ಮೃಷ್ಟಾನ್ನದ ತುತ್ತು-ಹಾಜರಾತಿಗಿಲ್ಲ ಕುತ್ತು


Team Udayavani, Nov 4, 2020, 9:14 PM IST

bg-tdy-1

ತೆಲಸಂಗ: ಸರ್ಕಾರಿ ಶಾಲೆಗಳು ಮತ್ತು ಅಲ್ಲಿನ ಬಿಸಿಯೂಟವೆಂದರೆ ಮೂಗು ಮುರಿಯುವ ದಿನ ಇದು. ಅಂತಹದರಲ್ಲಿ ಇಲ್ಲಿಯ ಎರಡು ಶಾಲೆಯ ಶಿಕ್ಷಕರು ರುಚಿಕಟ್ಟಾದ ಬಿಸಿಯೂಟ ಮಾಡಿ ಬಡಿಸುವುದರಲ್ಲಿ ಮಾದರಿ ಕೆಲಸ ಮಾಡಿದ್ದಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಮಕ್ಕಳ ಹಾಜರಾತಿ ಹೆಚ್ಚಿಸುವಲ್ಲಿ ಸಫಲರಾಗಿದ್ದಾರೆ.

ಮೃಷ್ಟಾನ್ನ ಭೋಜನ ಮಾಡಿ ಮಕ್ಕಳಿಗೆ ಉಣಬಡಿಸುವ ಮಹತ್ವದ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬಾಡಗಿ ಗ್ರಾಮದ

ಮುಧೋಳ ತೋಟದ ವಸತಿ ಸರ್ಕಾರಿಪ್ರಾಥಮಿಕ ಕನ್ನಡ ಶಾಲೆ ಮತ್ತು ಅರಟಾಳ ಗ್ರಾಮದ ಮಾಳಿಂಗರಾಯನ ತೋಟದ ವಸತಿ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕರು ಪಾಲಕರ ಹೊಗಳಿಕೆಗೆ ಪಾತ್ರರಾಗಿದ್ದಾರೆ. ಕಾನ್ವೆಂಟ್‌ಗಳಿಗೆ ಸಡ್ಡು ಹೊಡೆಯುವಂತೆ ಕೆಲಸ ಮಾಡುತ್ತಿದ್ದಾರೆ.

ಸರ್ಕಾರ ಮಕ್ಕಳಿಗೆ ಕೊಡುವ ಧಾನ್ಯ-ಸಾಮಗ್ರಿಗಳಲ್ಲಿಯೇ ವಿಭಿನ್ನ ಊಟ ತಯಾರಿಸಿ ನೀಡಬಹುದು ಎಂಬುದಕ್ಕೆ ಶಾಲೆಗಳುನಿದರ್ಶನವಾಗಿವೆ. ವಾರದಲ್ಲಿ ಒಂದೊಂದು ದಿನ ಇಡ್ಲಿ, ಬಜಿ, ಜಾಮೂನ್‌, ದೋಸೆ ಹೀಗೆ ವಿಶಿಷ್ಟ ಅಡುಗೆ ಮಾಡುತ್ತಿದ್ದು, ಮಕ್ಕಳ ಸಂಖ್ಯೆಯೂ ಹೆಚ್ಚಿದೆ. ಶಾಲೆಯಲ್ಲಿ ಓದುವ ಯಾವುದೇ ಮಗುವಿನ ಜನ್ಮದಿನ ಇದ್ದರೆ ಬಿಸಿಯೂಟದಲ್ಲಿ ವಿಶೇಷ ಖಾದ್ಯ ಮತ್ತು ಸಸಿ ನೆಡುವ ಕಾರ್ಯಕ್ರಮ ಮಾಡುತ್ತಾರೆ.

