ಕಾಗವಾಡ-ಅಥಣಿ ಕ್ಷೇತ್ರ ಮತ್ತೆ ಕಾಂಗ್ರೆಸ್‌ಗೆ ಕೊಡಿ: ಸತೀಶ
ಕಾಂಗ್ರೆಸ್ ಮುಖಂಡರು- ಕಾರ್ಯಕರ್ತರ ಸಮಾಲೋಚನಾ ಸಭೆ
Team Udayavani, Jul 29, 2019, 12:59 PM IST
ಅಥಣಿ: ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಯಿತು.
ಅಥಣಿ: ಇಲ್ಲಿನ ಪಿಡಬ್ಲುಡಿಯ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಮುಖಂಡರ ಹಾಗೂ ಕಾರ್ಯಕರ್ತರ ಸಮಾಲೋಚನಾ ಸಭೆ ರವಿವಾರ ನಡೆಯಿತು.
ಈ ವೇಳೆ ಮಾಜಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಕಾಗವಾಡ ಮತ್ತು ಅಥಣಿ ಮತಕ್ಷೇತ್ರಗಳ ಶಾಸಕರು ಅನರ್ಹಗೊಂಡ ಹಿನ್ನೆಲೆಯಲ್ಲಿ ಈ ಎರಡು ಮತಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ತಂದು ಕೊಡಲು ಎಲ್ಲ ಕಾರ್ಯಕರ್ತರು ಶ್ರಮಿಸಬೇಕೇಂದು ಮನವಿ ಮಾಡಿದರು.
ಆಗ ಕೆಲ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ವಾಗ್ವಾದ ನಡೆದವು. ಆಗ ಸತೀಶ ಜಾರಕಿಹೊಳಿ ಕಾರ್ಯಕರ್ತರ ಮನವೊಲಿಸಲು ಮುಂದಾದರು ಸಹ ಅವರ ಮಾತಿಗೆ ಒಪ್ಪಲಿಲ್ಲ. ಕೂಡಲೇ ಸ್ಥಳೀಯ ಮುಖಂಡತ್ವ ಮತ್ತು ಬ್ಲಾಕ್ ಅಧ್ಯಕ್ಷರನ್ನು ಬದಲಾಯಿಸಬೇಕೆಂದು ಕಾರ್ಯಕರ್ತರು ಒತ್ತಾಯಿಸಿದರು. ಆಗ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಮೌನ ವಹಿಸಿದ್ದರು.
ವೋಟಿಗೆ ಮತ್ತು ಸಂಘಟನೆಗೆ ಮತ್ತು ಯಾವುದೇ ಕಾರ್ಯಕ್ಕೆ ದಲಿತರು ಬೇಕು. ಆದರೆ ನಮಗೆ ಸ್ಥಾನಮಾನ ನೀಡಲು ಏಕೆ ಹಿಂದೇಟು. ಕಳೆದ ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ಬೆನ್ನೇಲಬು ಆಗಿ ನಿಂತಿರುವ ಹಾಗೂ ಕಾಂಗ್ರೆಸಿನ ವೋಟ್ ಬ್ಯಾಂಕಾಗಿರುವ ದಲಿತ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಒಳ್ಳೆಯ ಸ್ಥಾನಮಾನ ನೀಡುವಂತೆ ಕಾರ್ಯಕರ್ತರಾದ ಮಂಜು ಹೋಳಿಕಟ್ಟಿ ಮತ್ತು ಮಾಂತೇಶ ಬಾಡಗಿ ಅವರು ಸತೀಶ ಜಾರಕಿಹೊಳಿ ಅವರಲ್ಲಿ ಮನವಿ ಮಾಡಿದರು.
ಶಾಸಕ ಸ್ಥಾನದಿಂದ ಮಹೇಶ ಕುಮಟಳ್ಳಿ ಅನರ್ಹಗೊಂಡ ಹಿನ್ನೆಲೆಯಲ್ಲಿ ಅಥಣಿ ಮತಕ್ಷೇತ್ರದ ಕಾಂಗ್ರೆಸ್ ಪಕ್ಷಕ್ಕೆ ಸೂಕ್ತ ಅಭ್ಯರ್ಥಿ ಆಯ್ಕೆ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಯಿತು. ಆಗ ಕಾರ್ಯಕರ್ತರ ಮನವೊಲಿಸಲು ಮುಂದಾದ ಸತೀಶ ಜಾರಕಿಹೊಳಿ ಅವರ ಪ್ರಯತ್ನ ಫಲಿಸಲಿಲ್ಲ.
ಲಕ್ಷ್ತ್ರಣರಾವ ಚಿಂಗಳೆ, ಸದಾಶಿವ ಬುಟಾಳಿ, ಗಜಾನನ ಮಂಗಸೂಳಿ, ಬಸವರಾಜ ಬುಟಾಳಿ, ಬಿ.ಎ. ಚವಾಣ, ಸತ್ಯಾಪ್ಪ ಬಾಗೆನ್ನವರ, ಎಸ್.ಎಂ. ನಾಯಿಕ, ಸುನೀಲ ಸಂಕ, ಅರ್ಷದ ಗದ್ಯಾಳ, ರಮೇಶ ಸಿಂದಗಿ, ರಮೇಶಗೌಡ ಪಾಟೀಲ, ಶಿವು ಗುಡ್ಡಾಪುರ, ಸುಂದರ ಸೌಧಾಗರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.