿಸಿಪಿಗಳಾದ ರವೀಂದ್ರ ಗಡಾದಿ, ಸ್ನೇಹ ಪಿ.ವಿ., ಸಿದ್ದನಗೌಡ ಪಾಟೀಲ ಇದ್ದರು.

2500 ಪೊಲೀಸ್‌ ವಸತಿ ಗೃಹಗಳ ನಿರ್ಮಾಣ
ರಾಜ್ಯ ಪೊಲೀಸ್‌ ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದಿಂದ ಈ ವರ್ಷವೇ 2500 ಮನೆಗಳು ಪೂರ್ಣಗೊಳಿಸಲಾಗುವುದು. ಒಂದೇ ವರ್ಷದಲ್ಲಿ 116 ಪೊಲೀಸ್‌ ಠಾಣೆಗಳನ್ನು ನಿರ್ಮಿಸಲಾಗಿದೆ. ಪೊಲೀಸ್‌ ಸಾರಿಗೆ ವ್ಯವಸ್ಥೆ ಬಲಪಡಿಸಲು 80 ಕೋಟಿ ರೂ. ನೀಡಲಾಗಿದೆ. 300ಕ್ಕೂ ಹೆಚ್ಚು ಜೀಪ್‌, ಸ್ಕಾರ್ಪಿಯೋ, ಬುಲೇರೋ ಖರೀದಿಸಲಾಗಿದೆ. ಎಲ್ಲ ಪೊಲೀಸ್‌ ಅಧಿಕಾರಿಗಳಿಗೂ ವಾಹನಗಳನ್ನು ಒದಗಿಸಲು ಸರ್ಕಾರ ಆದೇಶ ಹೊರಡಿಸಿದೆ. ಡಿವೈಎಸ್ಪಿ
ಹಂತದ ಅಧಿ ಕಾರಿಗಳಿಗೆ ಸ್ಕಾರ್ಪಿಯೋ ವಾಹನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Belagavi: ಗೆಳೆಯ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.