ಸಿದ್ದರಾಮಯ್ಯನವರ ಭವಿಷ್ಯ ಎಂದಿಗೂ ಸತ್ಯವಾಗುವುದಿಲ್ಲ: ಗೋವಿಂದ ಕಾರಜೋಳ
Team Udayavani, Aug 15, 2021, 1:08 PM IST
ಬೆಳಗಾವಿ: ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದಾಗಿನಿಂದ ಸಿದ್ದರಾಮಯ್ಯನವರು ಭವಿಷ್ಯ ಹೇಳಿಯೇ ಹೇಳುತ್ತಿದ್ದಾರೆ. ಆದರೆ ಅವರ ಭವಿಷ್ಯ ಯಾವತ್ತೂ ಸತ್ಯವಾಗುವುದಿಲ್ಲ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದರು.
ರವಿವಾರ ಬೆಳಗಾವಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿದ್ದರಾಮಯ್ಯರ ಭವಿಷ್ಯ ನಿಜ ಆಗುವುದಿಲ್ಲ. ಹೀಗಾಗಿ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅವಧಿ ಪೂರ್ಣಗೊಳಿಸುತ್ತದೆ ಎಂದರು.
ಅದೇ ರೀತಿ ಮುಂದೆ 2023ರ ಚುನಾವಣೆಯಲ್ಲಿಯೂ ಸ್ವಂತ ಬಲದ ಮೇಲೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ:ಬೊಮ್ಮಾಯಿ ಸರ್ಕಾರದ ಪೂರ್ಣಾವಧಿ ಬಗ್ಗೆ ಅನುಮಾನಬೇಡ: ಎಸ್. ಟಿ.ಸೋಮಶೇಖರ್
ಸರ್ಕಾರದಲ್ಲಿ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹಸ್ತಕ್ಷೇಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಅಂತಹ ಯಾವುದೇ ಬೆಳವಣಿಗೆ ಇಲ್ಲ. ಬೊಮ್ಮಾಯಿ ಅವರು ಅನುಭವಿಯಾಗಿದ್ದು ಒಳ್ಳೆಯ ಆಡಳಿತ ನೀಡುತ್ತಾರೆ ಎಂದರು.
ಕಳೆದ ಕೆಲವು ದಿನಗಳಿಂದ ಸಿ.ಟಿ.ರವಿ ಹಾಗೂ ಪ್ರಿಯಾಂಕ ಖರ್ಗೆ ಅವರು ನೀಡುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಯಾರೇ ಆಗಲಿ ನಮ್ಮನ್ನು ಅಗಲಿ ಹೋಗಿರುವವರ ಬಗ್ಗೆ ಇಲ್ಲ ಸಲ್ಲದ ಮಾತುಗಳನ್ನು ಆಡಬಾರದು. ಸಾರ್ವಜನಿಕ ಜೀವನದಲ್ಲಿ ಇರಬೇಕಾದರೆ ನಮ್ಮಿಂದ ಒಳ್ಳೆಯ ಕೆಲಸಗಳು ಆಗುತ್ತವೆ ಎಂದರು. ಕೆಟ್ಟ ಕೆಲಸಗಳು ಆಗಿರುತ್ತವೆ. ನಾವು ಸಂಸ್ಕೃತಿಗೆ ಧಕ್ಕೆ ಬರುವಂತಹ ಭಾಷೆಯನ್ನು ಬಳಸಬಾರದು ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.