ಪತ್ರಕರ್ತರಿಗೆ ಅನುದಾನ ಮೀಸಲಿಡಂತೆ ಒತ್ತಾಯ
Team Udayavani, Mar 4, 2020, 1:56 PM IST
ಬೆಳಗಾವಿ: ಪತ್ರಕರ್ತರಿಗೆ ಆಪತ್ಕಾಲದಲ್ಲಿ ಅನುಕೂಲವಾಗುವ ನಿಟ್ಟಿನಲ್ಲಿ ಮಹಾನಗರಪಾಲಿಕೆಯ 2020-21 ನೇ ಸಾಲಿನ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿ ಬೆಳಗಾವಿ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮಂಗಳವಾರ ಪಾಲಿಕೆ ಆಡಳಿತಾಧಿಕಾರಿ ಮತ್ತು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಪತ್ರಕರ್ತರು ತಮ್ಮ ದೈನಂದಿನ ಒತ್ತಡಗಳ ನಡುವೆಯೂ ಪತ್ರಿಕಾ ಧರ್ಮಕ್ಕೆ ಧಕ್ಕೆ ಬಾರದ ಹಾಗೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದ್ದರಿಂದ ಪತ್ರಕರ್ತರ ಭವಿಷ್ಯ ಹಾಗೂ ಆಪತ್ಕಾಲೀನವಾಗಿ ಅನುಕೂಲವಾಗುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಾಲ್ತಿಯಲ್ಲಿ ಇರುವಂತೆ ಪತ್ರಕರ್ತರ ನಿಧಿಗೆ ಕನಿಷ್ಠ 30 ಲಕ್ಷ ರೂ.ಗಳನ್ನು ಈ ಬಾರಿಯ ಮಹಾನಗರ ಪಾಲಿಕೆಯ ಮುಂಗಡ ಪತ್ರದಲ್ಲಿ ಮೀಸಲಿರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಹಣವನ್ನು ಪತ್ರಕರ್ತರು ಅಪಘಾತಕ್ಕೀಡಾದಲ್ಲಿ, ಅಕಾಲಿಕವಾಗಿ ಅಥವಾ ವಯೋಸಹಜವಾಗಿ ಮರಣ ಹೊಂದಿದಲ್ಲಿ ಇಲ್ಲವೇ ಗಂಭೀರ ಸ್ವರೂಪದ ಅನಾರೋಗ್ಯಕ್ಕೆ ತುತ್ತಾದಲ್ಲಿ ಬಳಸಲು ಅನುಕೂಲವಾಗುವಂತೆ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೆಳಗಾವಿ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀಶೈಲ ಮಠದ, ಕೋಶಾಧ್ಯಕ್ಷ ರಾಯಣ್ಣ. ಆರ್.ಸಿ., ಕಾರ್ಯದರ್ಶಿ ಸುರೇಶ ನೇರ್ಲಿ, ಜಂಟಿ ಕಾರ್ಯದರ್ಶಿಗಳಾದ ಸುನೀಲ ಪಾಟೀಲ, ಜಗದೀಶ ವಿರಕ್ತಮಠ, ಖಜಾಂಚಿಗಳಾದ ಮಂಜುನಾಥ ಕೋಳಿಗುಡ್ಡ, ಭರಮಗೌಡ ಪಾಟೀಲ, ಸದಸ್ಯರಾದ ರಾಜಶೇಖರಯ್ನಾ ಹಿರೇಮಠ, ಪಾರೇಶ ಬೋಸಲೆ, ಇಮಾಮ ಹುಸೇನ್ ಗೂಡನವರ, ಅಶೋಕ ಮಗದುಮ್ಮ, ಲಗಮಣ್ಣ ಸಣ್ಣಲಚ್ಚಪ್ಪಗೋಳ, ಮಾಲತೇಶ ಮಟಿಗೇರ, ಅಮೃತ ಬಿರ್ಜೆ, ಆಶಿಸ್‌ಕೃಷ್ಣ ಪೆಂಡಸೆ, ಗಜಾನನ ಮುಚ್ಚಂಡಿಕರ, ಏಕನಾಥ ಅಗಸಿಮನಿ, ಸೋಮು, ಮೈಲಾರಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.