ಕಾರ್ಖಾನೆ ಅಭಿವೃದ್ಧಿ ಗೆ ಎಲ್ಲರೂ ಕೈಜೋಡಿಸಿ
Team Udayavani, Jul 15, 2021, 10:46 PM IST
ಗೋಕಾಕ: ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಗತಿಗಾಗಿ ಅಮೂಲಾಗ್ರ ಬದಲಾವಣೆ ಮಾಡಿದ್ದು, ಇದಕ್ಕೆ ಎಲ್ಲರೂ ಸಹಕಾರ ನೀಡಿ ಕಾರ್ಖಾನೆಯ ಅಭಿವೃದ್ಧಿಗೆ ಕೈ ಜೋಡಿಸುವಂತೆ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಲಹೆ ಮಾಡಿದರು.
ಕಾರ್ಖಾನೆಯ ಸಭಾಗೃಹದಲ್ಲಿ ಜರುಗಿದ ಕಾರ್ಖಾನೆಯ ಆಡಳಿತ ಮಂಡಳಿಯ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಖಾನೆಯ ಹಿತದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಸಹಕಾರಿ ತತ್ವದಡಿ ಸ್ಥಾಪಿತಗೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಈ ಭಾಗದ ರೈತರ ಜೀವನಾಡಿಯಾಗಿದೆ. ಕಾರ್ಖಾನೆಯ ಪ್ರಗತಿಯಲ್ಲಿ ರೈತರ ಕೊಡುಗೆ ಅಪಾರವಾಗಿದೆ. ಜೊತೆಗೆ ಕಾರ್ಮಿಕರ ಸಹಕಾರವೂ ಕೂಡ ಅಗತ್ಯವಾಗಿದೆ.
ಕಾರ್ಖಾನೆಯಲ್ಲಿ ಕಬ್ಬು ವಿಭಾಗವು ಅಷ್ಟೇನೂ ಜವಾಬ್ದಾರಿ ಅರಿಯದೇ ಇರುವುದರಿಂದ ಕಾರ್ಖಾನೆಗೆ ಸ್ವಲ್ಪ ಮಟ್ಟಿಗೆ ತೊಂದರೆಯಾಗಿದೆ ಎಂದು ತಿಳಿಸಿದರು. ಇಳುವರಿ ಕಬ್ಬನ್ನು ಕಾರ್ಖಾನೆಗೆ ರೈತರು ಪೂರೈಕೆ ಮಾಡಬೇಕು. ಅದಕ್ಕಾಗಿಯೇ ಆಡಳಿತದಲ್ಲಿ ಬದಲಾವಣೆಗೆ ಮುಂದಾಗಿದ್ದು, ಅಧಿ ಕ ಇಳುವರಿ ಕಬ್ಬನ್ನು ಕಾರ್ಖಾನೆಗೆ ಪೂರೈಸಲು ಆಡಳಿತ ಮಂಡಳಿಯವರು ಹೊಸದಾಗಿ ನೇಮಕಗೊಂಡಿರುವ ಸಿಬ್ಬಂದಿಗೆ ಸಂಪೂರ್ಣ ಸಹಕಾರ ನೀಡಬೇಕು. ಹಿಂದಿನ ಕಹಿ ಘಟನೆಗಳು ಮರುಕಳಿಸಬಾರದು. ಕಾರ್ಖಾನೆಯ ಅಭಿವೃದ್ಧಿಯೊಂದೇ ನಮ್ಮ ಮುಂದಿರುವ ಗುರಿಯಾಗಿದೆ ಎಂದು ಹೇಳಿದರು. ಈ ಹಿಂದಿನ ಕಬ್ಬು ವಿಭಾಗದ ಅ ಧಿಕಾರಿಗಳು ಕರ್ತವ್ಯಲೋಪ ಎಸಗಿದ್ದರಿಂದ ನಮಗೆ ಹಾನಿಯಾಗಿದೆ.
ಇಳುವರಿ ಕಬ್ಬಿನ ಬದಲಾಗಿ ಕಡಿಮೆ ಇಳುವರಿ ಕಬ್ಬನ್ನು ರೈತರಿಂದ ಪಡೆಯುತ್ತಿದ್ದರಿಂದ ಸಮರ್ಥವಾಗಿ ನಿಭಾಯಿಸಲು ಹೊಸ ಸಿಇಓ ಹಾಗೂ ಸಿಡಿಓ ಸಹಿತ ನಾಲ್ವರನ್ನು ನಿಯೋಜಿಸಲಾಗಿದೆ. ಯಾವುದೇ ಸಮಸ್ಯೆಗಳು ಇದ್ದರೆ ತುರ್ತಾಗಿ ಪರಿಹರಿಸಲು ಸಮಿತಿಯೊಂದನ್ನು ರಚಿಸಲಾಗಿದೆ. ಪರಸ್ಪರ ಸಹಕಾರದಿಂದ ಕರ್ತವ್ಯ ನಿರ್ವಹಿಸಿದರೆ ಕಾರ್ಖಾನೆಗೆ ಒಳಿತಾಗಲಿದೆ. ಕಾರ್ಖಾನೆ ಮುಂಬರುವ ದಿನಗಳಲ್ಲಿ ಹೆಚ್ಚಿನ ಲಾಭದ ಜೊತೆಗೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆ ಮಾಡಲು ನಾವೆಲ್ಲರೂ ಶ್ರಮಿಸೋಣ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ, ಉಪಾಧ್ಯಕ್ಷ ರಾಮಣ್ಣಾ ಮಹಾರಡ್ಡಿ, ನಿರ್ದೇಶಕರಾದ ಕೆಂಚನಗೌಡ ಪಾಟೀಲ, ಕೃಷ್ಣಪ್ಪ ಬಂಡ್ರೊಳ್ಳಿ, ಲಕ್ಷ್ಮಣ ಗಣಪ್ಪಗೋಳ, ಶಿದ್ಲಿಂಗ ಕಂಬಳಿ, ಶಿವಲಿಂಗ ಪೂಜೇರಿ, ಗಿರೀಶ ಹಳ್ಳೂರ, ಮಅಹಾದೇವಪ್ಪ ಭೋವಿ, ಭೂತಪ್ಪ ಗೊಡೇರ, ಮಲ್ಲಿಕಾರ್ಜುನ ಕಬ್ಬೂರ, ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್ ಪತ್ತೆ: ಪೊಲೀಸರಿಂದ ತನಿಖೆ ಚುರುಕು
Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್
MUST WATCH
ಹೊಸ ಸೇರ್ಪಡೆ
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.