ಇಲ್ಲಿಯ ರೈತ, ಕೂಲಿಕಾರ್ಮಿಕರ ಮಕ್ಕಳಿಗೆ ಅಕ್ಷರ ದಾಸೋಹದೊಂದಿಗೆ ಅನ್ನ ದಾಸೋಹವನ್ನು ಶಿಕ್ಷಕರು ಅಚ್ಚುಕಟ್ಟಾಗಿ ನಡೆಸಿಕೊಂಡು ಬಂದಿದ್ದು, ಕನ್ನಡಕ್ಕಾಗಿ ಅಳಿಲು ಸೇವೆ ಸಲ್ಲಿಸುತ್ತಿದ್ದಾರೆ. ಸಮಯಪಾಲನೆ, ಮೈದಾನ ನಿರ್ಮಾಣ, ಸ್ವತ್ಛ ಶೌಚಾಲಯ, ಗುಣಮಟ್ಟದ ಶಿಕ್ಷಣ, ಗಣಕಯಂತ್ರದ ಶಿಕ್ಷಣ ಹೀಗೆ ವಿಭಿನ್ನ ಪ್ರಯೋಗವನ್ನು ಅಚ್ಚುಕಟ್ಟಾಗಿ ಮಾಡುತ್ತಿರುವುದು ಮಕ್ಕಳ ಹಾಜರಾತಿಗೆ ಕಾರಣವಾಗಿದೆ ಎನ್ನುತ್ತಾರೆ ಇಲ್ಲಿಯ ಶಿಕ್ಷಕರು.

ನಮ್ಮಿಂದ ಅನ್ನದಾನ ಮಾಡಲಾಗದಿದ್ದರೂ ಸರ್ಕಾರ ಕೊಡುವುದನ್ನಾದರೂ ಪ್ರಾಮಾಣಿಕವಾಗಿ ಮಾಡುವ ಮೂಲಕ ಆತ್ಮಸಾಕ್ಷಿ ಮೆಚ್ಚುವ ಕೆಲಸ ಮಾಡುತ್ತಿದ್ದೇವೆ. ಇದರಿಂದ ನಮ್ಮ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚುವುದಕ್ಕೆ ಕಾರಣವಾಗಿದ್ದು, ವಿಭಿನ್ನ ಪ್ರಯೋಗಗಳನ್ನು ಮಾಡಿ ಕನ್ನಡ ಶಾಲೆಗಳ ಉಳಿವಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ.  –ಯಾಸೀನ ಕರಜಗಿ, ಶಿಕ್ಷಕ, ಅರಟಾಳ

ವಿಶಿಷ್ಟ ಬಿಸಿಯೂಟ ತಯಾರಿಕೆಗೆ ಹೆಚ್ಚಿಗೆ ಹಣ ಬೇಕಿಲ್ಲ. ಸರ್ಕಾರ ಕೊಡುವ ಹಣವೇ ಸಾಕಾಗುತ್ತದೆ. ಮಾಡುವ ಇಚ್ಛಾಶಕ್ತಿ ಇದ್ದರೆ ಇದೆಲ್ಲ ಸುಲಭ ಸಾಧ್ಯ. ನಾವೇನು ಮನೆಯಿಂದ ತಂದು ಮಾಡುವುದಿಲ್ಲ. ಸರ್ಕಾರ ಕೊಡುತ್ತದೆ, ನಾವು ವ್ಯವಸ್ಥಿತವಾಗಿ ಮಾಡಿ ಬಡಿಸುತ್ತೇವೆ. – ಸುರೇಶ ಕುಂಬಾರ, ಶಿಕ್ಷಕ, ಬಾಡಗಿ

ಟಾಪ್ ನ್ಯೂಸ್

MM-Singh-Sonia

Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್‌ ಸಿಂಗ್‌

BJP-BRS

Party Donation: ಬಿಜೆಪಿಗೆ 2,244 ಕೋ.ರೂ. ದೇಣಿಗೆ ಕಳೆದ ಬಾರಿಗಿಂತ ಶೇ. 212 ಏರಿಕೆ

MM-Singh1

Tribute Dr.Singh: ಡಾ.ಮನಮೋಹನ್‌ ಸಿಂಗ್‌ ಆಡಳಿತದ ಜನಪರ ಯೋಜನೆಗಳು

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh-Sonia

Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್‌ ಸಿಂಗ್‌

BJP-BRS

Party Donation: ಬಿಜೆಪಿಗೆ 2,244 ಕೋ.ರೂ. ದೇಣಿಗೆ ಕಳೆದ ಬಾರಿಗಿಂತ ಶೇ. 212 ಏರಿಕೆ

MM-Singh1

Tribute Dr.Singh: ಡಾ.ಮನಮೋಹನ್‌ ಸಿಂಗ್‌ ಆಡಳಿತದ ಜನಪರ ಯೋಜನೆಗಳು

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.