ಸಿರಿಧಾನ್ಯ ಬೆಳೆಯುವ ಪ್ರದೇಶ ಶೇ. 10ರಷ್ಟು ಹೆಚ್ಚಿಸಲು ಗುರಿ


Team Udayavani, Nov 23, 2017, 7:35 AM IST

K-BIREGOUDA-(3).jpg

ಬೆಳಗಾವಿ: ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯುವ ಪ್ರದೇಶವನ್ನು ಈ ವರ್ಷ 1.80 ಲಕ್ಷ ಹೆಕ್ಟೆರ್‌ನಷ್ಟು ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಸುವರ್ಣಸೌಧದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಸ್ತುತ 18 ಲಕ್ಷ ಹೆಕ್ಟೇರ್‌ನಲ್ಲಿ ಪ್ರಮುಖ ಸಿರಿಧಾನ್ಯ ಬೆಳೆಯಲಾಗುತ್ತಿದ್ದು, ಈ ವರ್ಷ ಶೇ.10ರಷ್ಟು ಪ್ರದೇಶದಲ್ಲಿ ವಿಸ್ತರಿಸಲಾಗುವುದು ಎಂದ ತಿಳಿಸಿದರು.

ಜತೆಗೆ ಇತರೆ ಸಿರಿಧಾನ್ಯ (ಅರ್ಕ, ಊರು, ನವಣೆ, ಸಾಮೆ ಸೇರಿ) ಬೆಳೆಯುವ ಪ್ರದೇಶ 40,000 ಹೆಕ್ಟೇರ್‌ಗೆ ವಿಸ್ತರಿಸಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ಇತರೆ ಸಿರಿಧಾನ್ಯ 20 ಸಾವಿರ ಹೆಕ್ಟೆರ್‌ನಲ್ಲಿ ಬೆಳೆಯಲಾಗುತ್ತಿದೆ ಎಂದರು.

ದೇಶದಲ್ಲಿ ಪಡಿತರ ಮೂಲಕ ಸಿರಿಧಾನ್ಯ ವಿತರಿಸುವ ಮೊದಲ ರಾಜ್ಯ ಕರ್ನಾಟಕ ಎನಿಸಿದೆ. ಕಟಾವಿಗೆ ಬಂದ ರಾಗಿ ಖರೀದಿಸಿ ಅಕ್ಕಿಗೆ ಬದಲಾಗಿ ರಾಗಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ರಾಗಿಗೆ ಪ್ರತಿ ಕ್ವಿಂಟಾಲ್‌ಗೆ 400 ರೂ. ಪ್ರೋತ್ಸಾಹ ಧನ ನೀಡಿ ಖರೀದಿಸಲಾಗುತ್ತಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಪಡಿತರ ಅಕ್ಕಿಯನ್ನು ಕೆ.ಜಿ.ಗೆ 32 ರೂ. ದರದಲ್ಲಿ ಪಂಜಾಬ್‌ನಿಂದ ಪೂರೈಸುತ್ತಿದೆ. ಪಡಿತರ ಮೂಲಕ ರಾಗಿ, ಜೋಳ ವಿತರಣೆಗೆ ಮುಂದಾದರೆ ಕೇಂದ್ರ ಸರ್ಕಾರಕ್ಕೆ ಪ್ರತಿ ಕೆ.ಜಿ.ಗೆ 5 ರೂ. ಉಳಿತಾಯವಾಗಲಿದ್ದು, ರಾಗಿಗೂ ಒಂದೆರಡು ರೂ. ಪ್ರೋತ್ಸಾಹ ಧನ ಹೆಚ್ಚಿಸಬಹುದಾಗಿದೆ. ಈ ಸಂಬಂಧ ಕೇಂದ್ರ ಆಹಾರ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ಹಾಪ್‌ಕಾಮ್ಸ್‌ಗಳಲ್ಲಿ ಆಗ್ಯಾìನಿಕ್‌ ಕಾರ್ನರ್‌ ಆರಂಭಿಸಿ ಸಾವಯವ, ಸಿರಿಧಾನ್ಯ ಮಾರಾಟ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸಲಾಗಿತ್ತು. ಆದರೆ, ವರ್ಗೀಕರಣ ಮತ್ತಿತರೆ ಸಮಸ್ಯೆ ತಲೆದೋರಿದ ಹಿನ್ನೆಲೆಯಲ್ಲಿ ಜೈವಿಕ್‌ ಸಂಸ್ಥೆಯ ಸಹಯೋಗದಲ್ಲಿ ಆರು ಸಿರಿಧಾನ್ಯ, ಸಾವಯವ ಮಳಿಗೆ ಆರಂಭಿಸಲಾಗಿದೆ. ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಸಾಧ್ಯವಿರುವ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.