ಹಸಿರು ಪಟಾಕಿ ಕಾಗದಕ್ಕಷ್ಟೇ ಸೀಮಿತ

Team Udayavani, Oct 27, 2019, 12:13 PM IST

bg-tdy-1

ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿಗೆ ಜನರು ಸಿಡಿಮದ್ದು, ಪಟಾಕಿ ಸಿಡಿಸಿ ಹಬ್ಬ ಆಚರಿಸುತ್ತಿರುತ್ತಾರೆ. ಇದರಿಂದ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿರುವುದನ್ನು ಮನಗಂಡ ಸರ್ಕಾರ ಹಸಿರು ಪಟಾಕಿಗಳ ಮಾರಾಟಕ್ಕೆ ಆದೇಶ ಹೊರಡಿಸಿದೆ. ಆದರೆ ಇನ್ನೂವರೆಗೆ ಮಾರುಕಟ್ಟೆಯಲ್ಲಿ ಲಭ್ಯವಿಲ್ಲದ ಹಸಿರು ಪಟಾಕಿ ಸದ್ಯ ಕಾಗದಕ್ಕಷ್ಟೇ ಸೀಮಿತೊಂಡಿದೆ.

ದೀಪಾವಳಿ ಹಬ್ಬ ಬೆಳಕಿನ ಹಬ್ಬ ಆಗಿರಲಿ ಎಂದು ಜನರು ಪಟಾಕಿಗಳನ್ನು ಹೊಡೆದು ಸಂಭ್ರಮಿಸುತ್ತಾರೆ. ಈ ಸಲ ಕೇಂದ್ರ ಸರ್ಕಾರ ಹಸಿರು ಪಟಾಕಿಗಳನ್ನು ಮಾರಾಟಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇದರಿಂದ ಪರಿಸರ ಮಾಲಿನ್ಯ ಆಗುವುದಿಲ್ಲ. ರಾಸಾಯನಿಕ ಪದಾರ್ಥಗಳನ್ನು ಬಳಸದೇ ತಯಾರಿಸಿರುವ ಈ ಪಟಾಕಿಯಿಂದ ವಾಯು ಮಾಲಿನ್ಯ ತಡೆಯಬಹುದು. ಈಗಾಗಲೇ ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದ್ದರೂ ಬೆಳಗಾವಿಯ ಮಾರುಕಟ್ಟೆಗಳಲ್ಲಂತೂ ಇನ್ನೂ ಇವು ಸಿಗುತ್ತಿಲ್ಲ. ಹಸಿರು ಪಟಾಕಿಗಳಲ್ಲಿ ಯಾವುದೇ ರಾಸಾಯನಿಕ ಇರುವುದಿಲ್ಲ. ಬೇರಿಯಮ್‌ ಸಲ್ಫೆಟ್‌ ಬಳಕೆ ಮಾಡಿದ್ದರಿಂದ ವಾಯು ಮಾಲಿನ್ಯ ಆಗುವುದಿಲ್ಲ. ಹೀಗಾಗಿ ಸರ್ಕಾರ ಇದನ್ನೇ ಕಟ್ಟುನಿಟ್ಟಾಗಿ ಮಾರಾಟ ಮಾಡುವಂತೆ ಆದೇಶಿಸಿದೆ. ಆದರೆ ಬೆಳಗಾವಿಯಲ್ಲಿರುವ ಸುಮಾರು 30ಕ್ಕೂ ಹೆಚ್ಚು ಲೈಸನ್ಸ್‌ ಹೊಂದಿರುವ ಅಂಗಡಿಗಳಲ್ಲಿ ಹಸಿರು ಪಟಾಕಿಗಳು ಸಿಗುತ್ತಿಲ್ಲ.

ಹಳೆಯ ಪಟಾಕಿಗಳದ್ದೇ ಸದ್ದು: ಕೆಲವೇ ದಿನಗಳ ಹಿಂದೆಯಷ್ಟೇ ಸರ್ಕಾರದ ಆದೇಶ ಬಂದಿರುವುದರಿಂದ ನಾವು ಹಳೆಯ ಪಟಾಕಿಗಳನ್ನೇ ಖರೀದಿಸಿದ್ದೇವೆ. ಜತೆಗೆ ಕಳೆದ ವರ್ಷದ ಸಂಗ್ರಹ ಕೂಡ ನಮ್ಮ ಬಳಿ ಇದೆ. ಈಗ ದಿಢೀರ್‌ ಆದೇಶ ಹೊರಡಿಸಿದರೆ ಏನು ಮಾಡುವುದು. ಈ ವರ್ಷ ಮಳೆ ಹಾಗೂ ಪ್ರವಾಹದಿಂದಾಗಿ ಮಾರುಕಟ್ಟೆ ಅಷ್ಟೊಂದು ಜೋರು ಪಡೆದಿಲ್ಲ. ಮುಂದಿನ ಗಣಪತಿ ಹಬ್ಬದಿಂದಲೇ ಈ ಆದೇಶ ಜಾರಿ ಆಗಬಹುದು ಎನ್ನುತ್ತಾರೆ ಪಟಾಕಿ ವ್ಯಾಪಾರಸ್ಥರು.

ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್‌ ಸಂಶೋಧನಾ ಕೇಂದ್ರದವರು ಹಸಿರು ಪಟಾಕಿಯನ್ನು ರೂಪಿಸಿದ್ದಾರೆ. ಪಟಾಕಿ ಸಿಡಿ ಮದ್ದುಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿ ಬೇರಿಯಮ್‌ ಸಲ್ಫೆಟ್‌ ಬಳಕೆ ಮಾಡಿ ಪಟಾಕಿಗಳನ್ನು ತಯಾರಿಸಿದ್ದಾರೆ. ಈಗಾಗಲೇ ದೇಶಾದ್ಯಂತ ಇವು ಕೆಲ ಮಾರುಕಟ್ಟೆಗಳಲ್ಲಿ ಲಭ್ಯ ಇವೆ. ಕರ್ನಾಟಕದಲ್ಲಿ ಈ ಬಗ್ಗೆ ಹೆಚ್ಚು ಜಾಗೃತಿ ಇಲ್ಲದ್ದಕ್ಕೆ ಸಂಗ್ರಹ ಇಲ್ಲದಂತಾಗಿದೆ.

ಅರಿವು ಕಾರ್ಯ: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಶಾಲಾ-ಕಾಲೇಜುಗಳಲ್ಲಿ ಅರಿವು ಮೂಡಿಸಲಾಗುತ್ತಿದೆ. ಪರಿಸರ ಮಾಲಿನ್ಯ ಆಗದಂತೆ ತಡೆಯಲು ಹಸಿರು ಪಟಾಕಿಗಳ ಬಳಕೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಈ ಜಾಗೃತಿ ಕಾರ್ಯಕ್ರಗಳು ನಡೆದರೆ ಸಂಪೂರ್ಣವಾಗಿ ಹಸಿರು ಪಟಾಕಿಗಳೇ ಮಾರುಕಟ್ಟೆಯಲ್ಲಿ ಲಭ್ಯ ಆಗುವುದರ ಜತೆಗೆ ಜನರೂ ಇವುಗಳನ್ನೇ ಖರೀದಿಸಿ ಪರಿಸರ ಸಂರಕ್ಷಣೆಗೆ ಕೈ ಜೋಡಿಸುವುದರಲ್ಲಿ ಸಂದೇಹವಿಲ್ಲ. ನಗರದ ಕಾಲೇಜು ರಸ್ತೆಯ ಸನ್ಮಾನ ಹೊಟೇಲ್‌ ಹಿಂಬದಿ, ಮಹಾದ್ವಾರ ರೋಡ್‌ನ‌ ಮೈದಾನ, ಟಿಳಕವಾಡಿ, ಶಹಾಪುರ ಭಾಗದಲ್ಲಿ ಪಟಾಕಿ ಮಾರಾಟಗಳ ಅಂಗಡಿಗಳು ಇವೆ. ಆಸ್ಪತ್ರೆಗಳಲ್ಲಿದೆ ವ್ಯವಸ್ಥೆ: ಪಟಾಕಿ ಸೇರಿದಂತೆ ಇನ್ನಿತರ ದುರಂತ ಸಂಭವಿಸಿದರೆ ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ವಿಶೇಷವಾಗಿ ಇದಕ್ಕಾಗಿಯೇ ಯಾವುದೇ ವ್ಯವಸ್ಥೆ ಇಲ್ಲದಿದ್ದರೂ ತುರ್ತು ಪರಿಸ್ಥಿತಿಯಲ್ಲಿ ಅಗತ್ಯ ಇರುವ ವ್ಯವಸ್ಥೆ ಮಾಡಲಾಗಿದೆ. ಪಟಾಕಿಯಿಂದ ಸುಟ್ಟು ಗಾಯಗಳಾಗಿದ್ದರೆ, ಗಂಭೀರ ಗಾಯಕ್ಕೂ ವ್ಯವಸ್ಥೆ ಇದೆ ಎನ್ನುತ್ತಾರೆ ಆರೋಗ್ಯ ಇಲಾಖೆ ಅಧಿಕಾರಿಗಳು. ಪ್ರವಾಹದಿಂದ ಗಡಿ ಜಿಲ್ಲೆ ಬೆಳಗಾವಿ ನಲುಗಿದೆ. ಮಾರುಕಟ್ಟೆಯಲ್ಲಿ ಕಳೆದ ಸಲದ ದೀಪಾವಳಿಯಂತೆ ಜನಜಂಗುಳಿ ಇಲ್ಲ. ರೈತರು, ಬಡವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಹದ ಹೊಡೆತದಿಂದ ಇನ್ನೂ ಮೇಲೆ ಎದ್ದಿಲ್ಲ. ಪಟಾಕಿ ಮಾರುಕಟ್ಟೆಯಂತೂ ಸಂಪೂರ್ಣವಾಗಿಕೆಳಗೆ ಬಿದ್ದಿದ್ದು, ಇನ್ನು ಬೇರೆ ವ್ಯಾಪಾರವೂ ಅಷ್ಟಕ್ಕಷ್ಟೇ ಆಗಿದೆ. ಬಟ್ಟೆ ವ್ಯಾಪಾರ ಬಿಟ್ಟರೆ ಇನ್ನುಳಿದಕ್ಕೆ ಗ್ರಹಣ ಹಿಡಿದಂತಾಗಿದೆ.

-ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.