ಪ್ರತಿಯೊಬ್ಬರಿಗೂ ಕೆಲಸ ಕೊಡಿ
Team Udayavani, May 9, 2020, 6:50 AM IST
ಕೋಹಳ್ಳಿ: ಕೋವಿಡ್ 19 ಸಂಕಷ್ಟದ ಸಮಯದಲ್ಲೂ ದೇಶದ ಜನತೆಯ ಹಸಿವು ನೀಗಿಸುತ್ತಿರುವ ಅನ್ನದಾತರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 17,986 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ. ಅದರಂತೆ ರಾಜ್ಯದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ಅವರು ಗ್ರಾಮದ ದೊಡ್ಡ ಕೆರೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. ಕೆಲಸ ಬೇಡುವ ಎಲ್ಲರಿಗೂ ಕೆಲಸ ಕೊಡಬೇಕು. ದಿನಕ್ಕೆ 275 ರೂ. ಕೂಲಿ ನೀಡಲಾಗುತ್ತಿದೆ. ಲಾಕ್‌ಡೌನ್ ಸಡಿಲಿಕೆಯಾಗಿದೆ ಎಂದು ಅನಾವಶ್ಯಕವಾಗಿ ತಿರುಗಾಡಬೇಡಿ. ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡಬೇಕು. ಅಥಣಿ ತಾಲೂಕಿನಲ್ಲಿ ಕೊರೊನಾ ಬರದ ಹಾಗೆ ಎಚ್ಚರಿಕೆಯಿಂದ ಇರಬೇಕು ಎಂದರು.
ಅಥಣಿ ಶಾಸಕ ಮಹೇಶ ಕುಮಠಳ್ಳಿ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಲ್ಲಿ ರೈತರು ಅನೇಕ ವೈಯಕ್ತಿಕ ಕೆಲಸ ಮಾಡಿಕೊಳ್ಳಬಹುದು. ಇದರ ಸದುಪಯೋಗವನ್ನು ಎಲ್ಲ ರೈತರು ಪಡೆದುಕೊಳ್ಳಬೇಕು ಎಂದು ಹೇಳಿದರು.
ಚಿಕ್ಕೋಡಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಚಿದಾನಂದ ಸವದಿ, ತಾಪಂ ಇಒ ರವೀಂದ್ರ ಬಂಗಾರೆಪ್ಪನ್ನವರ, ಉದಯಗೌಡ ಪಾಟೀಲ, ಪ್ರಕಾಶ ಮೋರೆ, ಪಿಡಿಒ ಈರಪ್ಪ ತಮದಡ್ಡಿ, ಗ್ರಾಪಂ ಉಪಾಧ್ಯಕ್ಷ ಶ್ರೀಕಾಂತ ಆಲಗೂರ, ರಮೇಶ ಉಮರಾಣಿ, ಮಲಿಕಸಾಬ ಪಡಸಲಗಿ, ಹಣಮಂತ ಕನ್ನಾಳ, ಕುಮಾರ ಪಾತೂಟ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.