“ಹಂತ-ಹಂತ ಲಾಕ್‌ಡೌನ್ ಹಿಂಪಡೆಯಲಿ’
ಅಂತಾರಾಜ್ಯ, ಜಿಲ್ಲಾ ಗಡಿಗಳ ತೆರವಿಗೆ ಶಾಸಕ ಸತೀಶ ಜಾರಕಿಹೊಳಿ ಸಲಹೆ
Team Udayavani, Apr 9, 2020, 1:37 PM IST
ಗೋಕಾಕ: ನಗರದ ಹಿಲ್ ಗಾರ್ಡನ್‌ನಲ್ಲಿ ಪತ್ರಕರ್ತರಿಗೆ ಸ್ಯಾನಿಟೈಸರ್ ವಿತರಿಸಿದ ಶಾಸಕ ಸತೀಶ ಜಾರಕಿಹೊಳಿ
ಗೋಕಾಕ: ದೇಶದ ಇಂದಿನ ಪರಿಸ್ಥಿತಿ ಅವಲೋಕಿಸಿದಾಗ ಏ.14ರ ನಂತರ ಲಾಕ್ ಡೌನ್‌ವನ್ನು ಒಮ್ಮೆಲೆ ತೆರವುಗೊಳಿಸಬಾರದು. ಹಂತ-ಹಂತವಾಗಿ ತೆರವುಗೊಳಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅಭಿಪ್ರಾಯ ಪಟ್ಟರು.
ಬುಧವಾರ ನಗರದಲ್ಲಿ ತಮ್ಮ ಗೃಹ ಕಚೇರಿ ಹಿಲ್ ಗಾರ್ಡನ್‌ನಲ್ಲಿ ನಗರಸಭೆ ಸದಸ್ಯರಿಗೆ ಮತ್ತು ಪತ್ರಕರ್ತರಿಗೆ ಸ್ಯಾನಿಟೈಸರ್ ವಿತರಿಸಿ ಅವರು ಮಾತನಾಡಿದರು. ಈವರೆಗೆ ರಾಜ್ಯಗಳಲ್ಲಿ ದಾಸ್ತಾನು ಇದ್ದ ಜೀವನಾಶ್ಯಕ ಅಗತ್ಯ ವಸ್ತುಗಳಿಂದ ಜನರಿಗೆ ಯಾವುದೇ ತೊಂದರೆ ಆಗಲಿಲ್ಲ. ಆದರೆ ಏ.14ರ ನಂತರ ಪ್ರಥಮ ಹಂತವಾಗಿ ಅಂತರ್ ರಾಜ್ಯ ಮತ್ತು ಜಿಲ್ಲಾ ಗಡಿಗಳನ್ನು ತೆರವುಗೊಳಿಸಿ ಅಗತ್ಯ ವಸ್ತುಗಳ ಪೂರೈಕೆಗೆ ಮಾತ್ರ ಅವಕಾಶ ನೀಡಬೇಕು. ನಂತರ ಹಂತ-ಹಂತವಾಗಿ ಲಾಕ್‌ಡೌನ್ ತೆರವುಗೊಳಿಸಲು ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕು ಎಂದರು.
ಕೊರೊನಾ ಸೋಂಕು ತಡೆಯಲು ಮುಂಜಾಗ್ರತಾ ಕ್ರಮವಾಗಿ ಲಾಕ್‌ಡೌನ್ ಜಾರಿಗೊಳಿಸಬೇಕಾಗಿತ್ತು. ಆದರೆ ಒಮ್ಮೆಲೆ ಲಾಕ್‌ಡೌನ್ ಘೋಷಣೆ ಮಾಡಿದ್ದು ಸರಿಯಲ್ಲ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ಒಂದೆರಡು ದಿನದ ಅವಕಾಶ ನೀಡಿ ನಂತರ ಲಾಕ್‌ಡೌನ್ ಘೋಷಿಸಿದ್ದರೆ ಈಗ ಉದ್ಭವಿಸಿರುವ ಸಮಸ್ಯೆಗಳು ಹುಟ್ಟುತ್ತಿರಲಿಲ್ಲ ಎಂದ ಸತೀಶ ಜಾರಕಿಹೊಳಿ, ಒಮ್ಮೆಲೆ ಲಾಕ್ ಡೌನ್ ಘೋಷಿಸಿದ್ದರಿಂದ ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಂದ ಬಂದ ಕೂಲಿ ಕಾರ್ಮಿಕರು ತೊಂದರೆ ಅನುಭವಿಸುವಂತಾಯಿಗಿದೆ ಎಂದರು.
ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಲಾಕ್‌ಡೌನ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅದನ್ನು ಬಿಟ್ಟು ಅವೈಜ್ಞಾನಿಕವಾಗಿ ಚಪ್ಪಾಳೆ ಮತ್ತು ದೀಪ ಬೆಳಗಿಸುವದು ಸರಿಯಾದ ಕ್ರಮವಲ್ಲ. ಇದು ವೈಜ್ಞಾನಿಕ ಕ್ರಮವಾಗಿದ್ದರೆ ಖಂಡಿತ ಅದನ್ನು ಸ್ವಾಗತಿಸಬಹುದು ಎಂದು ಸತೀಶ ಜಾರಕಿಹೊಳಿ ಹೇಳಿದರು. ನಗರಸಭೆ ಸದಸ್ಯರು, ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.