ಕಳಸಾ ಪ್ರದೇಶಕ್ಕೆ ಗೋವಾ ಸಚಿವರ ಭೇಟಿ
Team Udayavani, Jan 14, 2018, 6:10 AM IST
ಪಣಜಿ/ಖಾನಾಪುರ/ಬೆಳಗಾವಿ: ಗೋವಾ ನೀರಾವರಿ ಸಚಿವ ವಿನೋದ ಪಾಳೇಕರ ಅವರು ಶನಿವಾರ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಇರುವ ಕಳಸಾ ನಾಲಾ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿ, ಕಳಸಾ ನೀರು ಬಿಡುವ ಕುರಿತು ಗೋವಾ ಮುಖ್ಯಮಂತ್ರಿ ಮನೋಹರ ಪರ್ರಿಕರ್ ಇತ್ತೀಚೆಗೆ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಅವರಿಗೆ ಬರೆದ ಪತ್ರ ನ್ಯಾಯಾಲಯದ ಆದೇಶ ಅಲ್ಲ. ಕರ್ನಾಟಕದಲ್ಲಿ ರೈತರು ಪ್ರತಿಭಟನೆ ಮಾಡಿದರೆ ಅದು ನಮಗೆ ಸಂಬಂಧಿಸಿದ್ದಲ್ಲ. ಮಹದಾಯಿ ವಿವಾದ ಪ್ರಕರಣ ನ್ಯಾಯಾಧಿಕರಣದಲ್ಲಿ ಇತ್ಯರ್ಥವಾಗುವರೆಗೆ ನೀರು ಕೊಡುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು. ಕರ್ನಾಟಕ ಸರ್ಕಾರ ಕಳಸಾ ನಾಲಾ ಪ್ರದೇಶದಲ್ಲಿ ಕಾಮಗಾರಿ ನಡೆಸಿಲ್ಲ ಎಂದು ನ್ಯಾಯಾಲಯದಲ್ಲಿ ಹೇಳಿ ಇಲ್ಲಿ ಕಾಮಗಾರಿ ನಡೆಸುತ್ತಿದ್ದು, ಇದನ್ನು ಖಂಡಿಸುವುದಾಗಿ ಅವರು ಹೇಳಿದರು. ಸಚಿವರೊಂದಿಗೆ ಗೋವಾ ರಾಜ್ಯದ ನೀರಾವರಿ ಇಲಾಖೆಯ ಮುಖ್ಯ ಇಂಜಿನಿಯರ ಸಂದೀಪ ನಾಡಕರ್ಣಿ ಮತ್ತಿತರ ಆಧಿಕಾರಿಗಳು ಹಾಜರಿದ್ದರು. ಆದರೆ, ಅವರ ಭೇಟಿ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಖಾನಾಪುರ ತಹಶೀಲ್ದಾರ ಎಸ್.ಬಿ.ಉಳ್ಳೇಗಡ್ಡಿ ಉದಯವಾಣಿಗೆ ತಿಳಿಸಿದರು.
ಸಾಲಿಸಿಟರ್ ಜನರಲ್ ಆತ್ಮಾರಾಮ ನಾಡಕರ್ಣಿ ಮಾತನಾಡಿ, ಫೆ.6ರಿಂದ ನ್ಯಾಯಾಧಿಕರಣದಲ್ಲಿ ಆರಂಭಗೊಳ್ಳಲಿರುವ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಕಳಸಾ ನಾಲಾ ನಿರ್ಮಾಣ ಸಂಬಂಧದ ಬಗ್ಗೆ ಗಮನ ಸೆಳೆಯಲಾಗುವುದು ಎಂದು ಹೇಳಿದರು.
ರಾಜ್ಯಕ್ಕೆ ಪತ್ರ:
ಈ ಮಧ್ಯೆ, ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಅವರು ನಾಲೆ ನಿರ್ಮಾಣಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆಯುವಂತೆ ಗೋವಾ ರಾಜ್ಯದ ಮುಖ್ಯ ಕಾರ್ಯದರ್ಶಿ ಧರ್ಮೇಂದ್ರ ಶರ್ಮಾಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.