Belagavi; ಸರಕಾರ ಪ್ರವಾಹ ಸಂತ್ರಸ್ತರ ಜೊತೆಗಿದೆ: ಲಕ್ಷ್ಮೀ ಹೆಬ್ಬಾಳಕರ್
Team Udayavani, Aug 3, 2024, 7:14 PM IST
ಬೆಳಗಾವಿ: ಸರಕಾರ ಪ್ರವಾಹ ಸಂತ್ರಸ್ತರ ಜೊತೆಗಿದೆ. ಅವರಿಗೆ ಎಲ್ಲ ರೀತಿಯಲ್ಲೂ ನೆರವು ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸುಳಗಾ (ಯು), ಅತವಾಡ, ಬಸುರ್ತೆ, ಬೆಕ್ಕಿನಕೇರಿ, ಬೆಳಗುಂದಿ, ಸೋನೋಲಿ, ಕೊನೆವಾಡಿ, ರಾಕಸಕೊಪ್ಪ, ಯಳೆಬೈಲ್, ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಮನೆಗಳ ವೀಕ್ಷಣೆ ಮಾಡಿದರು.
ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಸಾಕಷ್ಟು ಸಮಸ್ಯೆಯಾಗಿದೆ. ಅನೇಕ ಕಡೆ ಮನೆ ಬಿದ್ದಿದೆ, ಆಸ್ತಿಪಾಸ್ತಿ ಹಾನಿಯಾಗಿದೆ. ಎಲ್ಲರಿಗೂ ಸೂಕ್ತ ರೀತಿಯಲ್ಲಿ ಪರಿಹಾರ ಒದಗಿಸಲಾಗುವುದು. ಖಾನಾಪುರ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಸ್ವತಃ ಭೇಟಿ ನೀಡಿ ಸಮೀಕ್ಷೆ ನಡೆಸಿದ್ದು, ಎರಡೂ ಕ್ಷೇತ್ರ ಸೇರಿ 50ಕ್ಕೂ ಹೆಚ್ಚು ಮನೆಗಳು ಬಿದ್ದಿವೆ ಎಂದರು.
ಈ ಕುರಿತು ಕಂದಾಯ ಸಚಿವರಿಗೆ ಸಮಗ್ರ ವರದಿ ನೀಡಲಾಗುವುದು. ಸಂತ್ರಸ್ತರಿಗೆ ನ್ಯಾಯ ಒದಗಿಸಲಾಗುವುದು ಎಂದು ಸಚಿವ ಹೆಬ್ಬಾಳ್ಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್ ಪತ್ತೆ: ಪೊಲೀಸರಿಂದ ತನಿಖೆ ಚುರುಕು
Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.