![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 30, 2022, 6:26 PM IST
ಬೆಳಗಾವಿ: ಹೆಣ್ಣು ಮಕ್ಕಳಿಗೆ ಅವಕಾಶ ದೊರೆತಲ್ಲಿ ಕುಟುಂಬ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಅತೀ ಮಹತ್ವದ ಪಾತ್ರವನ್ನು ನಿರ್ವಹಿಸಬಲ್ಲರು. ಬಾಲ್ಯವಿವಾಹ, ಮಕ್ಕಳ ಅನೈತಿಕ ಸಾಗಾಣಿಕೆ, ಅನ್ಯಾಯ, ಅತ್ಯಾಚಾರದಂತಹ ಸಮಸ್ಯೆಗಳು ಮಹಿಳೆಯರಿಗೆ ತಮ್ಮ ಸಾಮರ್ಥ್ಯವನ್ನು ಹೊರಹಾಕಲು ಅಡಚಣೆಯಾಗುತ್ತಿವೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜುನಾಥ ಪರಸನ್ನವರ ಹೇಳಿದರು.
ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹುಕ್ಕೇರಿ, ಮಹಿಳಾ ಶಕ್ತಿ ಕೇಂದ್ರ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಹುಕ್ಕೇರಿ ತಾಲೂಕಿನ ಹುನ್ನೂರ ಗ್ರಾಮದ ವಿಠಲ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಬೇಟಿ ಬಚಾವೋ ಬೇಟಿ ಪಢಾವೋ ಜಾಗೃತಿ ಅಭಿಯಾನ ಹಾಗೂ ಉತ್ತಮ ಕಾರ್ಯ ನಿರ್ವಹಣೆ ತೋರಿದ ಕಿಶೋರಿಯರಿಗೆ ಮತ್ತು ಸಂಘಗಳಿಗೆ ಸ್ಟಾರ್ ಕಿಶೋರಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಮಹಿಳಾ ಶಕ್ತಿ ಕೇಂದ್ರದ ಮಹಿಳಾ ಕಲ್ಯಾಣಾಧಿಕಾರಿ ಶಿಲ್ಪಾ ದೇಸಾಯಿ ಮಾತನಾಡಿ, ಹೆಣ್ಣುಮಕ್ಕಳಿಗೆ ಯೋಗ್ಯ ಶಿಕ್ಷಣ, ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಪಾಲಕರು ಗಮನಹರಿಸಬೇಕು. ಉತ್ತರ ಭಾರತಕ್ಕೆ ಹೋಲಿಸಿದಾಗ ಶಿಶು ಭ್ರೂಣ ಹತ್ಯೆ, ಮಹಿಳೆ ಮೇಲೆ ಆಗುವ ದೌರ್ಜನ್ಯಗಳ ಸಂಖ್ಯೆ ನಮ್ಮಲ್ಲಿ ಕಡಿಮೆ ಇವೆ. ಬೇಟಿ ಬಚಾವೋ ಬೇಟಿ ಪಢಾವೋ ಕಾರ್ಯಕ್ರಮ ಹೆಣ್ಣು ಮಕ್ಕಳ ಬದುಕಿನಲ್ಲಿ ಅನೇಕ ಬದಲಾವಣೆ ತಂದಿದೆ ಎಂದರು.
ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎನ್.ಎಸ್ .ನಾಗಲೋಟಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ದೊರಕುವ
ಯೋಜನೆಗಳ ಬಗ್ಗೆ ವಿವರಿಸಿದರು. ಮಹಿಳಾ ಕಲ್ಯಾಣ ಸಂಸ್ಥೆಯ ಸಂಯೋಜಕ ಎಂ.ಎಸ್. ಚೌಗಲಾ ಕೌಟುಂಬಿಕ ಸಲಹಾ ಕೇಂದ್ರ, ಸಾಂತ್ವನ ಮಹಿಳಾ ಸಹಾಯವಾಣಿ, ಉಜ್ವಲಾ ಪುನರ್ವಸತಿ ಕೇಂದ್ರದ ಚಟುವಟಿಕೆಗಳ ಬಗ್ಗೆ ವಿವರಿಸಿದರು.
ಗೌರವ ಕಾರ್ಯದರ್ಶಿ ವೈಜಯಂತಿ ಚೌಗಲಾ, ಆಡಳಿತ ಮಂಡಳಿ ಸದಸ್ಯೆ ಶಶಿಕಲಾ ಮಾಳಖೇಡ, ಮೇಲ್ವಿಚಾರಕಿ ಅಶ್ವಿನಿ, ಜಿಲ್ಲಾ ಸಂಯೋಜಕರಾದ ಕವಿತಾ ಹೊಸಮನಿ, ಪ್ರಿಯಾಂಕಾ ಖೋತ ಉಪಸ್ಥಿತರಿದ್ದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.