ಸರಕಾರಿ ಸೇವೆ ಜನರ ಮನೆ ಬಾಗಿಲಿಗೆ
ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ
Team Udayavani, Apr 17, 2022, 1:36 PM IST
ರಾಮದುರ್ಗ: ದಲ್ಲಾಳಿಗಳ ಹಾವಳಿ ತಪ್ಪಿಸಿ ಸರಕಾರದ ಯೋಜನೆ ಸರ್ವರಿಗೂ ತಲುಪಿಸುವ ಉದ್ದೇಶದಿಂದ ಗ್ರಾಮ ವಾಸ್ತವ್ಯದ ಮೂಲಕ ಜನರ ಸಮಸ್ಯೆ ಆಲಿಸಿ ಅವುಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲಾಗುತ್ತಿದೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.
ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಜರುಗಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಜನತೆ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆ ಅನುಷ್ಠಾನಕ್ಕೆ ತಂದು ಅವುಗಳನ್ನು ನೇರವಾಗಿ ಜನರಿಗೆ ತಲುಪುವಂತೆ ಮಾಡುತ್ತಿವೆ ಎಂದು ಹೇಳಿದರು.
ಗ್ರಾಮೀಣ ಜನತೆಗೆ ಕುಡಿಯುವ ನೀರು ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಜಲಜೀವನ್ ಮಿಷನ್ ಯೋಜನೆ ಮೂಲಕ ಮನೆ ಮನೆಗೆ ನಳಗಳ ಜೋಡಣೆ ಮಾಡುವ ಮೂಲಕ 150 ಕೋಟಿ ಅನುದಾನದಲ್ಲಿ 137 ಹಳ್ಳಿಗಳಿಗೆ ಕಾಮಗಾರಿ ಕೈಗೊಳ್ಳಲಾಗಿದೆ. ಅಲ್ಲದೇ 340 ಕೋಟಿ ಅನುದಾನದಲ್ಲಿ ಮುನವಳ್ಳಿ ಡ್ಯಾಂನಿಂದ ಪ್ರತ್ಯೇಕ ಕುಡಿಯುವ ನೀರು ತರಲು ಯೋಜನೆಗೆ ಸರಕಾರ ಅನುಮೋದನೆ ನೀಡಿದ್ದು, ಸದ್ಯದಲ್ಲಿಯೇ ಟೆಂಡರ್ ಕರೆಯಲಾಗುವುದು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ| ಎಂ.ಜಿ. ಹಿರೇಮಠ ಮಾತನಾಡಿ, ಗ್ರಾಮ ವಾಸ್ತವ್ಯದ ಮೂಲಕ ಜನರ ಯಾವ ಸಮಸ್ಯೆಗಳಿದ್ದರೂ ಅವುಗಳನ್ನು ಸ್ವೀಕರಿಸಿ ಪರಿಹರಿಸಲಾಗುವುದು. ಅಲ್ಲದೆ ಈ ಕಾರ್ಯಕ್ರಮದ ಮೂಲಕ ಗ್ರಾಮದ ಎಸ್‌ಸಿ ಹಾಗೂ ಎಸ್‌ಟಿ ಕಾಲೋನಿಗಳ ಭೇಟಿ, ಅಂಗನವಾಡಿ ಕೇಂದ್ರಗಳ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಲಾಗುವುದು ಎಂದು ಹೇಳಿದರು.
ಗ್ರಾಪಂ ಅಧ್ಯಕ್ಷೆ ನಿರ್ಮಲಾ ಖಾನಪೇಠ ಅಧ್ಯಕ್ಷತೆ ವಹಿಸಿದ್ದರು. ಗ್ರಾಮದ ಮುಖಂಡ ಮಲ್ಲಿಕಾರ್ಜುನ ಕೊಪ್ಪದ, ಅಪರ ಜಿಲ್ಲಾಧಿಕಾರಿ ಅಶೋಕ ದುರಗುಂಟಿ, ಜಂಟಿ ಕೃಷಿ ನಿರ್ದೇಶಕ ಎಸ್.ಎಸ್. ಪಾಟೀಲ, ಡಿಎಚ್‌ಒ ಎಸ್.ವಿ. ಮುನ್ಯಾಳ, ತಾಪಂ ಇಒ ಪ್ರವೀಣ ಸಾಲಿ, ಸರಕಾರಿ ನೌಕರ ಸಂಘದ ತಾಲೂಕಾಧ್ಯಕ್ಷ ರಮೇಶ ಅರಕೇರಿ, ಹೆಸ್ಕಾ ಎಇಇ ಕಿರಣ ಸಣ್ಣಕ್ಕಿ ಸೇರಿದಂತೆ ತಾಲೂಕು ಮಟ್ಟದ ಇತರ ಅಧಿಕಾರಿಗಳು ಇದ್ದರು.
ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ಸ್ವಾಗತಿಸಿದರು. ಜಿ.ಎಂ. ಹುಲ್ಲೂರ ನಿರೂಪಿಸಿ, ವಂದಿಸಿದರು.
ಅದ್ಧೂರಿ ಮೆರವಣಿಗೆ: ಸಾಲಹಳ್ಳಿ ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ| ಎಂ.ಜಿ. ಹಿರೇಮಠ ಹಾಗೂ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿ, ತೆರೆದ ವಾಹನದ ಮೂಲಕ ಆನೆಯ ಮೆರವಣಿಗೆಯೊಂದಿಗೆ ಮಹಿಳೆಯರ ಕುಂಭ ಹಾಗೂ ವಿವಿಧ ವಾದ್ಯ ಮೇಳಗಳೊಂದಿಗೆ ಅದ್ಧೂರಿಯಾಗಿ ವೇದಿಕೆಗೆ ಗ್ರಾಮಸ್ಥರು ಕರೆತರುವಲ್ಲಿ ಮುಂದಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.